ಪ್ರಧಾನ್ ಖಾತೆ ಬದಲಾವಣೆಗೆ ಮುಂದಾಗಿದ್ದ ಕೇಂದ್ರ: ‘ರಾಜೀನಾಮೆಯೇ ಅಂತಿಮ’ ಎಂದು ಪಟ್ಟುಬಿಡದ ಸಿಜೆಪಿ

Date:

ಶನಿವಾರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಿಯೋಗದ ಮುಂದೆ, ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ಕೈಬಿಡುವ ಬದಲು ಅವರ ಖಾತೆ ಬದಲಾಯಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಇಟ್ಟಿತ್ತು. ಆದರೆ ಸಿಜೆಪಿ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು ಎಂಬ ಅಂಶ ಇದೀಗ ಮೂಲಗಳಿಂದ ತಿಳಿದುಬಂದಿದೆ. ಸಚಿವರೊಬ್ಬರನ್ನು ಸಂಪುಟದಿಂದ ವಜಾಗೊಳಿಸುವುದು ಅಥವಾ ಖಾತೆ ಬದಲಾಯಿಸುವುದು ಪ್ರಧಾನಮಂತ್ರಿಯವರ ಪರಮಾಧಿಕಾರ ಎಂದು ಸರ್ಕಾರದ ಸಂಧಾನಕಾರರು ವಾದಿಸಿದ್ದರು. ಆದರೆ, ಅಂದಿನ ಶಿಕ್ಷಣ ಸಚಿವರಾಗಿದ್ದ ಪ್ರಧಾನ್ ಅವರ ರಾಜೀನಾಮೆಯ ಹೊರತಾಗಿ ಬೇರಾವ ಪರ್ಯಾಯಕ್ಕೂ ತಾವು ಒಪ್ಪುವುದಿಲ್ಲ ಎಂದು ಸಿಜೆಪಿ ಸ್ಪಷ್ಟಪಡಿಸಿತ್ತು.

- Advertisement -

ನೀಟ್ ಪತ್ರಿಕೆ ಸೋರಿಕೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಶನಿವಾರ ರಾಜೀನಾಮೆ ನೀಡಿದ್ದ ಪ್ರಧಾನ್ ಅವರಿಗೆ ಸೋಮವಾರ ಸಂಸತ್ತಿನಲ್ಲಿ ಎನ್‌ಡಿಎ ನಾಯಕರು ಭವ್ಯ ಸ್ವಾಗತ ಕೋರಿದರು. ಎನ್‌ಡಿಎ ನಾಯಕರು ಮಕರ ದ್ವಾರದ ಬಳಿ ಜಮಾಯಿಸಿ, ಪ್ರಧಾನ್ ಅವರು ಸಂಸತ್ ಭವನದ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಅವರನ್ನು ಒಳಗೆ ಬರಮಾಡಿಕೊಂಡರು. ಅಲ್ಲದೆ, ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುವ ಸಂಕೇತವಾಗಿ ಸಾಂಪ್ರದಾಯಿಕ ಟೋಪಿಯೊಂದನ್ನು ತೊಡಿಸಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದೇ ವೇಳೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು. ‘ಶಿಕ್ಷಾ ಚೋರಿ’ (ಶಿಕ್ಷಣ ಕಳ್ಳತನ) ಎಂಬ ಘೋಷಣೆಗಳನ್ನು ಕೂಗಿದ ನಾಯಕರು, ಶಾಂತಿಯುತ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ನೀಟ್ ವಿವಾದದ ನಂತರ ದೇಶದ ನಕಲು ತಡೆ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಈ ರಾಜಕೀಯ ಹಗ್ಗಜಗ್ಗಾಟ ನಡೆದಿದೆ.

ಸಂಸತ್ತಿನಲ್ಲಿ ಎನ್‌ಡಿಎ ನಾಯಕರಿಂದ ಅದ್ದೂರಿ ಸ್ವಾಗತ ಸ್ವೀಕರಿಸಿ ಬರುತ್ತಿದ್ದ ಪ್ರಧಾನ್ ಅವರನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎದುರಾದರು. ಒಂದು ದಿನದ ಹಿಂದೆಯಷ್ಟೇ ಪ್ರಧಾನ್ ರಾಜೀನಾಮೆಗೆ ತೀವ್ರವಾಗಿ ಪಟ್ಟುಹಿಡಿದಿದ್ದ ರಮೇಶ್, ರಾಜೀನಾಮೆ ನೀಡಿದ ನಂತರ ಅವರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿ “ಹೀಗೆಲ್ಲಾ ಆಗುವುದು ಸಹಜ” (ಇಟ್ ಹ್ಯಾಪನ್ಸ್) ಎಂದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಪ್ರಧಾನ್, “ಏನೂ ಆಗಿಲ್ಲ. ನಾನು ಬೀದಿಗಿಳಿದು ಹೋರಾಡುವವನೇ ಹೊರತು, ಎಸಿ ಕೊಠಡಿಯಲ್ಲಿ ಕೂತು ಹೋರಾಡುವ ಕಾರ್ಯಕರ್ತನಲ್ಲ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...