ಬಂಗಾಳ ಚುನಾವಣೆ | ಅಮಿತ್ ಶಾ, ಸುವೇಂದು ‘ರೋಡ್‌-ಶೋ’ ವೇಳೆ ಅವ್ಯವಸ್ಥೆ: ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು

Date:

ಕೋಲ್ಕತ್ತಾದ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ವೇಳೆ ಅವ್ಯವಸ್ಥೆ ಉಂಟಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಚುನಾವಣಾ ಆಯೋಗವು ಆದೇಶಿಸಿದೆ.

- Advertisement -

ಏಪ್ರಿಲ್ 2ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಸಿದ್ದರು. ಆಗಿನ, ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು. ಮೆರವಣಿಗೆಯು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸಮೀಪವಿರುವ ಕಾಳಿಘಾಟ್ ತಲುಪಿದಾಗ, ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಮುಖಾಮುಖಿಯಾಗಿ ಘೋಷಣೆಗಳನ್ನು ಕೂಗಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಲೇಖನ ಓದಿದ್ದೀರಾ?: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮತದಾರರ ಪ್ರಚಾರ, ಪಾಠ ಕಲಿಯುವುದೇ ಹೈಕಮಾಂಡ್?

ಈ ಹಿನ್ನೆಲೆ ಕೋಲ್ಕತ್ತಾ ದಕ್ಷಿಣ ವಿಭಾಗದ ಡಿಸಿಪಿ ಸಿದ್ಧಾರ್ಥ ದತ್ತಾ, ಅಲಿಪೋರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಿಯಂಕರ್ ಚಕ್ರವರ್ತಿ, ಹೆಚ್ಚುವರಿ ಇನ್ಸ್‌ಪೆಕ್ಟರ್ ಚಂಡಿ ಚರಣ್ ಬ್ಯಾನರ್ಜಿ ಹಾಗೂ ಸಾರ್ಜೆಂಟ್ ಸೌರಭ್ ಚಟರ್ಜಿ ಅವರನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲು ಬಂಗಾಳ ಗೃಹ ಇಲಾಖೆಗೆ ಆಯೋಗ ಸೂಚಿಸಿದೆ.

ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಮತ್ತು ಸೂಕ್ತ ಭದ್ರತೆ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಈಗ ಈ ಕ್ರಮ ಕೈಗೊಳ್ಳಲಾಗಿದೆ. ತೆರವಾದ ಸ್ಥಾನಗಳಿಗೆ ತಕ್ಷಣವೇ ಅಧಿಕಾರಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಆಯೋಗ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...