ಬಿಹಾರ ರಾಜಕಾರಣದಲ್ಲಿ ಮಹತ್ವದ ತಿರುವು; ಶಾಸಕ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Date:

ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

​ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ನಿತೀಶ್ ಅವರ ಈ ನಡೆಯು ರಾಜ್ಯ ರಾಜಕಾರಣದಲ್ಲಿ ಒಂದು ಶಕೆಯ ಅಂತ್ಯ ಹಾಗೂ ಹೊಸ ನಾಯಕತ್ವದ ಉದಯದ ಸಂಕೇತವಾಗಿದೆ. ಇದರೊಂದಿಗೆ, ಇದೇ ಮೊದಲ ಬಾರಿಗೆ ಬಿಹಾರದಲ್ಲಿ ತನ್ನದೇ ಪಕ್ಷದ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವ ಅವಕಾಶವನ್ನು ಬಿಜೆಪಿ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಜ್ಯ ರಾಜಕಾರಣದಿಂದ ನಿತೀಶ್ ಕುಮಾರ್ ಅವರ ನಿರ್ಗಮನವು, ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರೊಂದಿಗಿನ ದಶಕಗಳ ಹಳೆಯ ರಾಜಕೀಯ ಪೈಪೋಟಿಗೂ ತೆರೆ ಎಳೆದಿದೆ. ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಕ್ಕೊಳಗಾಗಿ ಸಕ್ರಿಯ ರಾಜಕಾರಣದಿಂದ ಬಹುತೇಕ ದೂರ ಉಳಿದಿರುವ ಲಾಲು, ಈಗಲೂ ಆರ್‌ಜೆಡಿ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಅವರ ಪುತ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪ್ರಸ್ತುತ ಪಕ್ಷದ ಪ್ರಮುಖ ಮುಖವಾಗಿ ಮುಂಚೂಣಿಯಲ್ಲಿದ್ದಾರೆ.

​ನಿತೀಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಲಿದ್ದಾರೆ ಎಂಬುದನ್ನು ಮೊಕಾಮಾ ಶಾಸಕ ಅನಂತ್ ಸಿಂಗ್ ಅವರು ಭಾನುವಾರವೇ ಖಚಿತಪಡಿಸಿದ್ದರು.

ಇದನ್ನು ಓದಿದ್ದೀರಾ? ಪೆಟ್ರೋ ಡಾಲರ್ ಎಂದರೇನು? ಅಮೆರಿಕದ ಅರ್ಥವ್ಯವಸ್ಥೆಯ ಬುಡ ಅಲುಗಾಡುತ್ತಿರುವುದೇಕೆ?

ಮಾರ್ಚ್ 5ರಂದೇ ತಮ್ಮ ನಿರ್ಧಾರ ಪ್ರಕಟಿಸಿದ್ದ ನಿತೀಶ್ ಕುಮಾರ್, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವುದು ತಮ್ಮ ದೀರ್ಘಕಾಲದ ರಾಜಕೀಯ ಮಹತ್ವಾಕಾಂಕ್ಷೆಯ ಈಡೇರಿಕೆ ಎಂದು ಹೇಳಿದ್ದರು.

​ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಅವರು, “ಬಿಹಾರ ಶಾಸಕಾಂಗದ ಎರಡೂ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹಾಗೂ ಸಂಸತ್ತಿನ ಎರಡೂ ಸದನಗಳಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) ಸೇವೆ ಸಲ್ಲಿಸಬೇಕು ಎಂಬುದು ನನ್ನ ಬಹುಕಾಲದ ಆಸೆಯಾಗಿತ್ತು. ಎರಡು ದಶಕಗಳಿಗೂ ಹೆಚ್ಚು ಕಾಲ ನನ್ನ ಮೇಲಿಟ್ಟ ವಿಶ್ವಾಸ ಹಾಗೂ ಬೆಂಬಲಕ್ಕಾಗಿ ಜನತೆಗೆ ಕೃತಜ್ಞತೆಗಳು. ಈ ಬೆಂಬಲದಿಂದಾಗಿಯೇ ಸರ್ಕಾರವು ರಾಜ್ಯದಲ್ಲಿ ಅಭಿವೃದ್ಧಿ ತರಲು ಹಾಗೂ ಜನರ ಘನತೆ ಹೆಚ್ಚಿಸಲು ಸಾಧ್ಯವಾಯಿತು” ಎಂದು ಸ್ಮರಿಸಿದ್ದರು.

​ಕೇವಲ ನಾಲ್ಕು ತಿಂಗಳ ಹಿಂದಷ್ಟೇ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭಾರಿ ಬಹುಮತ ತಂದುಕೊಟ್ಟಿದ್ದ ಅವರು, ನವೆಂಬರ್‌ನಲ್ಲಿ ಸತತ 10ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತ್ತೀಚೆಗಷ್ಟೇ ನಿತೀಶ್‌ಕುಮಾರ್ 75ನೇ ವಸಂತಕ್ಕೆ ಕಾಲಿಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...