ಬಂಗಾಳ ಚುನಾವಣೆ | ಬಿಜೆಪಿ ಗೆದ್ದರೆ ‘ಉತ್ತರ ಪ್ರದೇಶ ಶೈಲಿಯಲ್ಲಿ ಎನ್‌ಕೌಂಟರ್’: ದಿಲೀಪ್ ಘೋಷ್ ವಿವಾದ

Date:

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಪೊಲೀಸರ ಕೆಲಸಗಳು ಸಂಪೂರ್ಣ ರೂಪಾಂತರಗೊಳ್ಳುತ್ತವೆ. ಅಪರಾಧಿಗಳ ವಿರುದ್ಧ ‘ಉತ್ತರ ಪ್ರದೇಶ ಶೈಲಿಯ ಎನ್-ಕೌಂಟರ್‌’ಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ವಿವಾದಾತ್ಮಕ ಪೊಲೀಸ್ ‘ಎನ್‌ಕೌಂಟರ್’ ಮಾದರಿಯಿಂದ ಹೆಚ್ಚು ಆಕ್ರೋಶಕ್ಕೆ ಗುರಿಯಾಗುತ್ತದೆ. ಅದೇ ‘ಎನ್‌ಕೌಂಟರ್‌’ ಮಾದರಿಯನ್ನು ಬಂಗಾಳದಲ್ಲಿಯೂ ಬಿಜೆಪಿ ಜಾರಿಗೊಳಿಸುತ್ತದೆ ಎಂದು ಘೋಷ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಂಗಾಳದ ಖರಗ್‌ಪುರ ಕ್ಷೇತ್ರದ ಅಭ್ಯರ್ಥಿಯಾಗಿರುವ ಘೋಷ್, ತಮ್ಮ ಚುನಾವಣಾ ಪ್ರಚಾರದಲ್ಲಿ; “ಪಶ್ಚಿಮ ಬಂಗಾಳದ ಪೊಲೀಸರು ಪ್ರಸ್ತುತ ಆಡಳಿತಾರೂಢ ಟಿಎಂಸಿ ಆದೇಶದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅಪರಾಧಿಗಳು ಮತ್ತು ‘ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮೇ 4ರ ನಂತರ ಎಲ್ಲವೂ ಬದಲಾಗಲಿದೆ. ಇಂದು ನೀವು ಮಾಫಿಯಾಗಳೊಂದಿಗೆ ಕುಳಿತು ಚಹಾ ಕುಡಿಯುತ್ತಾ ಮತ್ತು ಭ್ರಷ್ಟ ನಾಯಕರ ‘ಚಮಚಾಗಳಂತೆ’ ವರ್ತಿಸುತ್ತಿರುವುದನ್ನು ನೋಡುತ್ತಿರುವ ಪೊಲೀಸರು ತಮ್ಮ ಗುಣವನ್ನು ಬದಲಾಯಿಸಿಕೊಳ್ಳಲಿದ್ದಾರೆ. ಇದೇ ಪೊಲೀಸರು ಉತ್ತರ ಪ್ರದೇಶದ ಶೈಲಿಯಲ್ಲಿ ಎನ್-ಕೌಂಟರ್‌ಗಳನ್ನು ನಡೆಸಲಿದ್ದಾರೆ ಮತ್ತು ಅಪರಾಧಿಗಳನ್ನು ಜೈಲಿಗಟ್ಟಲಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಘೋಷ್‌ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಟಿಎಂಸಿ, “ಬಿಜೆಪಿ ಬಹಿರಂಗವಾಗಿ ಕಾನೂನುಬಾಹಿರ ಹಿಂಸಾಚಾರವನ್ನು ಬೆಂಬಲಿಸುತ್ತಿದೆ. ಬಿಜೆಪಿ ಇತರ ರಾಜ್ಯಗಳಿಂದ ‘ಎನ್‌ಕೌಂಟರ್ ರಾಜ್’ ಮಾದರಿಯನ್ನು ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದೆ.

“ಎನ್‌ಕೌಂಟರ್ ಸಂಸ್ಕೃತಿಯು ಉತ್ತರ ಪ್ರದೇಶದಲ್ಲಿ ನಡೆಯುತ್ತದೆ, ಬಂಗಾಳದಲ್ಲಲ್ಲ. ಚುನಾವಣಾ ಆಯೋಗವು ಅವರ ಭಾಷಣವನ್ನು ಗಮನಿಸಬೇಕು,” ಎಂದು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...