ಕಾನೂನು ವಿದ್ಯಾರ್ಥಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ಬಾರ್ ಕೌನ್ಸಿಲ್‌ಗಿಲ್ಲ: ಸುಪ್ರೀಂ ಕೋರ್ಟ್

Date:

ವಕೀಲರಾಗಿ ಅಧಿಕೃತವಾಗಿ ನೋಂದಣಿಯಾಗುವ ಮುನ್ನ (ಎನ್‌ರೋಲ್‌ಮೆಂಟ್) ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಅಥವಾ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಯಾವುದೇ ಶಾಸನಬದ್ಧ ಅಧಿಕಾರ ಭಾರತೀಯ ಬಾರ್ ಕೌನ್ಸಿಲ್‌ಗೆ (BCI) ಇಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್‌ನ ನಲ್ಸಾರ್(NALSAR) ಕಾನೂನು ವಿಶ್ವವಿದ್ಯಾಲಯದ ವಿವಾದಕ್ಕೆ ಸಂಬಂಧಿಸಿದಂತೆ ಬಿಸಿಐ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ನ್ಯಾಯಾಲಯ ಇದೇ ವೇಳೆ ರದ್ದುಗೊಳಿಸಿದೆ.

- Advertisement -

​ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. “ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಶಿಸ್ತುಕ್ರಮ ಜರುಗಿಸಬೇಕಾದರೂ, ಅದು ಆಯಾ ಶಿಕ್ಷಣ ಸಂಸ್ಥೆಗಳ ನಿಯಮಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ. ಆಡಳಿತ ಮಂಡಳಿಯೇ ಅದರ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ಹೊರತು ಬಾರ್ ಕೌನ್ಸಿಲ್ ಅಲ್ಲ” ಎಂದು ಪೀಠವು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಹೈದರಾಬಾದ್‌ನ ಪ್ರತಿಷ್ಠಿತ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಭಾಗವಹಿಸುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಭಾರತೀಯ ಬಾರ್ ಕೌನ್ಸಿಲ್, ನಲ್ಸಾರ್‌ನ 2026ನೇ ಸಾಲಿನ ಪದವೀಧರ ಬ್ಯಾಚ್‌ನ ವಿದ್ಯಾರ್ಥಿಗಳನ್ನು ವಕೀಲರಾಗಿ ನೋಂದಣಿ ಮಾಡಿಕೊಳ್ಳದಂತೆ (ಎನ್‌ರೋಲ್‌ಮೆಂಟ್ ತಡೆಹಿಡಿಯುವಂತೆ) ಎಲ್ಲಾ ರಾಜ್ಯ ಘಟಕಗಳಿಗೆ ಕಳೆದ ತಿಂಗಳು ಆದೇಶ ಹೊರಡಿಸಿತ್ತು.

​ವಕೀಲ ವೃತ್ತಿ ಮತ್ತು ಕಾನೂನು ಶಿಕ್ಷಣವನ್ನು ನಿಯಂತ್ರಿಸುವ ಶಾಸನಬದ್ಧ ಸಂಸ್ಥೆಯಾಗಿರುವ ಬಿಸಿಐನ ಈ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗಿತ್ತು. ಒತ್ತಡ ಹೆಚ್ಚಾದ ಬೆನ್ನಲ್ಲೇ ಬಿಸಿಐ ತನ್ನ ವಿವಾದಾತ್ಮಕ ಆದೇಶವನ್ನು ಹಿಂಪಡೆದಿತ್ತು ಹಾಗೂ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ್ದರು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಗಳ ಶೈಕ್ಷಣಿಕ ಹಂತದಲ್ಲಿ ಅವರ ಮೇಲೆ ಬಿಸಿಐಗೆ ಯಾವುದೇ ನಿಯಂತ್ರಣಾಧಿಕಾರ ಇಲ್ಲ ಎಂದು ಸ್ಪಷ್ಟವಾಗಿ ತೀರ್ಪು ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...