​ಬೆಳಗಾವಿ, ಕಾರವಾರ, ನಿಪ್ಪಾಣಿ ಗಡಿ ವಿವಾದ: ಮಹಾರಾಷ್ಟ್ರದ ತ್ವರಿತ ವಿಚಾರಣೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್

Date:

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಹಳೆಯ ಗಡಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಸೇರಿದಂತೆ ಕರ್ನಾಟಕದ ಆಡಳಿತದಲ್ಲಿರುವ 865 ಮರಾಠಿ ಭಾಷಿಕ ಗ್ರಾಮಗಳ ಮೇಲಿನ ಹಕ್ಕುಕೋರಿ 2004ರಲ್ಲಿ ಸಲ್ಲಿಸಿದ್ದ ಅರ್ಜಿಯ ತ್ವರಿತ ವಿಚಾರಣೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿಲ್ಲ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಮಹಾರಾಷ್ಟ್ರದ ಪರ ವಕೀಲರು ಮಂಗಳವಾರ ಈ ಮನವಿ ಸಲ್ಲಿಸಿದರು. “ಪ್ರಕರಣಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ವಾದಗಳು ಮತ್ತು ದಾಖಲೆಗಳ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಹೀಗಾಗಿ ಈ ಮೂಲ ಮೊಕದ್ದಮೆಯನ್ನು ಶೀಘ್ರವೇ ವಿಚಾರಣೆಗೆ ಪಟ್ಟಿ ಮಾಡಬೇಕು” ಎಂದು ವಕೀಲರು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

“ಭಾಷಾವಾರು ಆಧಾರದ ಮೇಲೆ ರಾಜ್ಯಗಳ ಪುನರ್‌ರಚನೆ ಮಾಡಲಾಗಿದ್ದರೂ, ಮರಾಠಿ ಭಾಷಿಕರೇ ಹೆಚ್ಚಿರುವ 865 ಗ್ರಾಮಗಳು ಹಾಗೂ ಪಟ್ಟಣಗಳು ಕರ್ನಾಟಕದ ಆಡಳಿತದಲ್ಲಿವೆ. ಇದು ಭಾಷಾವಾರು ಪ್ರಾಂತ್ಯ ರಚನೆಯ ಮೂಲ ತತ್ವಕ್ಕೆ ವಿರುದ್ಧವಾಗಿದೆ. ಈ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು” ಎಂದು ಮಹಾರಾಷ್ಟ್ರದ ವಕೀಲರು ವಾದ ಮಂಡಿಸಿದರು.

ಈ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಪ್ರಕರಣದ ಕಡತಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು. ಆದರೆ, “ಪ್ರಕರಣವನ್ನು ತ್ವರಿತವಾಗಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನಾವು ಖಚಿತವಾಗಿ ಭರವಸೆ ನೀಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸುವ ಮೂಲಕ ಮಹಾರಾಷ್ಟ್ರದ ತ್ವರಿತ ವಿಚಾರಣೆಯ ಬೇಡಿಕೆಯನ್ನು ತಳ್ಳಿಹಾಕಿದರು.

1956ರ ರಾಜ್ಯ ಪುನರ್‌ರಚನಾ ಕಾಯ್ದೆಯಡಿ ಭಾಷಾವಾರು ಆಧಾರದ ಮೇಲೆ ದೇಶದ ರಾಜ್ಯಗಳ ಗಡಿಗಳನ್ನು ನಿಗದಿಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿಯನ್ನು ಅಂದಿನ ಮೈಸೂರು ರಾಜ್ಯಕ್ಕೆ (ಈಗಿನ ಕರ್ನಾಟಕ) ಸೇರಿಸಲಾಗಿತ್ತು. ಆದರೆ, ಬೆಳಗಾವಿ, ಕಾರವಾರ, ನಿಪ್ಪಾಣಿ ಹಾಗೂ ಸುತ್ತಮುತ್ತಲಿನ ಮರಾಠಿ ಭಾಷಿಕ ಪ್ರದೇಶಗಳು ತನಗೆ ಸೇರಬೇಕು ಎಂಬುದು ಮಹಾರಾಷ್ಟ್ರದ ವಾದವಾಗಿದೆ. ಈ ಭೌಗೋಳಿಕ ಗಡಿ ಮರುಹಂಚಿಕೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಮತ್ತೊಂದೆಡೆ, “ರಾಜ್ಯದ ಗಡಿಗಳ ಹಂಚಿಕೆ ಈಗಾಗಲೇ ಅಂತಿಮಗೊಂಡಿದ್ದು, ಅದನ್ನು ಮರುಪರಿಶೀಲಿಸುವ ಅಥವಾ ಗಡಿರೇಖೆ ಬದಲಾಯಿಸುವ ಪ್ರಶ್ನೆಯೇ ಇಲ್ಲ” ಎಂದು ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತಾ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ...