ಎಫ್‌ಡಿಐ ನಿಯಮ ಉಲ್ಲಂಘನೆ ಆರೋಪ: ‘ಬಿಬಿಸಿ ಇಂಡಿಯಾ’ಗೆ 3.44 ಕೋಟಿ ರೂ. ದಂಡ

Date:

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬ್ರಿಟಿಷ್ ಪ್ರಸರಣಾ ಸಂಸ್ಥೆ ‘ಬಿಬಿಸಿ ಇಂಡಿಯಾ’ಗೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 3.44 ಕೋಟಿ ರೂ. ದಂಡ ವಿಧಿಸಿದೆ.

- Advertisement -

ಬಿಬಿಸಿ ಸಂಸ್ಥೆಯ ಆದಾಯದ ಬಗ್ಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) 2013ರಲ್ಲಿ ಸಮೀಕ್ಷೆ ನಡೆಸಿತ್ತು. ಈ ವೇಳೆ, ಬಿಬಿಸಿ ಗುಂಪಿನ ವಿವಿಧ ಘಟಕಗಳು ವಿವರಿಸಿರುವ ಆದಾಯ ಮತ್ತು ಲಾಭಗಳು ಭಾರತದಲ್ಲಿ ಅವುಗಳ ಕಾರ್ಯಾಚರಣೆಯ ಪ್ರಮಾಣಕ್ಕೆ ಅನುಗುಣವಾಗಿಲ್ಲ. ಬಿಬಿಸಿ ವಿದೇಶಿ ಘಟಕಗಳು ಕೆಲವು ಹಣ ವರ್ಗಾವಣೆಗೆ ಸಂಬಂಧಿಸಿದ ತೆರಿಗೆಯನ್ನು ಪಾವತಿಸಿಲ್ಲ” ಎಂದು ಆರೋಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಬಿಬಿಸಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣದಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿ ತೀರ್ಪು ಪ್ರಕಟಿಸಿರುವ ಜಾತಿ ನಿರ್ದೇಶನಾಲಯ, ಬಿಬಿಸಿಗೆ 3.44 ಕೋಟಿ ರೂ. ದಂಡ ವಿಧಿಸಿದೆ.

ಈ ವರದಿ ಓದಿದ್ದೀರಾ?: ಚುನಾವಣಾ ಆಯುಕ್ತರ ನೇಮಕದಲ್ಲಿ ವಿವಾದವೇಕೆ? ಹಳೆಯ ಪ್ರಕ್ರಿಯೆಗೂ – ಹೊಸ ನೀತಿಗೂ ಇರುವ ವ್ಯತ್ಯಾಸವೇನು?

ಆದಾಗ್ಯೂ, ಇಡಿಯಿಂದ ತಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಬಿಬಿಸಿ ಇಂಡಿಯಾ ಹೇಳಿಕೊಂಡಿದೆ. “ಭಾರತವೂ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಎಲ್ಲ ದೇಶಗಳಲ್ಲಿಯೂ ಅಲ್ಲಿನ ಕಾನೂನು ಮತ್ತು ನಿಯಮಗಳಿಗೆ ಅನುಗುಣವಾಗಿಯೇ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇಡಿಯಿಂದ ಆದೇಶ ಬಂದಿಲ್ಲ. ಅದರ ಕುರಿತಾದ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇವೆ” ಎಂದು ಬಿಬಿಸಿ ಇಂಡಿಯಾ ಹೇಳಿದೆ.

ಗಮನಾರ್ಹವಾಗಿ, 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ಹತ್ಯಾಕಾಂಡದಲ್ಲಿ ಸುಮಾರು 1,000 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರು. ಆ ಹತ್ಯಾಕಾಂಡದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ, ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರಗಳ ಕುರಿತಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ಇತ್ತೀಚೆಗೆ ಬಿಡುಗಡೆ ಮಾಡಿತ್ತು. ಆ ಸಾಕ್ಷ್ಯಾಚಿತ್ರ ಬಿಡುಗಡೆಯಾ ಬಳಿಕ, ಬಿಬಿಸಿ ವಿರುದ್ಧ ಹಲವಾರು ದಾಳಿಗಳು ನಡೆದಿವೆ. ಅಂತಹ ದಾಳಿಯಲ್ಲಿ ಸಿಬಿಡಿಟಿ ನಡೆಸಿದ ಸಮೀಕ್ಷಾ ದಾಳಿಯೂ ಒಂದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...