ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

Date:

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು ಕಂಡುಬಂದಿವೆ.

ಆಹಾರ ಗುಣಮಟ್ಟ ಇಲಾಖೆಯು ನಡೆಸಿದ ದಾಳಿಯಲ್ಲಿ ಅವಧಿ ಮೀರಿದ 100 ಕೆಜಿ ಉದ್ದಿನ ಬೇಳೆ, 10 ಕೆ ಜಿ ಮೊಸರು ಹಾಗೂ 8 ಲೀಟರ್‌ ಹಾಲು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ 450 ಕೆಜಿ ಯಾವುದೇ ಕಂಪನಿಯ ಲೇಬಲ್‌ ಹೊಂದಿರದ ಕಚ್ಚಾ ಅಕ್ಕಿ, 20 ಕೆಜಿ ಅಲಸಂದೆ ಕಾಳು ಹಾಗೂ 300 ಕೆಜಿ ಬೆಲ್ಲವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದಾಳಿ ನಡೆಸುವ ಸಂದರ್ಭದಲ್ಲಿ ರಾಮೇಶ್ವರ ಕಫೆಯಲ್ಲಿ ಆಹಾರ ನಿರ್ವಹಣೆಗಾಗಿ ವೈದ್ಯಕೀಯ ದೇಢೀಕರಣ ಪ್ರಮಾಣಪತ್ರ ಕೂಡ ಸಲ್ಲಿಸಲಾಗಿಲ್ಲ. ಕಸದ ಡಬ್ಬಿಯನ್ನು ಕೂಡ ಸರಿಯಾಗಿ ಮುಚ್ಚಿರಲಾಗಿರಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಇಂದು ಹೈದರಾಬಾದ್‌ನ ಹಲವು ಕಡೆಗಳಲ್ಲಿರುವ ಹೋಟಲ್‌ಗಳ ಮೇಲೆ ದಾಳಿ ನಡೆಸಿದ್ದು, ಬಹುತೇಕ ಹೆಸರುವಾಸಿಯಾದ ಹೋಟಲ್‌ಗಳಲ್ಲಿ ಸ್ವಚ್ಛತೆ ಗುಣಮಟ್ಟವನ್ನು ಕಾಯ್ದುಕೊಂಡಿರಲಿಲ್ಲ. ಸ್ವಚ್ಛತೆ ಕಾಯ್ದುಕೊಳ್ಳದ ಹೋಟಲ್‌ಗಳ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಈ ವರ್ಷದ ಜನವರಿಯಲ್ಲಿ ಹೈದರಾಬಾದ್‌ನ ಮೇದಾಪುರ ಪ್ರದೇಶದಲ್ಲಿ ತನ್ನ ಶಾಖೆಯನ್ನು ಆರಂಭಿಸಿತ್ತು.

ಇತ್ತೀಚಿಗೆ ಮಾರ್ಚ್‌ 1 ರಂದು ಬೆಂಗಳೂರಿನ ಕುಂದಲಹಳ್ಳಿ ಶಾಖೆಯ ರಾಮೇಶ್ವರಂ ಕಫೆಯಲ್ಲಿ ಬಾಂಬ್‌ ಸ್ಫೋಟವುಂಟಾಗಿ 10 ಮಂದಿ ಗಾಯಗೊಂಡಿದ್ದರು. ಘಟನೆಗೆ ಕಾರಣರಾದವರನ್ನು ಎನ್‌ಐಎ ಬಂಧಿಸಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...