ಬಖ್ತಿಯಾರ್‌ಪುರ ಇನ್ಮುಂದೆ ‘ನಿತೀಶ್‌ಪುರ’? – ನಿತೀಶ್ ಹುಟ್ಟೂರಿನ ಹೆಸರು ಬದಲಾವಣೆಗೆ ಚಿರಾಗ್ ಪಾಸ್ವಾನ್ ಬೆಂಬಲ

Date:

ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಜನ್ಮಸ್ಥಳವಾದ ‘ಬಖ್ತಿಯಾರ್‌ಪುರ’ ನಗರವನ್ನು ‘ನಿತೀಶ್‌ಪುರ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಹಾಗೂ ಎಲ್‌ಜೆಪಿ (ಆರ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಬೆಂಬಲ ಸೂಚಿಸಿದ್ದಾರೆ.

- Advertisement -

ಎನ್‌ಡಿಎ ಮಿತ್ರಪಕ್ಷವಾದ ಹಿಂದುಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಮ್) ಅಧ್ಯಕ್ಷ ಹಾಗೂ ಸಚಿವ ಸಂತೋಷ್ ಕುಮಾರ್ ಸುಮಾನ್ ಅವರು ಪಟನಾದ ಹೊರವಲಯದಲ್ಲಿರುವ ಬಖ್ತಿಯಾರ್‌ಪುರವನ್ನು ‘ನಿತೀಶ್‌ಪುರ’ ಎಂದು ಮರುನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದನ್ನೂ ಓದಿ: ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

ಈ ಕುರಿತು ಮಾತನಾಡಿದ ಚಿರಾಗ್ ಪಾಸ್ವಾನ್, “ಇದು ಉತ್ತಮ ಸಲಹೆ. ನಿತೀಶ್ ಕುಮಾರ್ ಅವರು ಬಿಹಾರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ಥಳಕ್ಕೆ ಅವರ ಹೆಸರಿಡುವುದರಿಂದ ಮುಂದಿನ ಪೀಳಿಗೆಯೂ ಅವರ ಶ್ರಮವನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ” ಎಂದಿದ್ದಾರೆ.

ಅಲ್ಲದೆ, ಪಟನಾದಲ್ಲಿ ತಮ್ಮ ತಂದೆ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪೂರ್ಣಪ್ರಮಾಣದ ಪ್ರತಿಮೆ ಸ್ಥಾಪಿಸುವಂತೆ ಚಿರಾಗ್ ಆಗ್ರಹಿಸಿದ್ದಾರೆ. ನಿತೀಶ್ ಕುಮಾರ್, ರಾಮ್ ವಿಲಾಸ್ ಪಾಸ್ವಾನ್ ಅಥವಾ ಲಾಲೂ ಪ್ರಸಾದ್ ಯಾದವ್ ಅವರಂತಹ ನಾಯಕರ ಹೆಸರುಗಳನ್ನು ಸಾರ್ವಜನಿಕವಾಗಿ ಗೌರವಿಸುವುದರಲ್ಲಿ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಈ ಮರುನಾಮಕರಣ ಪ್ರಸ್ತಾವನೆಯಿಂದ ದೂರವುಳಿದ ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, “ನಿತೀಶ್ ಕುಮಾರ್ ಅವರು ಸ್ಥಳಗಳ ಹೆಸರುಗಳನ್ನು ಬದಲಾಯಿಸುವ ಸಂಸ್ಕೃತಿಯಲ್ಲಿ ನಂಬಿಕೆ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ ಜೆಡಿಯು ಪಕ್ಷವನ್ನು ಜೆಡಿಯು ನಿತೀಶ್ ಎಂದು ಮರುನಾಮಕರಣ ಮಾಡುವ ಬಗ್ಗೆಯೂ ಸುದ್ದಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು...