ಎನ್‌ಡಿಎ ಗೆಲುವಿನ ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ತೇಜಸ್ವಿ ಯಾದವ್

Date:

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಪುನಃ ಅಧಿಕಾರಕ್ಕೆ ಬರುತ್ತದೆ ಎಂಬ ಚುನಾವಣೋತ್ತರ ಸಮೀಕ್ಷೆಗಳನ್ನು ತಿರಸ್ಕರಿಸಿದ್ದು, ಇಂತಹ ಊಹೆಗಳನ್ನು ಬಿಜೆಪಿ ಉನ್ನತ ನಾಯಕರ ನಿರ್ದೇಶನದಲ್ಲಿ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

- Advertisement -

ಪಾಟ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಚುನಾವಣೋತ್ತರ ಸಮೀಕ್ಷೆಗಳಿಗೆ ಯಾವುದೇ ಅರ್ಥವಿಲ್ಲ. ಇದನ್ನು ಬಿಜೆಪಿ ಉನ್ನತ ನಾಯಕರ ಸೂಚನೆಯ ಮೇರೆಗೆ ಮಾಡಲಾಗಿದೆ” ಎಂದು ಆರ್‌ಜೆಡಿ ನಾಯಕ ಆರೋಪಿಸಿದರು.

ಮಂಗಳವಾರ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ವಿರೋಧ ಪಕ್ಷಗಳ ‘ಮಹಾಘಟಬಂಧನ್’ ಬಹುಮತ ಪಡೆಯುವುದಿಲ್ಲ ಎಂದು ತಿಳಿಸಿದ್ದವು. ಅಲ್ಲದೆ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಕೂಡ ಕಳಪೆ ಪ್ರದರ್ಶನ ನೀಡಲಿದೆ ಎಂದು ಸಮೀಕ್ಷೆ ನುಡಿದಿದ್ದವು.

“ಇಂಡಿಯಾ ಒಕ್ಕೂಟ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಜನರು ಸರ್ಕಾರ ಬದಲಾವಣೆ ಬಯಸುತ್ತಾರೆ ಎಂಬುದನ್ನು ಸೂಚಿಸುತ್ತದೆ. ಮತದಾರರು ಮಹಾಘಟಬಂಧನ್ ಪರ ಮತ ಹಾಕಿದ್ದಾರೆ. ನಾವು ನವೆಂಬರ್ 18 ರಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತೇವೆ” ಎಂದು ತೇಜಸ್ವಿ ಯಾದವ್ ಹೇಳಿದರು.

“ಸುಮಾರು 72 ಲಕ್ಷ ಹೆಚ್ಚುವರಿ ಮತದಾರರು ಬಿಹಾರದಲ್ಲಿ ಆಡಳಿತ ಸರ್ಕಾರವನ್ನು ಬದಲಾಯಿಸಲು ಮತ ಹಾಕಿದ್ದಾರೆ” ಎಂದು ಆರ್‌ಜೆಡಿ ನಾಯಕ ಪುನರುಚ್ಚರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸುಧಾರಣೆಯಾಗಬೇಕಾದದ್ದು ಜೈಲುಗಳೋ, ರಾಜ್ಯ ಸರ್ಕಾರವೋ?

ಮಂಗಳವಾರ ಬಿಹಾರದಲ್ಲಿ ಎರಡನೇ ಮತ್ತು ಅಂತಿಮ ಹಂತದ ವಿಧಾನಸಭೆ ಚುನಾವಣೆಯಲ್ಲಿ ಸುಮಾರು ಶೇ. 69 ರಷ್ಟು ಮತದಾನ ನಡೆದಿದೆ.

ನವೆಂಬರ್ 6 ರಂದು 121 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದಲ್ಲಿ ಶೇ. 65.09 ರಷ್ಟು ಮತದಾನವಾಗಿತ್ತು. ಮತ ಎಣಿಕೆ ನವೆಂಬರ್ 14 ರಂದು ನಡೆಯಲಿದೆ.

ಬಿಜೆಪಿ ನಾಯಕರು ಮತ ಎಣಿಕೆ ಪ್ರಕ್ರಿಯೆಯನ್ನು ವಿಳಂಬಗೊಳಿಸಲು ಪ್ರಯತ್ನಿಸಬಹುದು, ಆದರೆ ನಾವು ಅದನ್ನು ಯಾವುದೇ ರೀತಿಯಲ್ಲಿ ನಡೆಯಲು ಬಿಡುವುದಿಲ್ಲ. ಅವರ ಚಟುವಟಿಕೆಗಳ ಮೇಲೆ ನಾವು ನಿಗಾ ಇಟ್ಟಿದ್ದೇವೆ ಎಂದು ಹೇಳಿದರು.

ಮಂಗಳವಾರ ನಡೆಸಿದ ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ ಎನ್‌ಡಿಎಗೆ 118-198 ಸ್ಥಾನಗಳು, ಮಹಾಘಟಬಂಧನ್‌ಗೆ 38-102 ಸ್ಥಾನಗಳು ಮತ್ತು ಜನ ಸುರಾಜ್ ಪಕ್ಷಕ್ಕೆ 0-5 ಸೀಟುಗಳು ಬರುವ ಸಾಧ್ಯತೆ ಇದೆ ಎಂದು ಊಹಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...