ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

Date:

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ ಹಾಗೂ ಆಕ್ಷೇಪಾರ್ಹ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಬಲ್ಲಿಯಾ ಪೊಲೀಸರು ಆರೋಪಿಯ ವಿರುದ್ಧ ಮತ್ತೊಂದು ಹೊಸ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ಅತ್ಯಾಚಾರದಂತಹ ಪ್ರಕರಣದ ಆರೋಪಿಗೆ ಇಷ್ಟೊಂದು ಸುಲಭವಾಗಿ ಜಾಮೀನು ಸಿಗುವುದರ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಆತನನ್ನು ಬಂಧಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

- Advertisement -

ಆರೋಪಿ ಜಿತೇಂದ್ರ ಯಾದವ್ ಎಂಬಾತ 28 ವರ್ಷದ ಯುವತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ. ಆ ಸಮಯದಲ್ಲಿ ಆತ ರಹಸ್ಯವಾಗಿ ಈ ಕೃತ್ಯದ ವೀಡಿಯೋವನ್ನು ರೆಕಾರ್ಡ್‌ ಮಾಡಿಕೊಂಡಿದ್ದ. ಈ ಪ್ರಕರಣದಲ್ಲಿ ಬಂಧಿತನಾಗಿದ್ದ ಆತ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರಬಂದ ನಂತರ, ಆರೋಪಿಯು ‘ಇನ್‌ಸ್ಟಾಗ್ರಾಮ್’ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸ್ವಂತ ಖಾತೆ ಹಾಗೂ ನಕಲಿ ಖಾತೆಗಳನ್ನು ಬಳಸಿ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೋಗಳನ್ನು ಅಪ್‌ಲೋಡ್ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಪಂಜಾಬ್‌ ಮಾಜಿ ಡಿಜಿಪಿ ಪುತ್ರನ ಆಕಸ್ಮಿಕ ಸಾವು; ವಿಡಿಯೋದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಈ ಸಂಬಂಧ ಸಂತ್ರಸ್ತೆಯು ನೀಡಿದ ದೂರಿನ ಆಧಾರದ ಮೇಲೆ, ಬಲ್ಲಿಯಾ ಪೊಲೀಸ್ ಠಾಣೆಯಲ್ಲಿ ಆರೋಪಿ ಜಿತೇಂದ್ರ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸ್ಥಳೀಯ ಠಾಣಾಧಿಕಾರಿ ಪ್ರವೀಣ್ ಕುಮಾರ್ ಸಿಂಗ್, “ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಷಯದ ಕುರಿತು ಸೈಬರ್ ಹಾಗೂ ಕಾನೂನು ರೀತಿಯ ತನಿಖೆಯನ್ನು ತೀವ್ರಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿಗಳಿಗೆ ಸುಲಭ ಜಾಮೀನು ವಿರುದ್ಧ ಆಕ್ರೋಶ

ಸಂತ್ರಸ್ತರ ಸುರಕ್ಷತೆಗೆ ಧಕ್ಕೆಯಾಗುವ ರೀತಿಯಲ್ಲಿ ಇಂತಹ ಗಂಭೀರ ಅಪರಾಧ ಎಸಗಿದ ಆರೋಪಿಗೆ ಸುಲಭವಾಗಿ ಜಾಮೀನು ದೊರೆತಿರುವುದಕ್ಕೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. “ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ ಮತ್ತೆ ಸಂತ್ರಸ್ತೆಯನ್ನೇ ಗುರಿಯಾಗಿಸಿಕೊಂಡು ಅವರ ಗೌರವಕ್ಕೆ ಧಕ್ಕೆ ತರುತ್ತಿರುವುದು ನಮ್ಮ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ” ಎಂದು ಎಕ್ಸ್ (ಟ್ವಿಟರ್) ಹಾಗೂ ಇನ್‌‌ಸ್ಟಾಗ್ರಾಮ್‌ಗಳಲ್ಲಿ ಬಳಕೆದಾರರು ಕಿಡಿಕಾರಿದ್ದಾರೆ.

ಸಂತ್ರಸ್ತೆಯ ಖಾಸಗಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಆರೋಪಿಯು ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾನೆ. ಆದ್ದರಿಂದ ಆತನಿಗೆ ನೀಡಲಾದ ಜಾಮೀನನ್ನು ಕೂಡಲೇ ರದ್ದುಗೊಳಿಸಿ, ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಬಲ್ಲಿಯಾ ಪೊಲೀಸರು ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಟಾಗ್‌ ಮಾಡಿ ಒತ್ತಾಯಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...