‘ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ’ ಎಂಬ ಕಾನೂನಿನ ಸಾಮಾನ್ಯ ತತ್ವವು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಸಹಾಯಕ ಪ್ರೇಮ್ ಪ್ರಕಾಶ್ ಅವರಿಗೆ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಇದನ್ನು ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ವೈಯಕ್ತಿಕ ಸ್ವಾತಂತ್ರ್ಯವು ಯಾವಾಗಲೂ ನಿಯಮವಾಗಿದೆ ಅಭಿಪ್ರಾಯಪಟ್ಟಿದೆ.
ಪಿಎಂಎಲ್‌ಎ ಅಡಿಯಲ್ಲಿ ಜಾಮೀನು ನೀಡುವ ಕಠಿಣ ಷರತ್ತುಗಳು ಈ ತತ್ವವನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Bail is rule and jail is exception even in PMLA cases: Supreme Court
— Bar and Bench (@barandbench) August 28, 2024
Read story here: https://t.co/QLgTPGRoE3 pic.twitter.com/jniB4Dz2j6
