ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಹಗರಣ: ಸಿಬಿಐ ತನಿಖೆಗೆ ವಹಿಸಿದ ಕೇಂದ್ರ

Date:

ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ವಿತರಣೆ ಯೋಜನೆಯಲ್ಲಿ ನಡೆದಿರುವ ಬೃಹತ್ ಹಗಣವೊಂದು ಬಯಲಿಗೆ ಬಂದಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನದಡಿ ನೀಡಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣವನ್ನು ಕೇಂದ್ರೀಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಕೇಂದ್ರ ತನಿಖಾ ಮಂಡಳಿಗೆ (ಸಿಬಿಐ) ಹಸ್ತಾಂತರಿಸಿದೆ.

- Advertisement -

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಸಕ್ರಿಯವಾಗಿರುವ ಶೇ.53ರಷ್ಟು ಶಿಕ್ಷಣ ಸಂಸ್ಥೆಗಳು ‘ನಕಲಿ’ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ನಡೆಸಿದ ತನಿಖೆಯಿಂದ ಪತ್ತೆಯಾಗಿರುವುದಾಗಿ ಸುದ್ದಿಸಂಸ್ಥೆಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಂತಹ ಸುಮಾರು 830 ಶಿಕ್ಷಣ ಸಂಸ್ಥೆಗಳಲ್ಲಿ ಭ್ರಷ್ಟಾಚಾರವು ಆಳವಾಗಿ ಬೇರೂರಿದ್ದು, ಕಳೆದ 5 ವರ್ಷಗಳಲ್ಲಿ ಒಟ್ಟು 144.83 ಕೋಟಿ ರೂ.ವಿದ್ಯಾರ್ಥಿವೇತನ ಹಗರಣ ನಡೆದಿದೆ ಎಂದು ವರದಿ ಹೇಳಿದೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಈ ಹಗರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದಾರೆಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಅಕ್ರಮವೆಸಗಿದ ಆರೋಪ ಎದುರಿಸುತ್ತಿರುವ 830 ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನಾರಚನೆ: ರಾಜ್ಯದ ಸಯ್ಯದ್ ನಾಸೀರ್‌ ಹುಸೇನ್‌ ಅವರಿಗೆ ಸ್ಥಾನ

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಜುಲೈ 10ರಂದು ಅಧಿಕೃತವಾಗಿ ಈ ವಿಷಯವಾಗಿ ದೂರೊಂದನ್ನು ದಾಖಲಿಸಿತ್ತು. ದೇಶಾದ್ಯಂತ 34 ರಾಜ್ಯ/ ಕೇಂದ್ರಾಡಳಿತಗಳ 1572 ಶಿಕ್ಷಣ ಸಂಸ್ಥೆಗಳ ಪರಿಶೀಲನೆ ನಡೆಸಲಾಗಿದ್ದು, ಈ ಪೈಕಿ 830 ಶಿಕ್ಷಣಸಂಸ್ಥೆಗಳು ವಂಚನಾತ್ಮಕ ಚಟುವಟಿಕೆಗಳಲ್ಲಿ ನಿರತವಾಗಿರುವುದು ತನಿಖೆಯಿಂದ ಪತ್ತೆಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1.80 ಲಕ್ಷ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯದ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ವಿಸ್ತರಿಸಲಾಗಿದ್ದು, ಇದು 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗಿನ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಮೀಸಲಾದ ಈ ವಿದ್ಯಾರ್ಥಿ ವೇತನದ ಹಣವನ್ನು ಪ್ರತಿ ವರ್ಷವೂ ಶಿಕ್ಷಣಸಂಸ್ಥೆಗಳು ಪಡೆದುಕೊಳ್ಳುತ್ತಿದ್ದವು ಎಂದು ವರದಿ ತಿಳಿಸಿದೆ.

ಛತ್ತೀಸ್‌ಗಢ, ರಾಜಸ್ಥಾನ, ಅಸ್ಸಾಂ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿವೇತನವನ್ನು ದಕ್ಕಿಸಿಕೊಳ್ಳುತ್ತಿರುವ ಹಲವಾರು ಶಿಕ್ಷಣಸಂಸ್ಥೆಗಳು ನಕಲಿ ಅಥವಾ ಕಾರ್ಯನಿರ್ವಹಿಸುತ್ತಿಲ್ಲವೆಂಬುದು ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಪರಿಶೀಲನೆಗೊಳಪಟ್ಟ ಶೇ.64 ಶಿಕ್ಷಣ ಸಂಸ್ಥೆಗಳು ನಕಲಿ ಎಂಬುದು ಪತ್ತೆಯಾಗಿದೆ.

ತನಿಖೆಯಲ್ಲಿ ಬೆಳಕಿಗೆ ಬಂದ ಪ್ರಮುಖ ಅಂಶಗಳು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬ್ಯಾಂಕೊಂದರ ಮೂಲಕ 66 ಸಾವಿರ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಗಿದ್ದು, ಇದು ವಿದ್ಯಾರ್ಥಿ ವೇತನಕ್ಕಾಗಿ ನೋಂದಾಯಿಸಲ್ಪಟ್ಟ ಅರ್ಹ ವಿದ್ಯಾರ್ಥಿಗಳ ಸಂಖ್ಯೆಗಿಂತಲೂ ಅಧಿಕವಾಗಿದೆ.

ಜಮ್ಮು ಕಾಶ್ಮೀರದ ಆನಂತನಾಗ್‌ನ ಕಾಲೇಜೊಂದರಲ್ಲಿ 5 ಸಾವಿರ ನೋಂದಾಯಿತ ವಿದ್ಯಾರ್ಥಿಗಳಿಗೆ 7 ಸಾವಿರ ವಿದ್ಯಾರ್ಥಿ ವೇತನ ವಿತರಿಸಲಾಗಿದೆ.

ಪರಿಶೀಲನೆಗೊಳಪಟ್ಟ 1572 ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಪೈಕಿ ಸುಮಾರು 830 ಶಿಕ್ಷಣ ಸಂಸ್ಥೆಗಳು ನಕಲಿ ಅಥವಾ ಕಾರ್ಯನಿರ್ವಹಿಸದೆ ಇರುವಂತಹವು. ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ವಿದ್ಯಾರ್ಥಿವೇತನವನ್ನು ಈ ನಕಲಿ ಸಂಸ್ಥೆಗಳು ಪಡೆದುಕೊಳ್ಳುತ್ತಿದ್ದವು. ವಿದ್ಯಾರ್ಥಿ ವೇತನಗಳು ನಕಲಿ ಫಲಾನುಭವಿಗಳ ಪಾಲಾಗುತ್ತಿದ್ದವು.

ಕೇಂದ್ರ ಸರ್ಕಾರವು 2007-08 ರಲ್ಲಿ ಪ್ರಾರಂಭವಾದ ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2021-22 ರವರೆಗೆ  22,000 ಕೋಟಿ ರೂ. ವಿದ್ಯಾರ್ಥಿವೇತನವನ್ನು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...