ಬಿಹಾರ | ನೀಟ್ ಪ್ರತಿಭಟನೆಯಲ್ಲಿ ಘರ್ಷಣೆ; ಮಾಜಿ ಸಚಿವ ತೇಜ್ ಪ್ರತಾಪ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬಿಹಾರದಲ್ಲಿ ಆಯೋಜಿಸಲಾಗಿದ್ದ ‘ಬಿಹಾರ ಬಂದ್’ ಸಮಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಚಿವ, ಜನಶಕ್ತಿ ಜನತಾ ದಳದ ಅಧ್ಯಕ್ಷ ತೇಜ್ ಪ್ರತಾಪ್ ಯಾದವ್ ಅವರನ್ನು ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮುಂಜಾನೆ ಅವರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ತೇಜ್ ಪ್ರತಾಪ್ ಅವರನ್ನು ಬೆಯೂರ್ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ.

- Advertisement -

ತೇಜ್ ಪ್ರತಾಪ್ ಬಂಧನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ವಕೀಲ ಜಗನ್ನಾಥ್ ಸಿಂಗ್, ಪೊಲೀಸರಿಂದ ಬಂಧನದ ಪತ್ರವನ್ನು ಸ್ವೀಕರಿಸಲಾಗಿದೆ. ಶೀಘ್ರದಲ್ಲೇ ಅವರಿಗೆ ಜಾಮೀನು ಕೊಡಿಸಲು ಸೋಮವಾರದಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಶನಿವಾರ ಗಾಂಧಿ ಮೈದಾನದ ಬಳಿಯಿರುವ ರಾಮ್ ಗುಲಾಂ ಚೌಕ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ಬೃಹತ್ ಧರಣಿ ಪ್ರತಿಭಟನೆ ಆಯೋಜಿಸಲಾಗಿತ್ತು. ಬಂದ್‌ಗೆ ಬೆಂಬಲ ಸೂಚಿಸಿ ತೇಜ್ ಪ್ರತಾಪ್ ಯಾದವ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಆದರೆ, ಸಮಯ ಕಳೆಯುತ್ತಿದ್ದಂತೆ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದು ಕಲ್ಲು ತೂರಾಟ ನಡೆದಿತ್ತು ಎಂದು ವರದಿಯಾಗಿದೆ.

ಈ ಘರ್ಷಣೆಗೆ ಸಂಬಂಧಿಸಿದಂತೆ ಪಾಟ್ನಾದ ಗಾಂಧಿ ಮೈದಾನ ಪೊಲೀಸ್ ಠಾಣೆಯಲ್ಲಿ ತೇಜ್ ಪ್ರತಾಪ್ ಯಾದವ್ ಸೇರಿದಂತೆ ಹಲವರ ವಿರುದ್ಧ  ಎಫ್‌ಆರ್ ದಾಖಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಗಲಭೆ ಎಬ್ಬಿಸುವುದು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ, ಪೊಲೀಸ್ ವಾಹನಗಳನ್ನು ಜಖಂ, ಸರ್ಕಾರಿ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಗೆ ಅಡ್ಡಿ ಹಾಗೂ ಠಾಣಾಧಿಕಾರಿಗೆ (SHO) ಗಾಯಗೊಳಿಸಿದ ಆರೋಪಗಳನ್ನು ಹೊರಿಸಿದ್ದಾರೆ. ಅಲ್ಲದೆ, ಕೊಲೆ ಯತ್ನದ ಪ್ರಕರಣವನ್ನೂ ದಾಖಲಿಸಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...