ವಲಸಿಗರ ಬಗ್ಗೆ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ: ಪ್ರತಿಭಟನೆ ವ್ಯಕ್ತಪಡಿಸಿದ ಬಾಂಗ್ಲಾದೇಶ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ ಸಂದರ್ಭ ಬಾಂಗ್ಲಾದೇಶೀಯರ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಬಾಂಗ್ಲಾದೇಶ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಬಾಂಗ್ಲಾದೇಶೀಯರ ವಿರುದ್ಧ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ಭಾರತದ ರಾಜಕಾರಣಿಗಳು ನೀಡದಂತೆ ಬಾಂಗ್ಲಾದೇಶ ಎಚ್ಚರಿಕೆ ನೀಡಿದೆ.

- Advertisement -

ಕಳೆದ ವಾರ ಜಾರ್ಖಂಡ್‌ಗೆ ಭೇಟಿ ನೀಡಿದ್ದ ಅಮಿತ್ ಶಾ ಅವರು, “ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿಜೆಪಿಯು ಪ್ರತಿಯೊಬ್ಬ ಬಾಂಗ್ಲಾದೇಶಿ ನುಸುಳುಕೋರರಿಗೆ ಪಾಠ ಕಲಿಸಲು ಅವರನ್ನು ತಲೆಕೆಳಗಾಗಿ ನೇತುಹಾಕಲಾಗುತ್ತದೆ” ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹೇಳಿಕೆಗೆ ಬಾಂಗ್ಲಾದೇಶ ಸರ್ಕಾರ ಸೋಮವಾರ ಪ್ರತಿಭಟನೆಯನ್ನು ದಾಖಲಿಸಿದೆ. ಈ ಹೇಳಿಕೆಗಳು ‘ಅತ್ಯಂತ ಶೋಚನೀಯ’ ಎಂದು ಬಾಂಗ್ಲಾದೇಶ ಹೇಳಿದೆ. ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಢಾಕಾದಲ್ಲಿರುವ ಭಾರತದ ಡೆಪ್ಯುಟಿ ಹೈಕಮಿಷನರ್‌ಗೆ ಪ್ರತಿಭಟನೆಯ ಟಿಪ್ಪಣಿಯನ್ನು ಹಸ್ತಾಂತರಿಸಿದೆ.

ಇದನ್ನು ಓದಿದ್ದೀರಾ? ಬಾಂಗ್ಲಾದೇಶ | ಪ್ರತಿಭಟನಾಕಾರರ ಬೆದರಿಕೆ; ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಈ ರೀತಿಯ ‘ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ’ ಹೇಳಿಕೆಗಳನ್ನು ನೀಡದಂತೆ ತನ್ನ ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡುವಂತೆ ಬಾಂಗ್ಲಾದೇಶ ಸರ್ಕಾರವು ಭಾರತ ಸರ್ಕಾರಕ್ಕೆ ಒತ್ತಾಯಿಸಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

“ಸಚಿವಾಲಯವು ತನ್ನ ಗಂಭೀರ, ಆಳವಾದ ನೋವು ಮತ್ತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಅಂತಹ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡದಂತೆ ರಾಜಕೀಯ ನಾಯಕರಿಗೆ ಸಲಹೆ ನೀಡುವಂತೆ ಭಾರತ ಸರ್ಕಾರಕ್ಕೆ ಕರೆ ನೀಡಿದೆ” ಎಂದು ಪ್ರತಿಭಟನಾ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.

“ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ನೆರೆಯ ರಾಷ್ಟ್ರದ ಪ್ರಜೆಗಳ ವಿರುದ್ಧ ಇಂತಹ ಟೀಕೆಗಳನ್ನು ಮಾಡುವುದು ಎರಡು ಸ್ನೇಹಪರ ದೇಶಗಳ ನಡುವಿನ ಪರಸ್ಪರ ಗೌರವ ಮತ್ತು ತಿಳುವಳಿಕೆಯ ಮನೋಭಾವವನ್ನು ದುರ್ಬಲಗೊಳಿಸುತ್ತವೆ” ಎಂದು ಬಾಂಗ್ಲಾದೇಶ ಸಚಿವಾಲಯವು ಒತ್ತಿಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...