ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ

Date:

ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ (ಟಿಟಿಎಎಡಿಸಿ) ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಸೋಲು ಕಂಡಿದೆ. ಟಿಪ್ರಾ ಮೋಥಾ ಪಾರ್ಟಿ (TMP) 24 ಸ್ಥಾನಗಳಲ್ಲಿ ಗೆಲುವು ಕಂಡಿದೆ.

- Advertisement -

ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಯು ರಾಜ್ಯದ ಭೌಗೋಳಿಕ ಪ್ರದೇಶದ ಸುಮಾರು 70% ರಷ್ಟು ಆಡಳಿತ ವ್ಯಾಪ್ತಿಯನ್ನು ಹೊಂದಿದೆ. ಸುಮಾರು 15 ಲಕ್ಷ ಜನರ ನೆಲೆಯಾಗಿದೆ. ಬಿಜೆಪಿ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿತ್ತು. ಆದರೆ ಭಾರೀ ಹಿನ್ನಡೆಯನ್ನು ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನು ಓದಿದ್ದೀರಾ? ‘ಭೀಕರ ಹಿಂಸಾಚಾರದಲ್ಲಿ ತೊಡಗಿಕೊಳ್ಳುವ ಗುಪ್ತ ಸಂಸ್ಥೆಗಳು!’

ಇನ್ನು ಚುನಾವಣೆ ಬಳಿಕ ಮಾತನಾಡಿದ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ, “ಟಿಪ್ರಾ ಮೋಥಾ ಗೆಲುವಿಗೆ ನಾವು ಅಭಿನಂದಿಸುತ್ತೇವೆ. ಜನರ ಜನಾದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ಈ ಸೋಲು ನಮಗೆ ಕಲಿಯಲು ಒಂದು ಅವಕಾಶವೆಂದು ನಾವು ಪರಿಗಣಿಸುತ್ತೇವೆ” ಎಂದು ಹೇಳಿದ್ದಾರೆ.

“ಚುನಾವಣೆಯಲ್ಲಿ ಪ್ರಚಾರ ಮಾಡಿದ ಬಿಜೆಪಿಯ ಎಲ್ಲ ಕಾರ್ಯಕರ್ತರ ಧೈರ್ಯ, ಕಠಿಣ ಪರಿಶ್ರಮ ಮತ್ತು ಸಮರ್ಪಣೆಗಾಗಿ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ” ಎಂದು ಸಹಾ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೊಂದೆಡೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಸತತ ಎರಡನೇ ಬಾರಿಗೆ ಖಾತೆಯನ್ನು ತೆರೆಯುವಲ್ಲಿ ವಿಫಲವಾಗಿವೆ. ವಿರೋಧ ಪಕ್ಷದ ನಾಯಕ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು “ಪ್ರಾದೇಶಿಕ ಪಕ್ಷದ ಪರವಾಗಿ ಅಲೆ ಬೀಸುತ್ತಿದೆ ಎಂದು ನಾವು ಮೊದಲೇ ಊಹಿಸಿದ್ದೆವು. ಆದರೆ ಅದು ಇಷ್ಟೊಂದು ಪ್ರಮಾಣದಲ್ಲಿರುತ್ತದೆ ಎಂದು ನಾವು ಊಹಿಸಿರಲಿಲ್ಲ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಟಿಎಂಪಿ ಸಂಸ್ಥಾಪಕ ಪ್ರದ್ಯೋತ್ ಕಿಶೋರ್ ದೇಬ್ಬರ್ಮಾ ಇಬ್ಬರೂ ಚುನಾವಣಾ ಪ್ರಚಾರದ ಸಮಯದಲ್ಲಿ ಕೋಮುವಾದದ ಭಾಷಣಗಳನ್ನು ಮಾಡಿದರು” ಎಂದೂ ದೂರಿದ್ದಾರೆ.

ಇನ್ನು, “ಟಿಎಂಪಿಯ ಅಭೂತಪೂರ್ವ ಗೆಲುವಿನ ಹಿಂದಿನ ಕಾರಣಗಳಲ್ಲಿ ಬಿಜೆಪಿಯೊಳಗಿನ ಗುಂಪುಗಾರಿಕೆಯೂ ಒಂದು” ಎಂದು ಹಿರಿಯ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ತ್ರಿಪುರಾದಲ್ಲಿ ರಾಜಕೀಯ ಭಾಷೆಯಾದ ಹಿಂಸಾಚಾರ; ಗೂಂಡಾ ಆಳ್ವಿಕೆ ನಡೆಸುತ್ತಿದೆಯಾ ಬಿಜೆಪಿ?

ತ್ರಿಪುರಾ ವಿಧಾನಸಭೆಯು ಒಟ್ಟು 60 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2023ರ ಸೆಪ್ಟೆಂಬರ್‌ನಲ್ಲಿ ನಡೆದ ಧನ್‌ಪುರ್ ಮತ್ತು ಬೊಕ್ಸಾನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿತು. ಬೊಕ್ಸಾನಗರ ಕ್ಷೇತ್ರವು ಈ ಮೊದಲು ಸಿಪಿಐ(ಎಂ) ವಶದಲ್ಲಿತ್ತು, ಹೀಗಾಗಿ ಬಿಜೆಪಿಯ ಬಲವು 33ಕ್ಕೆ ಏರಿತು.

ಬಿಜೆಪಿಯು ತನ್ನ ಮಿತ್ರಪಕ್ಷಗಳಾದ ಐಪಿಎಫ್‌ಟಿ (1 ಸದಸ್ಯ) ಮತ್ತು ಇತ್ತೀಚೆಗೆ ಮೈತ್ರಿ ಮಾಡಿಕೊಂಡಿರುವ 13 ಸದಸ್ಯ ಬಲ ಹೊಂದಿರುವ ತಿಪ್ರಾ ಮೋಥಾ ಪಕ್ಷ (TMP) ಜೊತೆಗೆ ಸೇರಿ ಒಟ್ಟು 47 ಸದಸ್ಯರ ಬಲದೊಂದಿಗೆ ಆಡಳಿತ ನಡೆಸುತ್ತಿದೆ. ಆದರೆ ಇದೀಗ ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ (ಟಿಟಿಎಎಡಿಸಿ) ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷ ಟಿಎಂಪಿ ಪ್ರತ್ಯೇಕವಾಗಿಯೇ ಸ್ಪರ್ಧಿಸಿದೆ. ತ್ರಿಪುರಾದಲ್ಲಿ ಶೇ.70ರಷ್ಟು ಆಡಳಿತವನ್ನು ಹೊಂದಿರುವ ಈ ಸ್ಥಾನಗಳಲ್ಲಿ ಟಿಎಂಪಿ ಗೆದ್ದಿದ್ದು ಬಿಜೆಪಿ ತೀವ್ರ ಹಿನ್ನಡೆ ಕಂಡುಕೊಂಡಿದೆ. 2021ರಲ್ಲಿ 9 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ರಾಜ್ಯದಲ್ಲಿ ಸರ್ಕಾರ ಹೊಂದಿದ್ದರೂ ಬರೀ ನಾಲ್ಕು ಸ್ಥಾನಗಳನ್ನು ಹೊಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...