ಎಸ್‌ಸಿ, ಎಸ್‌ಟಿ, ಒಬಿಸಿಗೆ ಶೇ.65 ಮೀಸಲಾತಿ: ಬಿಹಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

Date:

ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅತೀ ಹಿಂದುಳಿದ ಜಾತಿಗಳಿಗೆ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವ ಮಸೂದೆಯನ್ನು ಬಿಹಾರ ವಿಧಾನಸಭೆ ಅವಿರೋಧವಾಗಿ ಅಂಗೀಕರಿಸಿದೆ.

ಈ ಮೀಸಲಾತಿಯು ಸುಪ್ರೀಂ ಕೋರ್ಟ್ ನಿಗದಿಪಡಿಸಿ ತೀರ್ಪು ನೀಡಿರುವ ಶೇ.50 ಮೀಸಲಾತಿಯನ್ನು ಮೀರಿದೆ.

ಪರಿಷ್ಕೃತ ನೂತನ ಮಸೂದೆಯನ್ವಯ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಶೇ.20, ಒಬಿಸಿ ಮತ್ತು ಅತೀ ಹಿಂದುಳಿದ ಸಮುದಾಯ ಶೇ.43 ಮೀಸಲಾತಿ, ಎಸ್‌ಟಿ ಸಮುದಾಯ ಶೇ.2 ಮೀಸಲಾತಿ ಪಡೆಯುತ್ತಾರೆ. ಈ ಹೆಚ್ಚಳದಿಂದ ಒಬಿಸಿ ಮತ್ತು ಅತೀ ಹಿಂದುಳಿದ ಅಭ್ಯರ್ಥಿಗಳು(ಇಬಿಸಿ) ಶೇ.30 ಮೀಸಲಾತಿ ಹೆಚ್ಚಿಗೆ ಪಡೆಯಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೊದಲು ಇಬಿಸಿ ಶೇ.18, ಒಬಿಸಿ ಶೇ.12, ಎಸ್‌ಸಿ ಶೇ.16 ಹಾಗೂ ಎಸ್‌ಟಿ ಸಮುದಾಯ ಶೇ.1 ಮೀಸಲಾತಿ ಪಡೆಯುತ್ತಿದ್ದರು.

ನೂತನ ಮಸೂದೆಯಲ್ಲಿ ಈ ಹಿಂದೆ ಹಿಂದುಳಿದ ಮಹಿಳೆಯರಿಗೆ ಕಲ್ಪಿಸಲಾಗಿದ್ದ ಶೇ.3 ಮೀಸಲಾತಿಯನ್ನು ರದ್ದುಪಡಿಸಲಾಗಿದೆ. ಹಾಗೆಯೇ ನೂತನ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗಗಳಿಗೆ ನೀಡಿದ್ದ ಶೇ.10 ಮೀಸಲಾತಿಯನ್ನು ಹೊರತುಪಡಿಸಲಾಗಿದೆ. ಒಟ್ಟು ಮೀಸಲಾತಿ ಶೇ.75 ಮೀರುವುದಿಲ್ಲ.

ಈ ಸುದ್ದಿ ಓದಿದ್ದೀರಾ? ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆಗಳಿಗೆ ವಿಶೇಷ ಪೀಠ ರಚಿಸಿ: ಸುಪ್ರೀಂ ನಿರ್ದೇಶನ

ಇತ್ತೀಚೆಗೆ ಬಿಹಾರ ರಾಜ್ಯಾದ್ಯಂತ ನಡೆಸಿದ ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಸರ್ಕಾರ ಮಂಡಿಸಿದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ನೂತನ ಮಸೂದೆಯನ್ನು ಪ್ರಸ್ತಾಪಿಸಿದರು. ಬಿಹಾರದ 13.1 ಕೋಟಿ ಜನರಲ್ಲಿ ಶೇ. 36 ಜನರು ಇಬಿಸಿ ಮತ್ತು ಶೇ. 27.1 ಮಂದಿ ಒಬಿಸಿ ಸಮುದಾಯಕ್ಕೆ ಸೇರಿದ್ದಾರೆ ಎಂದು ವರದಿ ಹೇಳಿದೆ.

ಉಳಿದವರಲ್ಲಿ ಶೇ.19.7ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.1.7 ರಷ್ಟಿದೆ. ಸಾಮಾನ್ಯ ವರ್ಗದ ಜನಸಂಖ್ಯೆ 15.5 ಪ್ರತಿಶತವನ್ನು ಹೊಂದಿದೆ ಎಂದು ವರದಿ ಹೇಳಿದೆ.

ಇದರರ್ಥ ಬಿಹಾರದ ಶೇಕಡಾ 60 ಕ್ಕಿಂತ ಹೆಚ್ಚು ಜನರು ಒಬಿಸಿ ಅಥವಾ ಇಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಸರ್ಕಾರದ ವರದಿಯಲ್ಲಿ ಶೇ.42 ಎಸ್‌ಸಿ ಮತ್ತು ಎಸ್‌ಟಿ ಸಮುದಾಯ ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಸಮುದಾಯದ ಶೇ.34 ಮಂದಿಯ ಮಾಸಿಕ ಆದಾಯ 6 ಸಾವಿರ ರೂ.ಕ್ಕಿಂತ ಕಡಿಮೆಯಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...