ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆಂಬ ಆರೋಪದಡಿ ಬಂಧನಕ್ಕೊಳಗಾಗಿದ್ದ 31 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನ ಪೊಲೀಸರು ಗಡೀಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಗಡಿಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ 31 ಮಂದಿಯನ್ನು ಇಂದು ಬೆಳಗ್ಗೆ ಬಿಗಿ ಭದ್ರತೆಯೊಂದಿಗೆ ನಗರದ ಎಸ್ಎಂವಿಟಿ ರೈಲ್ವೆ ಟರ್ಮಿನಲ್ಗೆ ಕರೆತಂದು ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ.
ಸುಮಾರು 20 ಮಂದಿ ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಈ ಗಡೀಪಾರು ಪ್ರಕ್ರಿಯೆ ನಡೆಯುತ್ತಿದೆ. ನಾಳೆ ಸಂಜೆ 5 ಗಂಟೆಯ ವೇಳೆಗೆ ಪೊಲೀಸರು ಬಾಂಗ್ಲಾದೇಶದ ಗಡಿ ಸಮೀಪದ ಪಶ್ಚಿಮ ಬಂಗಾಳದ ಮಾಲ್ದಾ ತಲುಪುವ ನಿರೀಕ್ಷೆಯಿದೆ. ಮಾಲಾ ತಲುಪಿದ ಬಳಿದ ಮುಂದಿನ ಗಡೀಪಾರು ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.




