ಬದ್ರಿನಾಥದಲ್ಲೂ ದೇಣಿಗೆ ಲೂಟಿ: ದೇವಸ್ಥಾನದ ಉದ್ಯೋಗಿ ಬಂಧನ

Date:

ಪ್ರಸಿದ್ಧ ಬದರಿನಾಥ ಧಾಮದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಮತ್ತು ದೇಣಿಗೆ ಹಣದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿದೆ. ಇದೇ ಆರೋಪದ ಮೇಲೆ ಅಮಾನತುಗೊಂಡಿರುವ ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ (BKTC) ಉದ್ಯೋಗಿ ಪ್ರಮೋದ್ ನೌಟಿಯಾಲ್ ಎಂಬಾತನನ್ನು ಚಮೋಲಿ ಪೊಲೀಸರ ವಿಶೇಷ ತನಿಖಾ ದಳ (SIT) ಬಂಧಿಸಿದೆ.

- Advertisement -

ಡೆಹ್ರಾಡೂನ್‌ನಲ್ಲಿರುವ ಆತನ ನಿವಾಸದಿಂದ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆಗಾಗಿ ಬದ್ರಿನಾಥಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ತಮ್ಮ ಮೇಲಿನ ಅಮಾನತು ಆದೇಶ ಮತ್ತು ಪೊಲೀಸ್ ಪ್ರಕರಣವನ್ನು ಪ್ರಶ್ನಿಸಿ ಪ್ರಮೋದ್ ನೌಟಿಯಾಲ್ ಉತ್ತರಾಖಂಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಜುಲೈ 16 ರಂದು ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಬಂಧನದಿಂದ ರಕ್ಷಣೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ದೇವಸ್ಥಾನ ಸಮಿತಿಗೆ (BKTC) ಉತ್ತರಿಸುವಂತೆ ಕೋರಿತ್ತು. ಆದರೆ, ವಿಚಾರಣೆಗೆ ಮೂರು ದಿನಗಳ ಮುಂಚಿತವಾಗಿಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬದ್ರಿನಾಥ ದೇವಸ್ಥಾನದಲ್ಲಿ ಭಕ್ತರು ನೀಡುವ ದೇಣಿಗೆಯನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ‘ಭೈರವ್ ಸೇನಾ’ ಸಂಸ್ಥಾಪಕ ಸಂದೀಪ್ ಖತ್ರಿ ಆರೋಪಿಸಿದ ನಂತರ ಈ ಹಗರಣ ಬೆಳಕಿಗೆ ಬಂದಿತ್ತು. ಇದು ಉತ್ತರಾಖಂಡ ರಾಜಕೀಯದಲ್ಲೂ ಭಾರಿ ಸಂಚಲನ ಮೂಡಿಸಿತ್ತು. ವಿವಾದ ತೀವ್ರಗೊಳ್ಳುತ್ತಿದ್ದಂತೆ, ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ (BKTC) ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಪ್ರಕರಣದ ತನಿಖೆಗಾಗಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ್ದರು. ಇದರ ಬೆನ್ನಲ್ಲೇ ಉತ್ತರಾಖಂಡ ರಾಜ್ಯ ಸರ್ಕಾರವೂ ಸಹ ಮೂರು ಸದಸ್ಯರ ಉನ್ನತ ಮಟ್ಟದ ಪ್ರತ್ಯೇಕ ತನಿಖಾ ಸಮಿತಿಯನ್ನು ನೇಮಿಸಿ ಆದೇಶಿಸಿತ್ತು.

ತನಿಖೆ ಆರಂಭವಾಗುತ್ತಿದ್ದಂತೆ ಸಮಿತಿಯು ಪ್ರಮೋದ್ ನೌಟಿಯಾಲ್‌ನನ್ನು ಅಮಾನತುಗೊಳಿಸಿ, ಪೊಲೀಸ್ ದೂರು ದಾಖಲಿಸಿತ್ತು.

“ಪ್ರಮೋದ್ ನೌಟಿಯಾಲ್‌ನನ್ನು ಬಂಧಿಸಿ ಚಮೋಲಿಗೆ ಕರೆತರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಎಸ್‌ಐಟಿ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಚಮೋಲಿ ಪೊಲೀಸ್ ವರಿಷ್ಠಾಧಿಕಾರಿ ಸುರ್ಜಿತ್ ಸಿಂಗ್ ಪನ್ವಾರ್ ತಿಳಿಸಿದ್ದಾರೆ.

ಈ ಹಗರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ನಿಟ್ಟಿನಲ್ಲಿ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬಂಧನಗಳಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...