ಜಾರ್ಖಂಡ್, ದೆಹಲಿ ಎಲ್ಲೇ ಆದರೂ, ಕಾಂಗ್ರೆಸ್ ವಿದ್ಯಾರ್ಥಿಗಳ ಪರ: ಮಲ್ಲಿಕಾರ್ಜುನ ಖರ್ಗೆ

Date:

ಜಾರ್ಖಂಡ್‌ನಲ್ಲಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ವಿವಿಧ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲವನ್ನು ಪುನರುಚ್ಚರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಜಾರ್ಖಂಡ್, ಪಂಜಾಬ್, ದೆಹಲಿ ಅಥವಾ ದೇಶದ ಯಾವುದೇ ಭಾಗವೇ ಇರಲಿ, ನಾವು ವಿದ್ಯಾರ್ಥಿಗಳು ಮತ್ತು ಯುವಜನರ ನ್ಯಾಯಯುತ ಹೋರಾಟದ ಪರವಾಗಿ ಸದಾ ನಿಲ್ಲುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಐತಿಹಾಸಿಕ ಜೆನ್‌-ಝೀ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ತನ್ನ ಮೈತ್ರಿ ಸರ್ಕಾರವಿರುವೆಡೆ ವಿದ್ಯಾರ್ಥಿಗಳ ಪರವಾಗಿ ನಿಲ್ಲದಿದ್ದರೆ ಹೇಗೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಜಾರ್ಖಂಡ್‌ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಬೆಂಬಲ: ಹೆಚ್ಚುತ್ತಾ ಜೆಎಂಎಂ-ಕೈ ಮೈತ್ರಿ ಬಿರುಕು?

ದೇಶಾದ್ಯಂತ ನೀಟ್ ಪರೀಕ್ಷೆ ಹಗರಣದ ವಿರುದ್ಧ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕರು, ಈಗ ತಮ್ಮದೇ ಮೈತ್ರಿ ಸರ್ಕಾರವಿರುವ ಜಾರ್ಖಂಡ್‌ನಲ್ಲಿ ಪೇಪರ್ ಲೀಕ್ ಆಗಿರುವುದಕ್ಕೆ ಉತ್ತರಿಸಬೇಕು ಎಂದು ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಈಗಾಗಲೇ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಕೆ. ರಾಜು ಎಕ್ಸ್‌ನಲ್ಲಿ ಪೋಸ್ಟ್ ವಿದ್ಯಾರ್ಥಿಗಳ ಪರವಾಗಿ ನಿಲ್ಲುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರೂ ದೇಶದ ಯಾವುದೇ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಕಾಂಗ್ರೆಸ್ ವಿದ್ಯಾರ್ಥಿಗಳ ಪರವಾಗಿಯೇ ನಿಲ್ಲುತ್ತದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...