ರಕ್ಷಣೆ ಕೋರಿದ ಬಾಂಗ್ಲಾ ಯುವತಿಯನ್ನು ಮತ್ತೆ ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ ಮಹಿಳಾ ಕಾನ್‌ಸ್ಟೆಬಲ್!

Date:

ವೇಶ್ಯಾವಾಟಿಕೆ ಜಾಲದಿಂದ ತಪ್ಪಿಸಿಕೊಂಡು ಬಂದು ರಕ್ಷಣೆ ಕೋರಿದ ಬಾಂಗ್ಲಾದೇಶದ ಯುವತಿಯನ್ನು ಮಹಿಳಾ ಕಾನ್‌ಸ್ಟೆಬಲ್ ಮತ್ತೆ ಅದೇ ಜಾಲಕ್ಕೆ ತಳ್ಳಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

- Advertisement -

ಬಲವಂತವಾಗಿ ವೇಶ್ಯಾವಾಟಿಕೆ ಮಾಡಿಸಲಾಗುತ್ತಿದೆ, ನನ್ನನ್ನು ಈ ಜಾಲದಿಂದ ರಕ್ಷಿಸಿ ಎಂದು ಕೋರಿ ರಸ್ಖಾನಾ ಪೊಲೀಸ್ ಠಾಣೆಗೆ ಬಾಂಗ್ಲಾದೇಶಿ ಯುವತಿ ಬಂದರೆ, ಮಹಿಳಾ ಕಾನ್‌ಸ್ಟೆಬಲ್ ಅದೇ ವೇಶ್ಯಾಗೃಹಕ್ಕೆ ವಾಪಸ್ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ವೇಶ್ಯಾವಾಟಿಕೆ ದಂಧೆ | ಪುನೀತ್ ಕೆರೆಹಳ್ಳಿ ಜೊತೆ ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕ ಯುವತಿ ಹೇಳಿದ್ದೇನು ?

ಬುಧ್ವಾರ್ ಪೇಠ್ ರೆಡ್-ಲೈಟ್ ಪ್ರದೇಶದಲ್ಲಿ ಬಲವಂತವಾಗಿ ವೇಶ್ಯಾವಾಟಿಕೆ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ತನ್ನನ್ನು ಕಳ್ಳಸಾಗಣೆ ಮಾಡಿ, ತನ್ನ ಇಚ್ಛೆಗೆ ವಿರುದ್ಧವಾಗಿ ಶೋಷಿಸಲಾಗುತ್ತಿದೆ ಎಂದು ತಿಳಿಸಿದ್ದರು.

ಆದರೆ ಕಳ್ಳಸಾಗಣೆ ಮತ್ತು ಶೋಷಣೆಯ ಸಂತ್ರಸ್ತೆಯನ್ನು ಮಹಿಳಾ ಕಾನ್‌ಸ್ಟೆಬಲ್‌ನಿಂದ ಹತ್ತಿರದ ಪೊಲೀಸ್ ಹೊರಠಾಣೆಗೆ ಕರೆದೊಯ್ಯಲಾಗಿದೆ. ಬಳಿಕ ವೇಶ್ಯಾಗೃಹದ ನಿರ್ವಾಹಕರೊಂದಿಗೆ ಚರ್ಚೆ ನಡೆಸಿ ಮತ್ತೆ ಅವರೊಂದಿಗೆ ಯುವತಿಯನ್ನು ಕಳಿಸಿದ್ದಾರೆ.

ಸ್ಥಳೀಯ ಹೋರಾಟ ಕಾರ್ಯಕರ್ತರು ಈ ಬಗ್ಗೆ ಪ್ರಶ್ನೆ ಎತ್ತಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪುಣೆ ಪೊಲೀಸರು ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದು, ತ್ವರಿತ ಕ್ರಮ ಕೈಗೊಂಡ ಉಪ ಪೊಲೀಸ್ ಆಯುಕ್ತ ಹೃಷಿಕೇಶ್ ರಾವಾಲೆ ಅವರು ಮನೀಷಾ ಪುಕಲೆ ಎಂದು ಗುರುತಿಸಲಾದ ಆರೋಪಿ ಮಹಿಳಾ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪೋಷಕರಿಂದಲೇ ಪೈಶಾಚಿಕ ಕೃತ್ಯ: ಮಗಳನ್ನು ವೇಶ್ಯಾವಾಟಿಕೆಗೆ ದೂಡಿ ದೌರ್ಜನ್ಯ

ಸದ್ಯ ಮಹಿಳಾ ಕಾನ್‌ಸ್ಟೆಬಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಬರೀ ಅಮಾನತುಗೊಳಿಸುವುದಲ್ಲ, ಜೈಲು ಶಿಕ್ಷೆಯಾಗಬೇಕು” ಎಂದು ಕೆಲ ನೆಟ್ಟಿಗರು ಒತ್ತಾಯಿಸಿದ್ದಾರೆ. “ಸಾಮಾನ್ಯ ಜನರಾದರೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಆದರೆ ಪೊಲೀಸರಿಗೆ ಬರೀ ಅಮಾನತು” ಎಂದೂ ಕೆಲವು ನೆಟ್ಟಿಗರು ಹೇಳಿದ್ದಾರೆ.

ಇನ್ನು ಕೆಲವರು, “ಮಹಿಳಾ ಕಾನ್‌ಸ್ಟೆಬಲ್ ಮೇಲಧಿಕಾರಿಗಳ ಆದೇಶವನ್ನು ಪಾಲಿಸುತ್ತಿದ್ದಾರೆ ಎಂದು ಕಾಣಿಸುತ್ತದೆ. ಯಾವುದೇ ವಿಷಯ ಕೈಮೀರಿ ಹೋದಾಗ ಮಹಿಳೆಯರನ್ನೇ ತಪ್ಪಿತಸ್ಥರನ್ನಾಗಿಸಲಾಗುತ್ತದೆ. ರಾಜಕೀಯವಾಗಿರಲಿ, ಸರ್ಕಾರಿ ಕಚೇರಿಗಳಾಗಿರಲಿ ಅಥವಾ ಬಹುರಾಷ್ಟ್ರೀಯ ಕಂಪನಿಯಾಗಲಿ, ಎಲ್ಲಾ ಕಡೆಗಳಲ್ಲಿ ನಡೆಯುವುದು ಇದುವೇ” ಎಂದು ಜೋಶ್ ಟಿಕೆ ಎಂಬ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...