ಅಕ್ರಮ ಕಟ್ಟಡ ಆರೋಪ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ

Date:

ಪಶ್ಚಿಮ ಬಂಗಾಳದ ಆಡಳಿತವು ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಐದು ಅಂತಸ್ತಿನ ಭವ್ಯ ಕಚೇರಿಯ ಅಕ್ರಮ ಭಾಗವನ್ನು ನೆಲಸಮಗೊಳಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಸತ್ಗಚಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಆಮ್ತಾಲಾದಲ್ಲಿರುವ ಈ ಕಟ್ಟಡವನ್ನು ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಶನಿವಾರ ಕಾರ್ಯಾಚರಣೆ ನಡೆಸಲಾಗಿದೆ.

- Advertisement -

ಕೇಂದ್ರ ಪಡೆಗಳು ಹಾಗೂ ಪಶ್ಚಿಮ ಬಂಗಾಳ ಪೊಲೀಸರ ಬಿಗಿ ಭದ್ರತೆಯಲ್ಲಿ ಈ ತೆರವು ಕಾರ್ಯಾಚರಣೆ ನಡೆಯಿತು. ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ದಕ್ಷಿಣ 24 ಪರಗಣ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಸಮ್ಮುಖದಲ್ಲಿ ಬುಲ್ಡೋಜರ್ ಮೂಲಕ ಕಟ್ಟಡದ ನೆಲಮಹಡಿಯ ಶೆಡ್ ಮತ್ತು ಗೋಡೆಯನ್ನು ಕೆಡವಲಾಯಿತು. ಈ ಕಾರ್ಯಾಚರಣೆಯ ವೇಳೆ ಸತ್ಗಚಿ ಕ್ಷೇತ್ರದ ಸ್ಥಳೀಯ ಬಿಜೆಪಿ ಶಾಸಕರು ಕೂಡ ಸ್ಥಳದಲ್ಲಿ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆಡಳಿತದ ಮೂಲಗಳ ಪ್ರಕಾರ, ಆಮ್ತಾಲಾ ಮಾರುಕಟ್ಟೆಯ ಸಮೀಪ ನಿರ್ಮಾಣವಾಗಿದ್ದ ಈ ಐದು ಅಂತಸ್ತಿನ ಕಚೇರಿಯು ಅನುಮೋದಿತ ಕಟ್ಟಡ ನಕ್ಷೆಯನ್ನು ಉಲ್ಲಂಘಿಸಿತ್ತು. ಈ ಸಂಬಂಧ ಸ್ಪಷ್ಟೀಕರಣ ನೀಡುವಂತೆ ಅಭಿಷೇಕ್ ಬ್ಯಾನರ್ಜಿ ಅವರ ತಂದೆ ಅಮಿತ್ ಬ್ಯಾನರ್ಜಿ ಸೇರಿದಂತೆ ಮೂವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು ಹಾಗೂ ಜುಲೈ 15ರಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಟಿಎಂಸಿ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಮತ್ತು ಅವರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕಟ್ಟಡ ತೆರವಿಗೆ ಆದೇಶಿಸಲಾಯಿತು.

ಬೆಳಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಸಂಪೂರ್ಣ ಕಟ್ಟಡವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಈ ನೆಲಸಮ ಕಾರ್ಯಾಚರಣೆಗೆ ಟಿಎಂಸಿ ಕಾರ್ಯಕರ್ತರಿಂದ ಈವರೆಗೆ ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ. ಆದರೆ, ಸ್ಥಳದಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗುತ್ತಾ, ಆಡಳಿತದ ಈ ಕ್ರಮವನ್ನು ಸಂಭ್ರಮಿಸಿದರು.

ಅಕ್ರಮವಾಗಿ ನಿರ್ಮಿಸಲಾದ ಅಥವಾ ಒತ್ತುವರಿ ಮಾಡಲಾದ ಟಿಎಂಸಿ ಕಚೇರಿಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ, ಮೇ 24 ರಂದು ಇ.ಎಂ. ಬೈಪಾಸ್ ಉದ್ದಕ್ಕೂ ಇರುವ ಮಠಪುಕುರ್‌ನಲ್ಲಿರುವ ಟಿಎಂಸಿ ಕಚೇರಿಯನ್ನು ಇದೇ ರೀತಿ ನೆಲಸಮಗೊಳಿಸಲಾಗಿತ್ತು. ಆ ಕಚೇರಿಯನ್ನು ಸಹ ವಸತಿ ಕಟ್ಟಡವೊಂದರ ಒಂದು ಭಾಗವನ್ನು ಬಲವಂತವಾಗಿ ಆಕ್ರಮಿಸಿಕೊಂಡು ನಿರ್ಮಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...