ಮಹಾರಾಷ್ಟ್ರ | ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಥಾಣೆಯಲ್ಲಿ ಇಂಟರ್‌ನೆಟ್ ಸ್ಥಗಿತ

Date:

Advertisements

ಮಹಾರಾಷ್ಟ್ರ ಥಾಣೆ ಜಿಲ್ಲೆಯ ಬದ್ಲಾಪುರ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಶಿಶುವಿಹಾರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜನರು ಬದ್ಲಾಪುರ್ ರೈಲು ನಿಲ್ದಾಣದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ಒಂದು ದಿನದ ನಂತರ ಇಂದು(ಆಗಸ್ಟ್‌ 21) ಹೆಚ್ಚಿನ ಶಾಲೆಗಳನ್ನು ಮುಚ್ಚಲಾಗಿದೆ. ಲೈಂಗಿಕ ದೌರ್ಜನ್ಯವೆಸಗಿದ ಶಾಲೆಯ ಸಿಬ್ಬಂದಿ, ಆರೋಪಿ ಅಕ್ಷಯ್ ಶಿಂಧೆ ಪ್ರಕರಣವನ್ನು ಕೈಗೆತ್ತಿಕೊಳ್ಳದಿರಲು ಕಲ್ಯಾಣ್ ಬಾರ್ ಅಸೋಸಿಯೇಷನ್ ನಿರ್ಧರಿಸಿದೆ.

ಆಗಸ್ಟ್‌ 13 ರಂದು ನಡೆದ ಶೌಚಾಲಯದಲ್ಲಿ ಶಾಲೆಯ ಇಬ್ಬರು ಸಿಬ್ಬಂದಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ನಂತರ ಸಾವಿರಾರು ಪ್ರತಿಭಟನಾಕಾರರು ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟಿಸಿದ್ದು ಮಾತ್ರವಲ್ಲದೆ ಸ್ಥಳೀಯ ಶಾಲಾ ಕಟ್ಟಡಕ್ಕೆ ನುಗ್ಗಿದ ದಾಂಧಲೆ ಮಾಡಿದ್ದಾರೆ. ಮಂಗಳವಾರದ ಈ ಇಡೀ ಬೆಳವಣಿಗೆಯಿಂದ ಬದ್ಲಾಪುರದಲ್ಲಿ ಪರಿಸ್ಥಿತಿ ಬದಲಾಗಿದೆ.

Advertisements

ಲೈಂಗಿಕ ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ಮಾಡಿದ್ದು ಶಾಲಾ ಕಟ್ಟಡವನ್ನು ಧ್ವಂಸಗೊಳಿಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ರೈಲು ಸಂಚಾರಕ್ಕೆ ಹಳಿಗಳನ್ನು ತೆರವುಗೊಳಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತ ಭವಿಷ್ಯಕ್ಕೆ ಅಪೌಷ್ಟಿಕತೆ ಮತ್ತು ಆಹಾರ ಭದ್ರತೆಯ ಸವಾಲು

ಘಟನೆಯ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರು, ಶಿಕ್ಷಕಿ ಹಾಗೂ ಮಹಿಳಾ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.

ಮಂಗಳವಾರ ಬೆಳಗ್ಗೆ ಶಾಲೆಯ ಹೊರಗೆ ಜಮಾಯಿಸಿದ ಶಾಲಾ ಮಕ್ಕಳ ಪೋಷಕರು ಮತ್ತು ಸ್ಥಳೀಯ ನಾಗರಿಕರು, ಹಲವಾರು ಮಹಿಳೆಯರು ಮತ್ತು ರೈಲ್ವೆ ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಸ್ಥಳೀಯ ರೈಲುಗಳ ಮಾರ್ಗವನ್ನು ನಿರ್ಬಂಧಿಸಿದರು. ಮಹಿಳೆಯರು ಸೇರಿದಂತೆ ಕೆಲವು ಪ್ರತಿಭಟನಾಕಾರರು ಶಾಲೆಯ ಗೇಟ್, ಕಿಟಕಿ ಗಾಜುಗಳು, ಬೆಂಚುಗಳು ಮತ್ತು ಬಾಗಿಲುಗಳನ್ನು ಮುರಿದರು. ಘಟನೆ ನಡೆದ ಶಾಲೆಯು ಬದ್ಲಾಪುರದ ಬಿಜೆಪಿ ನಾಯಕನ ಹತ್ತಿರದ ಸಂಬಂಧಿಕರಿಗೆ ಸೇರಿದೆ.

ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ನಡೆದ ಕಲ್ಲು ತೂರಾಟದ ಘಟನೆಗಳಲ್ಲಿ ಕನಿಷ್ಠ 17 ನಗರ ಪೊಲೀಸ್ ಸಿಬ್ಬಂದಿ ಮತ್ತು ಸುಮಾರು ಎಂಟು ರೈಲ್ವೆ ಪೊಲೀಸರು ಗಾಯಗೊಂಡಿದ್ದಾರೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು 72 ಜನರನ್ನು ಬಂಧಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬದ್ಲಾಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರತಿಭಟನೆ ಮತ್ತು ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಿಸಿಪಿ ಸುಧಾಕರ ಪಠಾರೆ ಬುಧವಾರ ತಿಳಿಸಿದ್ದಾರೆ. ಪಟ್ಟಣದ ಪರಿಸ್ಥಿತಿ ಅವಲೋಕಿಸಿದ ಬಳಿಕ ಇಂಟರ್‌ನೆಟ್‌ ಸೇವೆಯನ್ನು ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X