ಬಂಗಾಳ | ಮಾವೋವಾದಿ ಶೈಲಿಯಲ್ಲಿ ಕಾಣಿಸಿಕೊಂಡ ಪೋಸ್ಟರ್!

Date:

ಭೀಕರ ಕಾರ್ಯಾಚರಣೆಗಳ ಮೂಲಕ ದೇಶವನ್ನು ನಕ್ಸಲ್ ಮುಕ್ತ ಮಾಡಲು ಮುಂದಾಗಿದ್ದ ಮೋದಿ ಸರ್ಕಾರ, ಕಳೆದ ವಾರವಷ್ಟೇ ‘ಭಾರತವು ನಕ್ಸಲ್ ಮುಕ್ತ’ವಾಗಿದೆ ಎಂದು ಘೋಷಿಸಿದೆ. ಇದಾದ ಕೆಲವೇ ದಿನಗಳಲ್ಲಿ, ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ‘ಮಾವೋವಾದಿ’ (ನಕ್ಸಲ್) ಶೈಲಿಯ ಪೋಸ್ಟರ್‌ ಕಾಣಿಸಿಕೊಂಡಿದೆ. ಚರ್ಚೆ ಹುಟ್ಟುಹಾಕಿದೆ.

- Advertisement -

ಬಂಗಾಳದ ಪುರುಲಿಯಾ ಜಿಲ್ಲೆಯ ಸೂಕ್ಷ್ಮಪ್ರದೇಶವಾದ ಜಂಗಲ್‌ಮಹಲ್‌ನ ಕೆಲವು ಭಾಗಗಳಲ್ಲಿ ಮಾವೋವಾದಿ ಶೈಲಿಯಲ್ಲಿ ಭಿತ್ತಿಪತ್ರಗಳು ಪತ್ತೆಯಾಗಿವೆ. ಘಾಟ್‌ಬೇರಾ-ಕೆರುವ ವಲಯದ ಬೀಟ್ ಕಚೇರಿಯೊಂದರ ಬಳಿ ಪತ್ತೆಯಾದ ಪೋಸ್ಟರ್‌ಗಲ್ಲಿ, ಬಿಳಿ ಕಾಗದದ ಮೇಲೆ ಕೆಂಪು ಶಾಯಿಯಿಂದ ಬರೆದ ಘೋಷಣೆಗಳು ಮತ್ತು ಸಂದೇಶಗಳಿವೆ. ಇವುಗಳ ಮೇಲೆ ‘ಸಿಪಿಐ (ಮಾವೋವಾದಿ)’ ಹೆಸರಿನ ಸಹಿಯೂ ಇದೆ ಎಂದು ಭದ್ರತಾ ಪಡೆಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪೋಸ್ಟರ್‌ಗಳಲ್ಲಿ; “ಜಂಗಲ್‌ಮಹಲ್ ಪ್ರದೇಶದಲ್ಲಿ ಸರಿಯಾದ ರಸ್ತೆಗಳ ನಿರ್ಮಾಣ, ಉದ್ಯೋಗಾವಕಾಶಗಳು, ಸರ್ಕಾರಿ ಯೋಜನೆಗಳಿಂದ ವಂಚಿತರಾದವರಿಗೆ ವಸತಿ ಸೌಕರ್ಯ ಒದಗಿಸಬೇಕು. ವಸತಿ ಹಂಚಿಕೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು” ಎಂಬ ಸ್ಥಳೀಯ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಬರೆಯಲಾಗಿದೆ.

ಅಲ್ಲದೆ, ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು ಮತ್ತು ಬ್ಲಾಕ್ ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆಗಳನ್ನು ನೀಡಲಾಗಿದೆ. ಕೆಲವು ಪೋಸ್ಟರ್‌ಗಳಲ್ಲಿ ಅಕ್ರಮ ಮದ್ಯದ ದಂಧೆಯನ್ನು ಹತ್ತಿಕ್ಕಲು, ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಮರ ಕಡಿಯುವುದನ್ನು ನಿಷೇಧಿಸಲು ಕರೆ ನೀಡಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳಿಗೂ ಬೆದರಿಕೆ ಹಾಕಲಾಗಿದೆ.

ಪುರುಲಿಯಾದಲ್ಲಿ ಈ ಹಿಂದೆ ನಕ್ಸಲ್ ಚಟುವಟಿಕೆಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದವು. ಹೀಗಾಗಿ, ಈ ಪೋಸ್ಟರ್‌ಗಳು ಹೆಚ್ಚು ಗಮನ ಸೆಳೆದಿವೆ. ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪೋಸ್ಟರ್‌ಗಳನ್ನು ತೆರವುಗೊಳಿಸಿವೆ, ಪೋಸ್ಟರ್‌ ಅಂಟಿಸಿದವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ.

ಕುತೂಹಲಕಾರಿ ಸಂಗತಿಯೆಂದರೆ, ಈ ಪೋಸ್ಟರ್‌ಗಳನ್ನು ಈ ಹಿಂದಿನ ಮಾವೋವಾದಿ ಹೋರಾಟಗಾರರು ಬಳಸುತ್ತಿದ್ದ ಕಾಗದಕ್ಕಿಂತ ಭಿನ್ನವಾಗಿ ಎ-4 ಗಾತ್ರದ ಕಾಗದದ ಮೇಲೆ ಮುದ್ರಿಸಲಾಗಿದೆ. ಈ ಪೋಸ್ಟರ್‌ಗಳ ಮೂಲ ಮತ್ತು ಅಧಿಕೃತತೆಯನ್ನು ನಿರ್ಧರಿಸಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ಅಧಿಕಾರಿಗಳು ಈ ಬೆಳವಣಿಗೆಯನ್ನು ಗಂಭೀರ ಭದ್ರತಾ ಕಾಳಜಿಯೆಂದು ಪರಿಗಣಿಸಿದ್ದಾರೆ. ಪ್ರದೇಶದಲ್ಲಿ ಗಸ್ತು ಮತ್ತು ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...