ಬೀದರ್‌ | ಸೋಯಾ ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಸಿಗುತ್ತಿಲ್ಲ: ಸಂಸದ ಸಾಗರ್‌ ಖಂಡ್ರೆ

Date:

‌ಬೀದರ್‌ ಜಿಲ್ಲೆಯಲ್ಲಿ ರೈತರು ಬೆಳೆದ ಸೋಯಾಬಿನ್ ಸಂಪೂರ್ಣ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿ ಖರೀದಿಸಿ ಎಲ್ಲ ರೈತರಿಗೆ ಬೆಂಬಲ ಬೆಲೆ ಲಾಭ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

- Advertisement -

ಲೋಕಸಭೆಯಲ್ಲಿ ಬುಧವಾರ ಗಮನ ಸೆಳೆದ ಅವರು, ʼಬೀದರ್‌ ಕ್ಷೇತ್ರದಲ್ಲಿ ವಾರ್ಷಿಕ 20 ಲಕ್ಷ ಕ್ವಿಂಟಲ್ ಸೋಯಾಬೀನ್ ಬೆಳೆ ಬೆಳೆಯಲಾಗುತ್ತಾದರೂ ಬೆಂಬಲ ಬೆಲೆ ಅಡಿಯಲ್ಲಿ ಕೇವಲ 2 ಲಕ್ಷ ಕ್ವಿಂಟಲ್‌ಗಿಂತ ಕಡಿಮೆ ಪ್ರಮಾಣದಲ್ಲಿ ಮಾತ್ರ ಖರೀದಿ ನಡೆಯುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಮುಗಿದಿರುವ ಕಾರಣಕ್ಕೆ ರೈತರಿಗೆ ಹೆಚ್ಚಿನ ಲಾಭ ಆಗಿಲ್ಲ. ಈ ಬೆಳೆ ಬೆಳೆದ ಶೇ 90ರಷ್ಟು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಲಾಭ ಸಿಕ್ಕಿಲ್ಲ. ಹೀಗಾಗಿ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕುʼ ಎಂದು ಆಗ್ರಹಿಸಿದರು.

‌ʼಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಎಕರೆಗೆ ಕೇವಲ 5 ಕ್ವಿಂಟಲ್‌ನಂತೆ ಒಟ್ಟು 20 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿರುವುದರಿಂದ ಹೆಚ್ಚಿನ ರೈತರು ಬೆಂಬಲ ಬೆಲೆ ಲಾಭದಿಂದ ವಂಚಿತರಾಗುತ್ತಿದ್ದಾರೆ. ಕ್ಷೇತ್ರದ ರೈತರ ಬಾಕಿ ಉಳಿದ ‌ಸಂಪೂರ್ಣ ಸೋಯಾಬಿನ್‌ ಎಂಎಸ್‌ಪಿ ಅಡಿಯಲ್ಲಿ ಖರೀದಿಸಬೇಕು. ಇದರೊಂದಿಗೆ ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...