ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್‌ ಸಿಂಗ್, ಸೋನು ಸೂದ್ ಸೇರಿ ಹಲವರು ಆಸ್ತಿ ಮುಟ್ಟುಗೋಲು

Date:

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಮತ್ತು ಅಕ್ರಮ ಹಣ ವರ್ಗಾವಣೆ ಕ್ರಮದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಮತ್ತು ರಾಬಿನ್ ಉತ್ತಪ್ಪ, ನಟ ಸೋನು ಸೂದ್, ನಟಿ ಮಿಮಿ ಚಕ್ರವರ್ತಿ ಸೇರಿದಂತೆ ಹಲವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

- Advertisement -

ಸುಮಾರು 1,000 ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಕ್ರಿಕೆಟಿಗರು, ನಟ-ನಟಿಯರ ಒಟ್ಟು .73 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಣ ವರ್ಗಾವಣೆ ತಡೆ ಕಾಯ್ದೆ (PMLA)-2002ರ ಅಡಿಯಲ್ಲಿ ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕ್ರಿಕೆಟಿಗ ಯುವರಾಜ್ ಸಿಂಗ್‌, ರಾಬಿನ್ ಉತ್ತಪ್ಪ, ಬಾಲಿವುಡ್ ನಟಿ ಊರ್ವಶಿ ರೌಟೇಲಾ, ರೌಟೇಲಾ ಅವರ ತಾಯಿ ಮೀರಾ ರೌಟೇಲಾ, ನಟ ಸೋನು ಸೂದ್, ಬಂಗಾಳಿ ನಟ ಅಂಕುಶ್ ಹಜ್ರಾ ಹಾಗೂ ಟಿಎಂಸಿ ಮಾಜಿ ಸಂಸದೆ, ನಟಿ ಮಿಮಿ ಚಕ್ರವರ್ತಿ ಅವರ ಆಸ್ತಿಗಳನ್ನು ಮುಟ್ಟುಹ ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳಲ್ಲಿ ಯುವರಾಜ್ ಸಿಂಗ್‌ ಅವರ ಸುಮಾರು 2.5 ಕೋಟಿ ರೂ., ರಾಬಿನ್ ಉತ್ತಪ್ಪ ಅವರ 8.26 ಲಕ್ಷ ರೂ., ಸೋನು ಸೂದ್ ಅವರ 1 ಕೋಟಿ ರೂ., ಮಿಮಿ ಚಕ್ರವರ್ತಿ ಅವರ 59 ಲಕ್ಷ ರೂ., ಅಂಕುಶ್ ಹಜ್ರಾ ಅವರ 47 ಲಕ್ಷ ರೂ., ಮೀರಾ ರೌಟೇಲಾ ಅವರ 2.02 ಕೋಟಿ ರೂ. ಸೇರಿವೆ ಎಂದು ಇಡಿ ವಿವರಿಸಿದೆ.

ಈ ಲೇಖನ ಓದಿದ್ದೀರಾ?:ದಾರುಣವಾಗಿದೆ ಬಾಲ ನ್ಯಾಯ ವ್ಯವಸ್ಥೆ; ನ್ಯಾಯಕ್ಕಾಗಿ ಕಾಯುತ್ತಿದ್ದಾರೆ 50,000 ಬಾಲಾಪರಾಧಿಗಳು

ಕಡಲಾಚೆಯ ಅಕ್ರಮ ಆಫ್‌ಶೋರ್ ಬೆಟ್ಟಿಂಗ್ ವೇದಿಕೆ ‘1xBat, 1xBat ಸ್ಪೋರ್ಟಿಂಗ್ ಹಾಗೂ 1xBet’ನ ನಿರ್ವಾಹಕರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಹಲವು ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ. ಈ ಬ್ರ್ಯಾಂಡ್‌ಗಳು ಭಾರತದಲ್ಲಿ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಕಾರ್ಯಾಚರಣೆಯನ್ನು ನಡೆಸಿವೆ. ಇವುಗಳನ್ನು ಭಾರತೀಯ ಸೆಲೆಬ್ರಿಟಿಗಳು ಪ್ರಚಾರ ಮಾಡಿದ್ದಾರೆ. ಅದಕ್ಕಾಗಿ ವಿದೇಶಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಪ್ರಚಾರಕ್ಕೆ ಹಣ ಪಡೆಯಲು ವಿದೇಶಿ ಮಧ್ಯವರ್ತಿಗಳ ಮೂಲಕ ಹಣ ವರ್ಗಾವಣೆ ಮಾಡಿ, ಅಕ್ರಮ ಬೆಟ್ಟಿಂಗ್ ವೇದಿಕೆಗಳ ಮೂಲವನ್ನು ಮರೆ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...