ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಡಿಸಿಎಂ ಹುದ್ದೆಗೆ ಆಗ್ರಹ: ಬಿಜೆಪಿ, ಜೆಡಿಯು ವಿರೋಧ

Date:

ಗುರುವಾರ(ನ.20) ಪ್ರಮಾಣವಚನ ಸ್ವೀಕರಿಸುವ ಬಿಹಾರದ ನೂತನ ಸರ್ಕಾರದಲ್ಲಿ ಲೋಕಜನಶಕ್ತಿ (ರಾಮ್‌ ವಿಲಾಸ್) ಪಕ್ಷಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಚಿರಾಗ್ ಪಾಸ್ವಾನ್ ಆಗ್ರಹಕ್ಕೆ ಎನ್‌ಡಿಎ ಘಟಕ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು ವಿರೋಧ ವ್ಯಕ್ತಪಡಿಸಿವೆ.

- Advertisement -

ಎನ್‌ಡಿಎ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳು ಮಂಗಳವಾರ ಈ ಸಂಬಂಧ ಸುಧೀರ್ಘ ಚರ್ಚೆ ನಡೆಸಿದ್ದು, ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಬಿಜೆಪಿ ಉಳಿಸಿಕೊಳ್ಳುವ ನಿರ್ಧಾರಕ್ಕೆ ಬಂದಿವೆ. ಜೆಡಿಯು ಕೂಡಾ ಸ್ಪೀಕರ್ ಹುದ್ದೆಯಲ್ಲಿ ಆಸಕ್ತಿ ಹೊಂದಿದೆ ಎಂಬ ವದಂತಿ ದಟ್ಟವಾಗಿ ಹಬ್ಬಿತ್ತು. ಆದರೆ ಉಭಯ ಪಕ್ಷಗಳು ಆಕಾಂಕ್ಷೆಗಳನ್ನು ಅಭಿವ್ಯಕ್ತಪಡಿಸಿದ್ದು, ಹೊಸ ಸರ್ಕಾರದ ರಚನೆ ಸಂಬಂಧ ಕಾರ್ಯಯೋಜನೆ ಸಿದ್ಧಪಡಿಸುತ್ತಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಎನ್‌ಡಿಎ ಕೂಟಕ್ಕೆ ದಲಿತ ಮತಗಳನ್ನು ಕ್ರೋಢೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ಆರ್‌ವಿ) 19 ಶಾಸಕರನ್ನು ಹೊಂದಿದ್ದು, ಡಿಸಿಎಂ ಹುದ್ದೆಗೆ ಲಾಬಿ ನಡೆಸುತ್ತಿದೆ ಎಂದು ಹೇಳಲಾಗಿದೆ.

ಆದರೆ ನಿರ್ಗಮಿತ ಸರ್ಕಾರದಲ್ಲಿ ಬಿಜೆಪಿ ಎರಡು ಡಿಸಿಎಂ ಹುದ್ದೆಗಳನ್ನು ಹೊಂದಿದ್ದು, ಹೊಸ ವ್ಯವಸ್ಥೆಯಲ್ಲೂ ಅದನ್ನು ಉಳಿಸಿಕೊಳ್ಳಲಿದೆ. ಚಿರಾಗ್ ಅವರ ಭಾವ ಹಾಗೂ ಜಮೂಯಿ ಸಂಸದ ಅರುಣ್ ಭಾರ್ತಿಯವರ ಹೆಸರು ಎಲ್‌ಜೆಪಿ ಕೋಟಾದಡಿ ಡಿಸಿಎಂ ಹುದ್ದೆಗೆ ಪ್ರಸ್ತಾವಿತವಾಗಿದೆ.

ಇದನ್ನು ಓದಿದ್ದೀರಾ? ಗುಜರಾತ್‌ | ನ. 21 ರಿಂದ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ

ಜೆಡಿಯು ಸದಸ್ಯರ ಸಂಖ್ಯೆ ಗಣನೀಯ ಹೆಚ್ಚಳವಾಗಿರುವುದು ಮತ್ತು ಎಲ್‌ಜೆಪಿ (ಆರ್‌ವಿ) ಹಾಗೂ ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ ಮೈತ್ರಿಕೂಟಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರಕ್ಕಿಂತ ಹೊಸ ಸರ್ಕಾರ ಭಿನ್ನ ಸಂಯೋಜನೆಯನ್ನು ಹೊಂದಿರಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಝಾ ಮತ್ತು ಕೇಂದ್ರ ಸಚಿವ ಲಲನ್ ಸಿಂಗ್ ಅವರ ಜತೆ ಚರ್ಚೆ ನಡೆಸಿದ್ದಾರೆ.

ಈ ಹಿಂದಿನ ಸರ್ಕಾರದಲ್ಲಿ ಬಿಜೆಪಿ 80 ಶಾಸಕರನ್ನು ಹೊಂದಿದ್ದರೆ, ಜೆಡಿಯು 43 ಶಾಸಕರನ್ನು ಹೊಂದಿತ್ತು. ಆದರೆ ಈ ಬಾರಿ ಸಮೀಕರಣ ಬದಲಾಗಿದ್ದು, ಬಿಜೆಪಿ 89 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಜೆಡಿಯು 85 ಸ್ಥಾನಗಳನ್ನು ಪಡೆದಿದೆ. ಈ ಹಿಂದೆ ಬಿಜೆಪಿ 21 ಸಚಿವರನ್ನು ಹೊಂದಿದ್ದರೆ, ಪ್ರಾದೇಶಿಕ ಪಕ್ಷಗಳ 14 ಸದಸ್ಯರು ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ಇದರಿಂದ ಜೆಡಿಯು ಕೋಟಾ ಹೆಚ್ಚಲಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...