ಬಂಗಾಳ ಚುನಾವಣೆ | ನಂದಿಗ್ರಾಮದಲ್ಲಿ ಮತಪಟ್ಟಿಯಿಂದ ಹೊರಹಾಕಿದ ಮತದಾರದಲ್ಲಿ 95% ಮಂದಿ ಮುಸ್ಲಿಮರು

Date:

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ 58 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಚುನಾವಣಾ ಆಯೋಗವು ಹೊರಗಿಟ್ಟಿತ್ತು. ಅವರಲ್ಲಿ 33% ಮಂದಿ ಮುಸ್ಲಿಮರೇ ಆಗಿದ್ದಾರೆ. ಇದೀಗ, ಪೂರಕ ಪರಿಷ್ಕರಣೆಗಳು ನಡೆಯುತ್ತಿದ್ದು, ಪೂರಕ ಪಟ್ಟಿಗಳನ್ನು ಆಯೋಗ ಬಿಡುಗಡೆ ಮಾಡುತ್ತಿದೆ.

- Advertisement -

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿನಿಧಿಸುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಮತ್ತು ನಂತರ ಪೂರಕ ಪರಿಷ್ಕರಣೆಗಳು ಮುಗಿವೆ. ಅಂತಿಮವಾಗಿ, ಸುಮಾರು 3 ಸಾವಿರ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಇವರಲ್ಲಿ, ಬರೋಬ್ಬರಿ 95% ಮಂದಿ ಮುಸ್ಲಿಮರಿದ್ದಾರೆ ಎಂಬುದು ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಫೆಬ್ರವರಿ 28ರಂದು ಪ್ರಕಟವಾಗಿದ್ದ ಎಸ್‌ಐಆರ್ ಅಂತಿಮ ಪಟ್ಟಿಯಲ್ಲಿ, ನಂದಿಗ್ರಾಮ ಕ್ಷೇತ್ರದಲ್ಲಿ ಒಟ್ಟು 10,500ಕ್ಕೂ ಹೆಚ್ಚು ಮತದಾರರನ್ನು ‘ನಿರ್ಣಯ ಬಾಕಿ’ ಎಂದು ಗುರುತಿಸಲಾಗಿತ್ತು.  ಬಳಿಕ, ಆಯೋಗವು ಮಾರ್ಚ್ 23ರಂದು ಮೊದಲ ಪೂರಕ ಪಟ್ಟಿಯನ್ನು ಪ್ರಕಟಿಸಿತ್ತು. ಈ ಎಲ್ಲ ಪೂರಕ ಪಟ್ಟಿಗಳ ಮೂಲಕ ನಂದಿಗ್ರಾಮದಲ್ಲಿ ಅಂತಿಮವಾಗಿ, ಒಟ್ಟು 2,826 ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವುಗಳಲ್ಲಿ 2,700 ಹೆಸರುಗಳು ಮುಸ್ಲಿಮರದ್ದಾಗಿವೆ. ಅಂದರೆ, ಪಟ್ಟಿಯಿಂದ ಕೈಬಿಡಲಾದವರಲ್ಲಿ 95.5%ರಷ್ಟು ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಹೆಚ್ಚು ಸಂಖ್ಯೆಯ ಮುಸ್ಲಿಮರನ್ನು ಹೊರಗಿಟ್ಟಿರುವ ಕುರಿತು ಪ್ರತಿಕ್ರಿಯಿಸಿರುವ ಕಲ್ಕತ್ತಾದ ಸಂಶೋಧನಾ ಸಂಸ್ಥೆ ‘ಸಬರ್ ಇನ್‌ಸ್ಟಿಟ್ಯೂಟ್‌’ನ ಸಾಬಿರ್ ಅಹಮದ್, “ಮುಸ್ಲಿಂ ಮತದಾರರನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟ್ಟಿಯಿಂದ ತೆಗೆದುಹಾಕಿರುವುದು ಎಸ್‌ಐಆರ್ ಪ್ರಕ್ರಿಯೆಯ ಮೇಲೆ ಗಂಭೀರ ಅನುಮಾನಗಳನ್ನು ಮೂಡಿಸಿದೆ. ಒಂದು ನಿರ್ದಿಷ್ಟ ಪಕ್ಷಕ್ಕೆ ಚುನಾವಣಾ ಲಾಭ ಮಾಡಿಕೊಡುವ ಸಲುವಾಗಿ ರಾಜಕೀಯ ಅಜೆಂಡಾದೊಂದಿಗೆ ಈ ಪ್ರಕ್ರಿಯೆ ನಡೆದಂತೆ ತೋರುತ್ತಿದೆ. ಮೇಲ್ಮನವಿ ಪ್ರಕ್ರಿಯೆಯು ಸಮಯ ತೆಗೆದುಕೊಳ್ಳುವುದರಿಂದ, ಪಟ್ಟಿಯಿಂದ ಹೆಸರನ್ನು ಕಳೆದುಕೊಂಡವರು ಈ ಬಾರಿ ಮತ ಚಲಾಯಿಸುವ ಸಾಧ್ಯತೆ ಕಡಿಮೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಚುನಾವಣೆ 2026 | ಹಿಮಂತ, ಮಮತಾ, ಸ್ಟಾಲಿನ್, ಪಿಣರಾಯಿ – ಯಾರಿಗೆ ಉಳಿಯಲಿದೆ ಅಧಿಕಾರ?

2021ರ ವಿಧಾನಸಭಾ ಚುನಾವಣೆ ಸಮಯದಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಒಟ್ಟು ಮತದಾರರಲ್ಲಿ 26% (68,000)ರಷ್ಟಿತ್ತು.

ಅಂದಿನ ಚುನಾವಣೆಯಲ್ಲಿ ನಂದಿಗ್ರಾಮವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ನಡುವಿನ ಕದನಕ್ಕೆ ಸಾಕ್ಷಿಯಾಗಿತ್ತು. ಈ ಚುನಾವಣೆಯಲ್ಲಿ ಸುವೇಂದು ಕೇವಲ 2,000ಕ್ಕೂ ಕಡಿಮೆ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮಮತಾ ಬ್ಯಾನರ್ಜಿ ಅವರು ಈ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣವು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಇನ್ನೂ ವಿಚಾರಣೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಬೀದರ್‌ | ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿ ದಾಳಿ, ಬ್ರಿಮ್ಸ್‌ಗೆ ದಾಖಲು

ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ,...