ಬಂಗಾಳ ಕಲ್ಲಿದ್ದಲು ಹಗರಣ: ಐ-ಪ್ಯಾಕ್ ಪದಾಧಿಕಾರಿಗಳ ಮೇಲೆ ಇಡಿ ದಾಳಿ

Date:

ಪಶ್ಚಿಮ ಬಂಗಾಳದ ಕಲ್ಲಿದ್ದಲು ಅಕ್ರಮ ಸಾಗಾಣಿಕೆ ಮತ್ತು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ, ಟಿಎಂಸಿಯ ರಾಜಕೀಯ ಸಲಹಾ ಸಂಸ್ಥೆಯಾದ ಐ-ಪ್ಯಾಕ್‌ನ ಪದಾಧಿಕಾರಿಗಳ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ದಾಳಿ ನಡೆಸಿದೆ. ವಿವಿಧ ನಗರಗಳಲ್ಲಿ ದಾಳಿ ನಡೆಸಿರುವ ಇಡಿ, ಶೋಧ ಕಾರ್ಯ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣದ ತನಿಖೆಯ ಭಾಗವಾಗಿ ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯ ವಿವಿಧ ಸ್ಥಳಗಳಲ್ಲಿ ದಾಳಿಗಳು ನಡೆದಿವೆ. ಐ-ಪ್ಯಾಕ್‌ನ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ ರಿಷಿ ರಾಜ್ ಸಿಂಗ್ ಅವರ ನಿವಾಸ ಹಾಗೂ ಕಚೇರಿಗಳನ್ನು ಇಡಿ ಅಧಿಕಾರಿಗಳು ಶೋಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ವರ್ಷದ ಜನವರಿಯಲ್ಲಿಯೂ ಐ-ಪ್ಯಾಕ್ ಕಚೇರಿ, ಅದರ ಸಂಸ್ಥಾಪಕ ಮತ್ತು ನಿರ್ದೇಶಕ ಪ್ರತಿಕ್ ಗಾಂಧಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಆಗ, ಮಮತಾ ಬ್ಯಾನರ್ಜಿ ಸ್ಥಳಕ್ಕೆ ಧಾವಿಸಿ, ಇಡಿ ವಿರುದ್ಧ ಪ್ರತಿಭಟಿಸಿದ್ದರು. ಬಿಜೆಪಿಗಾಗಿ ಟಿಎಂಸಿಯ ರಹಸ್ಯ ದಾಖಲೆಗಳನ್ನು ಇಡಿ ಹೊತ್ತೊಯ್ಯಲು ಯತ್ನಿಸಿದೆ ಎಂದು ಆರೋಪಿಸಿದ್ದರು.

ಇಡಿ ಮತ್ತು ಟಿಎಂಸಿ ಪರಸ್ಪರರ ವಿರುದ್ಧ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದವು. ಅದಾದ ಬಳಿಕ ಇತ್ತೀಚೆಗೆ, ರಿಷಿ ರಾಜ್ ಸಿಂಗ್ ಮತ್ತು ಜೈನ್ ಅವರಿಗೆ ಹೇಳಿಕೆ ದಾಖಲಿಸಲು ಹಾಜರಾಗುವಂತೆ ಇಡಿ ಸಮನ್ಸ್ ನೀಡಿತ್ತು. ಆದರೆ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಚುನಾವಣೆ ಕೆಲಸಗಳು ನಡೆಯುತ್ತಿರುವುದನ್ನು ಉಲ್ಲೇಖಿಸಿದ್ದ ಈ ಇಬ್ಬರೂ, ತಮಗೆ ನೀಡಲಾದ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...