ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

Date:

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಢಾಕಾ ಪೊಲೀಸರ ತಂಡ (ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್) ಭಾರತಕ್ಕೆ ಭೇಟಿ ನೀಡಲಿದೆ.

- Advertisement -

ಭಾರತೀಯ ಪೊಲೀಸರ ನಾಲ್ಕು ಸದಸ್ಯರ ತಂಡವು ಪ್ರಸ್ತುತ ಕೊಲೆ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಕೋಲ್ಕತ್ತಾದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಮೇ 12ರಂದು ಢಾಕಾದಿಂದ ಹೊರಟ ಅನ್ವರುಲ್ ಅಜೀಮ್ ಬಳಿಕ ನಾಪತ್ತೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ?  ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

ಅನ್ವರುಲ್ ಅಜೀಮ್ ಬಾಂಗ್ಲಾದೇಶದ ಜೆನೈದಾ-4 ವಿಭಾಗದಿಂದ ಮೂರು ಬಾರಿ ಸಂಸದರಾಗಿರುವ ಅವಾಮಿ ಲೀಗ್‌ನ ಕಲಿಗಂಜ್ ಉಪ-ಜಿಲ್ಲಾ ಘಟಕದ ಅಧ್ಯಕ್ಷರೂ ಆಗಿದ್ದಾರೆ.

ಉತ್ತರ ಕೋಲ್ಕತ್ತಾದ ಬಾರಾನಗರದ ನಿವಾಸಿ ಮತ್ತು ಬಾಂಗ್ಲಾದೇಶದ ರಾಜಕಾರಣಿಯ ಪರಿಚಯಸ್ಥ ಗೋಪಾಲ್ ಬಿಸ್ವಾಸ್ ಮೇ 18ರಂದು ಸ್ಥಳೀಯ ಪೊಲೀಸರಿಗೆ ದೂರು ನೀಡಿದ ನಂತರ ಅನ್ವರುಲ್ ಅಜೀಮ್ ಹುಡುಕಾಟ ಆರಂಭಿಸಲಾಗಿತ್ತು.

ಇದನ್ನು ಓದಿದ್ದೀರಾ?  8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ಕೋಲ್ಕತ್ತಾ ಪೊಲೀಸರ ಪ್ರಕಾರ, ಬಾಂಗ್ಲಾದೇಶಿ ಸಂಸದರ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಪ್ರದೇಶಗಳಲ್ಲಿ ಎಸೆಯಲಾಗಿದೆ ಎಂಬುವುದು ಸಾಂದರ್ಭಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ. ಆದರೆ ದೇಹ ಅಥವಾ ದೇಹದ ಭಾಗಗಳ ಕುರುಹುಗಳು ಇನ್ನೂ ಪತ್ತೆಯಾಗಿಲ್ಲ.

ಅನಾರ್ ಕ್ರೂರ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಾಂಗ್ಲಾದೇಶದ ನ್ಯಾಯಾಲಯವು ಶುಕ್ರವಾರ ಮೂವರು ಶಂಕಿತರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಪಶ್ಚಿಮ ಬಂಗಾಳ ಪೊಲೀಸರು ಈ ಕೊಲೆಯಲ್ಲಿ ನಂಟು ಹೊಂದಿದ್ದ ಬಾಂಗ್ಲಾದೇಶಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...