BREAKING NEWS | ಭೋಜಶಾಲಾ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್‌

Date:

ಭೋಜಶಾಲಾ ಸಂಕೀರ್ಣವನ್ನು ದೇವಾಲಯವೆಂದು ಮಧ್ಯಪ್ರದೇಶ ಹೈಕೋರ್ಟ್‌ ಘೋಷಿಸಿದೆ. ವಿವಾದಿತ ಭೋಜಶಾಲಾ ಸಂಕೀರ್ಣದ ಸ್ವರೂಪವು ದೇವಾಲಯದ ರೂಪದಲ್ಲಿದೆ ಎಂದು ಹೈಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.

- Advertisement -

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ ಪೀಠವು ಈ ಆದೇಶವನ್ನು ಪ್ರಕಟಿಸಿದೆ. ಭಾರತೀಯ ಪುರಾತತ್ವ ಇಲಾಖೆ (ASI) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ, ಈ ಇಡೀ ಸಂಕೀರ್ಣವು ಮೂಲತಃ ಸರಸ್ವತಿ ದೇವಸ್ಥಾನ ಮತ್ತು ಸಂಸ್ಕೃತ ಕಲಿಕಾ ಕೇಂದ್ರವಾಗಿತ್ತು ಎಂದು ಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಇದನ್ನು ಓದಿದ್ದೀರಾ? ಪತಿ ವಿರುದ್ಧದ ಅಸ್ವಾಭಾವಿಕ ಲೈಂಗಿಕ ಆರೋಪ ಮುಕ್ತಗೊಳಿಸಿದ ಮಧ್ಯ ಪ್ರದೇಶ ಹೈಕೋರ್ಟ್

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಭೋಜ್‌ಶಾಲಾ ಸಂಕೀರ್ಣ ದೇವಸ್ಥಾನವೋ ಅಥವಾ ಮಸೀದಿಯೋ ಎಂಬುದು ದಶಕಗಳ ಹಳೆಯ ವಿವಾದವಾಗಿದೆ. ಈ ಸ್ಥಳವನ್ನು ಹಿಂದೂಗಳು ವಾಗ್ದೇವಿ (ಸರಸ್ವತಿ) ದೇವಿಯ ದೇವಸ್ಥಾನ ಎಂದು ನಂಬಿದರೆ, ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.

2003ರ ASI ಆದೇಶದ ಪ್ರಕಾರ, ಹಿಂದೂಗಳು ಪ್ರತಿ ಮಂಗಳವಾರ ಮತ್ತು ವಸಂತ ಪಂಚಮಿಯಂದು ಪೂಜೆ ಸಲ್ಲಿಸಲು ಅವಕಾಶವಿತ್ತು. ಮುಸ್ಲಿಮರು ಪ್ರತಿ ಶುಕ್ರವಾರ ನಮಾಜ್ ಮಾಡಲು ಅವಕಾಶ ನೀಡಲಾಗಿತ್ತು.

ಹಿಂದೂ ಫ್ರಂಟ್ ಫಾರ್ ಜಸ್ಟಿಸ್, ಈ ಸ್ಥಳವು ಸಂಪೂರ್ಣವಾಗಿ ಹಿಂದೂ ದೇವಾಲಯವಾಗಿದ್ದು, ಅಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಬೇಕು ಮತ್ತು ವೈಜ್ಞಾನಿಕ ಸಮೀಕ್ಷೆ ನಡೆಸಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅದಾದ ಬಳಿಕ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಈ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆ (ASI Survey) ನಡೆಸಲು ಆದೇಶಿಸಿತ್ತು.

ಇದೀಗ ಸಮೀಕ್ಷೆಯ ವೇಳೆ ಪತ್ತೆಯಾದ ಪರಮಾರ ರಾಜರ ಕಾಲದ ನಾಣ್ಯಗಳು, ವಿಗ್ರಹಗಳು, ಯಜ್ಞಕುಂಡ ಮತ್ತು ಶಾಸನಗಳು ಇದು ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿವೆ ಎಂದು ನ್ಯಾಯಾಲಯ ಪರಿಗಣಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...