ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

Date:

Advertisements
  • 7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ
  • ಈ ಹಿಂದೆಯೂ ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲು

ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ 6ನೇ ಮಹಡಿಯಲ್ಲಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹಮಾಲೀಕತ್ವದ ಒನ್ 8 ಕಮ್ಯೂನ್​ ಬಾರ್ ಆ್ಯಂಡ್​ ರೆಸ್ಟೋರೆಂಟ್​ಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ಜಾರಿಗೊಳಿಸಿದೆ.

ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆದಿಲ್ಲ ಎಂದಿರುವ ಬಿಬಿಎಂಪಿ, ಸುರಕ್ಷತಾ ಕ್ರಮಗಳನ್ನು ಅಳವಡಿಸದ ಕಾರಣ ಒನ್ 8 ಕಮ್ಯೂನ್​ ಪಬ್​ ಕಾನೂನು ಉಲ್ಲಂಘನೆ ಮಾಡಿದೆ ಎಂದು ನೋಟಿಸ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರು ಈ ಬಗ್ಗೆ ಬಿಬಿಎಂಪಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಶಾಂತಿನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿಂದೆಯೂ ಒಂದು ಸಲ ನೋಟಿಸ್​ ನೀಡಲಾಗಿತ್ತು. ಆದರೆ ಬಾರ್​ ಆ್ಯಂಡ್​ ರೆಸ್ಟೋರೆಂಟ್​ ಉತ್ತರಿಸಿರಲಿಲ್ಲ.

Advertisements

ಇದೀಗ 7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಹಿಂದೆಯೂ ಪಬ್​ ವಿರುದ್ಧ ತಡರಾತ್ರಿ ತನಕ ಪಬ್ ತೆರೆದಿದ್ದರ ಹಿನ್ನೆಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾತ್ರಿ ಅವಧಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಇದು ಕಂಡು ಬಂದಿತ್ತು.

ಇದನ್ನು ಓದಿದ್ದೀರಾ?: ಸರ್ವಾಧಿಕಾರಿ ವಿರುದ್ಧ ಸ್ಪಷ್ಟ ನಿಲುವು ಪ್ರದರ್ಶಿಸಿ, ಜಗತ್ತು ಜಿಂಬಾಬ್ವೆಯತ್ತ ನೋಡುವಂತೆ ಮಾಡಿದ ಹೆನ್ರಿ ಒಲಾಂಗ

ಒನ್​ 8 ಕಮ್ಯೂನ್ ಪಬ್ ಅಷ್ಟೇ ಅಲ್ಲ, ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಮಧ್ಯರಾತ್ರಿ 1 ಗಂಟೆಯ ನಂತರವೂ ಪಬ್ ತೆರೆದು ನಗರ ನಿಯಮಗಳನ್ನು ಉಲ್ಲಂಘಿಸಿದ್ದರು. ಅಲ್ಲದೆ, ಜೋರು ಡಿಜೆ ಹಾಕಿದ್ದರು. ಗ್ರಾಹಕರೂ ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 

ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​ಗಳು ದೆಹಲಿ, ಮುಂಬೈ, ಪುಣೆ, ಗುರ್ಗಾಂವ್ ಮತ್ತು ಕೋಲ್ಕತ್ತಾ ಸೇರಿ ಪ್ರಮುಖ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. 2023ರ ಡಿಸೆಂಬರ್‌ನಲ್ಲಿ ಬೆಂಗಳೂರು ಶಾಖೆ ಆರಂಭ ಆಗಿತ್ತು. ಇಲ್ಲಿ ಕಿಟಕಿಯ ಪಕ್ಕದ ಮೇಜಿನ ಬಳಿ ಕುಳಿತರೆ ಕ್ರಿಕೆಟ್ ಮೈದಾನ ಭಾಗಶಃ ಕಾಣಿಸುತ್ತದೆ. ಇದು 3 ಮಹಡಿಗಳಲ್ಲಿ ಹರಡಿರುವ ವಿಲಾಸಿ ರೆಸ್ಟೋರೆಂಟ್ ಆಗಿದ್ದು, ಬೋಹಿಮಿಯನ್​ನಿಂದ ಅಲಂಕೃತಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X