ಬಿಹಾರ ಚುನಾವಣೆ | 2ನೇ ಹಂತದಲ್ಲಿಯೂ ದಾಖಲೆಯ ಮತದಾನ; ಹಕ್ಕು ಚಲಾಯಿಸಿದ 67.14% ಮತದಾರರು

Date:

ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಮೊದಲ ಹಂತದಂತೆಯೇ, ಎರಡನೇ ಹಂತದಲ್ಲಿಯೂ ದಾಖಲೆಯ ಮತದಾನವಾಗಿದೆ. ಮತದಾನ ನಡೆದ 122 ಕ್ಷೇತ್ರಗಳಲ್ಲಿ ಒಟ್ಟು 67.14%ರಷ್ಟು ಮತದಾನ ನಡೆದಿದೆ.

- Advertisement -

2ನೇ ಹಂತದಲ್ಲಿ ಒಟ್ಟು 1,302 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರಲ್ಲಿ, 136 (10%) ಮಹಿಳೆಯರು. 122 ಕ್ಷೇತ್ರಗಳಲ್ಲಿ ಒಟ್ಟು 45,399 ಬೂತ್‌ಗಳಲ್ಲಿ ಮತದಾನ ನಡೆದಿದೆ. ಒಟ್ಟು 3.70 ಕೋಟಿ ಮತದಾರಿದ್ದರು. ಅವರಲ್ಲಿ 67.14% ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಂದಿನ ಮತದಾನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಂಪುಟದ ಸಚಿವರಾದ ಬಿಜೇಂದ್ರ ಪ್ರಸಾದ್ ಯಾದವ್ (ಸುಪಾಲ್), ಸುಮಿತ್ ಕುಮಾರ್ ಸಿಂಗ್ (ಚಾಕೈ), ಮೊಹಮ್ಮದ್ ಜಮಾ ಖಾನ್ (ಚೈನ್‌ಪುರ್), ಲೇಶಿ ಸಿಂಗ್ (ಧಮ್ದಾಹಾ), ಕೃಷ್ಣ ನಂದನ್ ಪಾಸ್ವಾನ್ (ಹರ್ಸಿಧಿ), ರೇಣು ದೇವಿ (ಬೆಟ್ಟಿಯಾ), ನೀರಜ್ ಕುಮಾರ್ ಬಬ್ಲು (ಗಯಾ), ಶೀಲಾ ಮಂಡಲ್ (ಫುಲ್ಪಾರಸ್), ವಿಜಯ್ ಮಂಡಲ್ (ಸಿಕ್ತಿ), ಮತ್ತು ಜಯಂತ್ ರಾಜ್ ಕುಶ್ವಾಹ (ಅಮರ್ಪುರ್) ಭವಿಷ್ಯವನ್ನು ಮತದಾರರು ನಿರ್ಧಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಜೆಪಿಗೆ ಗುಡ್‌ಬೈ? ರಾಜಕೀಯದ ʼಪ್ರಿಲಿಮಿನರಿʼ ಪರೀಕ್ಷೆಯಲ್ಲಿ ಸೋತರೇ IPS ಅಣ್ಣಾಮಲೈ!

ಅಂತೆಯೇ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ಕುಮಾರ್, ಮಾಜಿ ವಿಧಾನಸಭಾ ಸ್ಪೀಕರ್ ಉದಯ್ ನಾರಾಯಣ್ ಚೌಧರಿ (ಆರ್‌ಜೆಡಿ), ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಶಕೀಲ್ ಅಹ್ಮದ್ ಖಾನ್ ಹಾಗೂ ಸಿಪಿಐ-ಎಂಎಲ್ ಶಾಸಕಾಂಗ ಪಕ್ಷದ ನಾಯಕ ಮೆಹಬೂಬ್ ಆಲಂ ಅವರ ಗೆಲುವು-ಸೋಲಿಗೆ ಮತದಾರರು ತೀರ್ಪು ನೀಡಿದ್ದಾರೆ.

ಮೊಲದ ಹಂತದ ಮತದಾನವು ನವೆಂಬರ್ 6ರಂದು ನಡೆದಿತ್ತು. ಅಂದು, 121 ಕ್ಷೇತ್ರಗಳಿಗೆ ಮತದಾನವಾಗಿದ್ದು, ಒಟ್ಟು 65% ಮತದಾನ ನಡೆದಿತ್ತು. ಸ್ವಾತಂತ್ರ್ಯ ನಂತರದಲ್ಲಿ ಬಿಹಾರ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿತ್ತು. ಇಂದು (ನ.11) ಎರಡನೇ ಹಂತದ ಮತದಾನ ನಡೆದಿದೆ. ಫಲಿತಾಂಶವು ನವೆಂಬರ್ 14ರ ಶುಕ್ರವಾರ ಪ್ರಕಟವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...