ಭೋಜಶಾಲಾ ಪ್ರಕರಣ: ನಮಾಜ್‌ಗೆ ಪರ್ಯಾಯ ಸ್ಥಳ ನೀಡುವ ಬಗ್ಗೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Date:

ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಶುಕ್ರವಾರದ ನಮಾಜ್‌ಗೆ ಪರ್ಯಾಯ ಸ್ಥಳವನ್ನು ಒದಗಿಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ನಮಾಜ್‌ಗಾಗಿ ಸರ್ಕಾರ ಗುರುತಿಸಿರುವ ಸ್ಥಳವು ಬಹಳ ದೂರದಲ್ಲಿದೆ ಎಂದು ಮುಸ್ಲಿಂ ಸಮುದಾಯದ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನೋಟಿಸ್‌ ನೀಡಲಾಗಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ.ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಮಂಗಳವಾರ ಈ ವಿಚಾರದ ವಿಚಾರಣೆ ನಡೆಸಿತು. ವಿವಾದಿತ ಸಂಕೀರ್ಣದ ಪಕ್ಕದಲ್ಲೇ ಪ್ರಾರ್ಥನಾ ಸ್ಥಳವನ್ನು ಒದಗಿಸುವ ಬಗ್ಗೆ ಮಧ್ಯಪ್ರದೇಶ ಸರ್ಕಾರದಿಂದ ಮಾಹಿತಿ ಪಡೆದು ತಿಳಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದ ಪೀಠ, ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ (ಜುಲೈ 24) ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಮುಸ್ಲಿಂ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಜೆಫಾ ಅಹಮದಿ, “ಶುಕ್ರವಾರದ ಪ್ರಾರ್ಥನೆಗಾಗಿ ಭೋಜಶಾಲಾ ಸಂಕೀರ್ಣದ ಬಳಿಯೇ ಬಯಲು ಜಾಗವನ್ನು ಗುರುತಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದಿಷ್ಟವಾಗಿ ಆದೇಶಿಸಿತ್ತು. ಆದರೆ, ಅಧಿಕಾರಿಗಳು ನೀಡಿರುವ ಜಾಗವು ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ. ಇದರಿಂದ ಪ್ರಾರ್ಥನೆ ಸಲ್ಲಿಸಲು ತೊಂದರೆಯಾಗುತ್ತಿದ್ದು, ನಾವು ಈಗಾಗಲೇ ಶುಕ್ರವಾರದ ನಮಾಜ್ ಅನ್ನು ತಪ್ಪಿಸಿಕೊಂಡಿದ್ದೇವೆ,” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮಧ್ಯಪ್ರದೇಶ ಸರ್ಕಾರದ ಪರ ವಕೀಲ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪರ್ಯಾಯ ಪ್ರಾರ್ಥನಾ ಸ್ಥಳವು ವಿವಾದಿತ ಸಂಕೀರ್ಣದಿಂದ ಸುಮಾರು 900 ಮೀಟರ್ ದೂರದಲ್ಲಿದೆಯೇ ಹೊರತು ಅರ್ಜಿದಾರರು ಹೇಳಿದಂತೆ ಎರಡು ಕಿ.ಮೀ. ದೂರದಲ್ಲಿಲ್ಲ. ನಾನು ಖುದ್ದಾಗಿ ಈ ವಿಚಾರವನ್ನು ಪರಿಶೀಲಿಸುತ್ತೇನೆ ಮತ್ತು ಅಗತ್ಯವಿದ್ದರೆ ಸರಿಪಡಿಸುತ್ತೇನೆ,” ಎಂದು ಪೀಠಕ್ಕೆ ಭರವಸೆ ನೀಡಿದರು.

ವಿಚಾರಣೆಯ ವೇಳೆ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರು, “ಸುಪ್ರೀಂ ಕೋರ್ಟ್‌ನ ಹಿಂದಿನ ನಿರ್ದೇಶನಗಳನ್ನು ಚಾಚೂತಪ್ಪದೆ ಜಾರಿಗೊಳಿಸಬೇಕು,” ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ನಮಾಜ್‌ಗಾಗಿ ಪಕ್ಕದಲ್ಲೇ ಸ್ಥಳಾವಕಾಶ ಒದಗಿಸುವ ಸಾಧ್ಯತೆಯ ಕುರಿತು ಸರ್ಕಾರದ ಸೂಚನೆಗಳನ್ನು ಪಡೆಯುವಂತೆ ತಿಳಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ನಿಗದಿಪಡಿಸಿದರು.

ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾವನ್ನು ‘ಸರಸ್ವತಿ ಮಂದಿರ’ ಎಂದು ಇತ್ತೀಚೆಗೆ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಅರ್ಜಿದಾರರು ಸಲ್ಲಿಸಿದ ಮೇಲ್ಮನವಿಗಳನ್ನು ಜುಲೈ 14ರಂದು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್, ವಿವಾದದ ಅಂತಿಮ ತೀರ್ಪು ಬರುವವರೆಗೆ ಮುಸ್ಲಿಂ ಸಮುದಾಯದವರು ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ಶುಕ್ರವಾರದ ನಮಾಜ್ ಮಾಡಲು ವಿವಾದಿತ ಸ್ಥಳದ ಪಕ್ಕದಲ್ಲಿಯೇ ಪ್ರತ್ಯೇಕ ಬಯಲು ಜಾಗವನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು.

ಧಾರಾದಲ್ಲಿರುವ ಭೋಜಶಾಲಾ ಸಂಕೀರ್ಣವು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದೀರ್ಘಕಾಲದ ವಿವಾದಕ್ಕೆ ಕಾರಣವಾಗಿದೆ. ಹಿಂದೂಗಳು ಇದನ್ನು ಪುರಾತನ ‘ಸರಸ್ವತಿ ಮಂದಿರ’ ಎಂದು ಪರಿಗಣಿಸಿದರೆ, ಮುಸ್ಲಿಮರು ಇದನ್ನು ‘ಕಮಾಲ್ ಮೌಲಾ ಮಸೀದಿ’ ಎಂದು ಪ್ರತಿಪಾದಿಸುತ್ತಾರೆ. ಪೂಜಾ ಹಕ್ಕುಗಳು ಮತ್ತು ಸ್ಮಾರಕದ ಐತಿಹಾಸಿಕ ಸ್ಥಾನಮಾನದ ಕುರಿತು ಸುದೀರ್ಘ ಕಾನೂನು ಹೋರಾಟಗಳು ನಡೆಯುತ್ತಿವೆ. ಸದ್ಯ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪಿನ ವಿರುದ್ಧದ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದ್ದು, ಅಂತಿಮ ತೀರ್ಪು ಬರುವವರೆಗೆ ಧಾರ್ಮಿಕ ಆಚರಣೆಗಳಿಗೆ ಮಧ್ಯಂತರ ವ್ಯವಸ್ಥೆ ಜಾರಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...