BREAKING NEWS | ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

Date:

Advertisements

ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್‌ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತೆಪಡಬೇಕಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.

Advertisements

ಸದ್ಯಕ್ಕೆ ಒಂದು ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

ಚೀನಾದಲ್ಲಿ ಕಂಡು ಬಂದಿರುವ ಹೆಚ್‌ಎಂಪಿವಿ ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಕಳೆದ ವಾರ ತಿಳಿಸಿದ್ದರು.

ಚಳಿಗಾಲದಲ್ಲಿ ಉಸಿರಾಟದ ವೈರಸ್ ಸೋಂಕುಗಳು ಉಲ್ಬಣವಾಗುವುದು ಸಾಮಾನ್ಯ. ಯಾರಿಗಾದರೂ ಕೆಮ್ಮು ಮತ್ತು ಶೀತ ಇದ್ದರೆ ಅವರು ಇತರ ಜನರೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಬೇಕು. ಎಲ್ಲ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು. ಕೆಮ್ಮು, ಶೀತ ಬಂದಾಗ ಪ್ರತ್ಯೇಕ ಕರವಸ್ತ್ರ ಅಥವಾ ಟವೆಲ್ ಬಳಸಿ ಎಂದು ಸಲಹೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ನಾವು ದೇಶದಲ್ಲಿ ಉಸಿರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಅಂಕಿಅಂಶವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್‌ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದರು.

ಎಚ್‌ಎಂಪಿವಿ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ. ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ಸೂಕ್ತ ಮುಂಜಾಗ್ರತೆ ಮುಖ್ಯವಾಗಿದೆ. ಚೀನಾದಲ್ಲಿ ಹೆಚ್‌ಎಂಪಿವಿ ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್‌ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು ಎಂದು ವಿವರಿಸಿದ್ದರು.

ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ಉಸಿರಾಟದ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ.

ಎಚ್‌ಎಂಪಿವಿ ಎಂದರೇನು?
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್​ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ.

ಕೊರೊನಾವೈರಸ್ ಅಥವಾ ಕೋವಿಡ್‌-19 ಒಂದು ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು SARS-CoV-2 ವೈರಸ್‌ನಿಂದ ಉಂಟಾಗುತ್ತದೆ. ಎಚ್​ಎಂಪಿವಿ ವೈರಸ್ ಮತ್ತು ಕೊರೊನಾ ವೈರಸ್‌ನ ಕೆಲವು ರೀತಿಯಲ್ಲಿ ಹೋಲಿಕೆಯನ್ನು ಒಳಗೊಂಡಿವೆ. ಎರಡೂ ವೈರಸ್‌ಗಳು ಎಲ್ಲ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗೆ ಕಾರಣವಾಗುತ್ತವೆ. ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರಲ್ಲಿ ಕಂಡುಬರುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X