ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹ ರಾವ್, ಚರಣ್ ಸಿಂಗ್, ವಿಜ್ಞಾನಿ ಸ್ವಾಮಿನಾಥನ್‌ಗೆ ಭಾರತ ರತ್ನ ಪ್ರಶಸ್ತಿ

Date:

ಕೇಂದ್ರ ಸರ್ಕಾರ ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದೆ. ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್‌, ಚರಣ್‌ ಸಿಂಗ್‌ ಹಾಗೂ ಹಸಿರು ಕ್ರಾಂತಿಯ ಹರಿಕಾರ ಎಂ ಎಸ್‌ ಸ್ವಾಮಿನಾಥನ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿದೆ.

ಕಳೆದ ವಾರ ಬಿಜೆಪಿ ನಾಯಕ ಎಲ್‌ ಕೆ ಅಡ್ವಾನಿ ಅವರಿಗೆ  ಭಾರತ ರತ್ನ ಘೋಷಿಸಲಾಗಿತ್ತು. 15 ದಿನಗಳ ಹಿಂದೆ ಹಿಂದುಳಿದ ವರ್ಗಗಳ ನಾಯಕ, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್‌ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ಘೋಷಿಸಲಾಗಿತ್ತು.

ಪಿ ವಿ ನರಸಿಂಹರಾವ್‌ ಅವರಿಗೆ ಘೋಷಣೆಯಾಗಿರುವ ಬಗ್ಗೆ ಮೊಮ್ಮಗ ಎನ್‌ ವಿ ಸುಬ್ಬಯ್ಯ, ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ಪ್ರದೇಶದವರಾದ ಚರಣ್ ಸಿಂಗ್ 1979 ಜುಲೈನಿಂದ ಜನವರಿ 1980ರ ಜನವರಿ 14ರವರೆಗೆ ಜನತಾ ಪಕ್ಷದ ಸರ್ಕಾರದಿಂದ ಭಾರತದ ಪ್ರಧಾನಿಯಾದ್ದರು. 1967 ಮತ್ತು 1970ರ ಅವಧಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿಯು ಸೇವೆ ಸಲ್ಲಿಸಿದ್ದರು.

ಅವಿಭಜಿತ ಆಂಧ್ರ ಪ್ರದೇಶದ ಕರೀಮ್‌ನಗರದ ಪಿ ವಿ ನರಸಿಂಹರಾವ್ ಜೂನ್‌ 21 1991 ರಿಂದ ಮೇ 16 1996ರ ವರೆಗೆ ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದರು. ಪ್ರಧಾನಿಯಾಗುವ ಮುನ್ನ 1970ರ ದಶಕದಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಭಾರತ ರತ್ನ ಘೋಷಣೆಯಾಗಿರುವ ಮತ್ತೋರ್ವ ಹಸಿರು ಕ್ರಾಂತಿಯ ಪಿತಾಮಹ ಎಂ ಎಸ್‌ ಸ್ವಾಮಿನಾಥನ್‌ ಅವರು ಆಗಸ್ಟ್ 7, 1925 ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದ್ದರು. ಅವರು ಕೃಷಿ ವಿಜ್ಞಾನಿ, ಸಸ್ಯ ತಳಿಶಾಸ್ತ್ರಜ್ಞ, ಆಡಳಿತಗಾರ ಮತ್ತು ಮಾನವತಾವಾದಿಯಾಗಿದ್ದರು.

ಭಾರತದ ಕಡಿಮೆ ಆದಾಯದ ರೈತರು ಹೆಚ್ಚು ಉತ್ಪಾದಿಸಲು ಸಹಾಯ ಮಾಡುವ ಹೆಚ್ಚಿನ ಇಳುವರಿ ನೀಡುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಕಳೆದ ವರ್ಷ ಸೆ.28ರಂದು ತಮ್ಮ 98ನೇ ವಯಸ್ಸಿನಲ್ಲಿ ಮೃತಪಟ್ಟಿದ್ದರು.

ಕಳೆದ ಒಂದು ತಿಂಗಳಲ್ಲಿ ಕೇಂದ್ರ ಸರ್ಕಾರ ಐವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದೆ.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ...

ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್‌...

ಪೆಟ್ರೋಲಿಯಂ ಮೇಲಿನ ವಿಂಡ್‌ಫಾಲ್ ತೆರಿಗೆ ಹೆಚ್ಚಳ

ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್‌ಫಾಲ್...

ಗುಜರಾತ್‌ | 2 ವರ್ಷದಿಂದ 3.8 ಲಕ್ಷ ಅರ್ಹ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ

ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ....