ಬಿಹಾರ ಬಿಜೆಪಿ ಘಟಕ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಬೋಜ್‌ಪುರಿ ನಟ ಪವನ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.
ಪವನ್ ಸಿಂಗ್ ಅವರು ಬಿಹಾರದ ಕರಕಟ್ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಖುಶ್ವಾ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಕರಕಟ್ ಲೋಕಸಭಾ ಕ್ಷೇತ್ರದಿಂದ ರಾಷ್ಟ್ರೀಯ ಲೋಕ ಮೋರ್ಚಾದ ಅಧ್ಯಕ್ಷರಾದ ಮಾಜಿ ಕೇಂದ್ರ ಸಚಿವ ಉಪೇಂದ್ರ ಖುಶ್ವಾ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಪಶ್ಚಿಮ ಬಂಗಾಳದ ಅಸನ್‌ಸೋಲ್ ಕ್ಷೇತ್ರದ ಲೋಕಸಭಾ ಕ್ಷೇತ್ರ ಟಿಕೆಟ್ ಕೈತಪ್ಪಿದ್ದರಿಂದ ಕರಕಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ
“ಬಿಹಾರದಲ್ಲಿ ಪಕ್ಷದ ನಿರ್ಧಾರದ ವಿರುದ್ಧವಾಗಿ ಕರಕಟ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪವನ್ ಸಿಂಗ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕ್ರಮವು ಪಕ್ಷ ವಿರೋಧಿಯೆಂದು ಪರಿಗಣಿಸಲಾಗಿದೆ.ಬಿಹಾರದ ಬಿಜೆಪಿ ಅಧ್ಯಕ್ಷರಾದ ಸಾಮ್ರಾಟ್ ಚೌಧರಿ ಅವರು ಪವನ್ ಅವರ ಅಮಾನತು ನಿರ್ಧಾರ ಕೈಗೊಂಡಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರಕಟ್ ಕ್ಷೇತ್ರದಲ್ಲಿ ಜೂನ್ 1ರಂದು ಲೋಕಸಭಾ ಚುನಾವಣೆ ನಡೆಯಲಿದೆ.