ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

Date:

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳಪೆ ಕಾಮಗಾರಿ ಈ ದುರಂತಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೇತುವೆ ಕೊಚ್ಚಿ ಹೋಗುತ್ತಿರುವ ದೃಶ್ಯ ವೈರಲ್‌ ಆಗಿರುವ ವಿಡಿಯೋದಲ್ಲಿ ಸೆರೆಯಾಗಿದೆ. ಸೇತುವೆ ನಿರ್ಮಿಸಿ ಒಂದು ವರ್ಷವೂ ಕಳೆದಿರಲಿಲ್ಲ. ಉದ್ಘಾಟನೆಯನ್ನು ಕೂಡ ನೆರವೇರಿರಲಿಲ್ಲ.ಗುತ್ತೆಗೆದಾರ ಹಾಗೂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸಿಕ್ತಿ ಕ್ಷೇತ್ರದ ಶಾಸಕ ವಿಜಯ್ ಮಂಡಲ್ ಮಾತನಾಡಿ, ಈ ಸೇತುವೆಯನ್ನು ಜಿಲ್ಲೆಯ ಗ್ರಾಮೀಣ ಕಾಮಗಾರಿ ಇಲಾಖೆ ಸಿದ್ಧಪಡಿಸಿದೆ. ನೆಲದ ಮೇಲೆಯೇ ಕಂಬಗಳನ್ನು ಹೂತು ಸಿದ್ಧಪಡಿಸಲಾಗಿದೆ. ಕೂಡು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಸುಮಾರು 100 ಮೀಟರ್ ಉದ್ದದ ಈ ಸೇತುವೆಗೆ ಸುಮಾರು 12 ಕೋಟಿ ರೂ. ವೆಚ್ಚವಾಗಿದ್ದು, ಉದ್ಘಾಟನೆಯೂ ಆಗಿರಲಿಲ್ಲ ಎಂದು ದೂರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ಸೇತುವೆ ನಿರ್ಮಾಣದಲ್ಲಿ ಗುಣಮಟ್ಟವಿಲ್ಲದ ವಸ್ತುಗಳ ಬಳಕೆಯನ್ನು ಜನರು ಮಾಧ್ಯಮಗಳ ಗಮನಕ್ಕೆ ತಂದಿದ್ದಾರೆ. ಇತ್ತೀಚೆಗೆ ಸೇತುವೆಯ ಮಾರ್ಗವನ್ನು ಪುನಃಸ್ಥಾಪಿಸಲು ಇಲಾಖೆಯಿಂದ ಪ್ರಯತ್ನಗಳು ಪ್ರಾರಂಭವಾಗಿದ್ದವು, ಆದರೆ ಅದಕ್ಕೂ ಮೊದಲು ಸೇತುವೆಯೇ ಕುಸಿದಿದೆ.

ಬಿಹಾರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸೇತುವೆ ಕುಸಿತದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ ವರ್ಷ ಜೂನ್‌ನಲ್ಲಿ ಸುಲ್ತಂಗಂಜ್‌ನಲ್ಲಿ ಗಂಗಾ ನದಿಗೆ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿತ್ತು. ಅದರ ನಂತರ, ಈ ವರ್ಷದ ಮಾರ್ಚ್‌ನಲ್ಲಿ ಸುಪೌಲ್‌ನಲ್ಲಿ ಕೋಸಿ ನದಿಗೆ ನಿರ್ಮಿಸಲಾಗಿದ್ದ ಸೇತುವೆಯ ಸ್ಲ್ಯಾಬ್ ಕಳಚಿ ಬಿದ್ದಿತ್ತು. ಈ ವೇಳೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು.

ಅದೇ ಸಮಯದಲ್ಲಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಬಂಕಾದ ಬೆಲ್‌ಹಾರ್‌ನಲ್ಲಿ ಲೋಹಗರ್ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆ ಪ್ರವಾಹಕ್ಕೆ ಸಿಕ್ಕಿ ಕುಸಿದಿತ್ತು. ಇದರಿಂದಾಗಿ ಸುಮಾರು 50ಕ್ಕೂ ಹೆಚ್ಚು ಗ್ರಾಮಗಳ ಜನರ ಸಂಚಾರ ಬಂದ್ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...

ಕೇರಳ | ಆಸ್ಪತ್ರೆಗೆ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ!

ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ...

ಮೋದಿ ನೇತೃತ್ವದಲ್ಲಿ ಟೈಟಾನಿಕ್ ಹಡಗಿನಂತೆ ಶಾಶ್ವತವಾಗಿ ಮುಳಗಲಿರುವ ಬಿಜೆಪಿ: ಸುಬ್ರಮಣಿಯನ್ ಸ್ವಾಮಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ...

ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸೋಮವಾರ...