ಬಿಹಾರ ಚುನಾವಣೆ | 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಪ್ರಶಾಂತ್ ಕಿಶೋರ್ ವಿಶ್ವಾಸ

Date:

ಇದೇ ವಾರ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷವು (ಜೆಎಸ್‌ಪಿ) 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಅಥವಾ 10 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುತ್ತದೆ ಎಂದು ಚುನಾವಣಾ ತಂತ್ರಜ್ಞ, ಜೆಎಸ್‌ಪಿ ನಾಯಕ ಪ್ರಶಾಂತ್ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚೆಗೆ, ಖಾಸಗಿ ಸುದ್ದಿವಾಹಿನಿ ‘ಎನ್‌ಡಿಟಿವಿ’ ಕಾರ್ಯಕ್ರಮದಲ್ಲಿ ಭಾಗಿ ಅವರು ತಮ್ಮ ಪಕ್ಷದ ಚುನಾವಣಾ ಸ್ಪರ್ಧೆಯ ಬಗ್ಗೆ ವಿವರಿಸಿದ್ದಾರೆ. “ಜೆಎಸ್‌ಪಿ ತನ್ನ ಚೊಚ್ಚಲ ಚುನಾವಣೆಯಲ್ಲಿ ಹೋರಾಟ ನಡೆಸುತ್ತಿದೆ. ನನಗೆ ಎರಡು ಸಂಭವನೀಯತೆಗಳು ಕಾಣುತ್ತಿವೆ. ಜೆಎಸ್‌ಪಿಯನ್ನು ರಾಜ್ಯದ ಜನರು ಪರ್ಯಾಯವಾಗಿ ನೋಡುತ್ತಿದ್ದಾರೆ. ಆದರೆ, ಜನರ ವಿಶ್ವಾಸವು ಮತದಾನದಲ್ಲಿಯೂ ಪ್ರತಿಧ್ವನಿಸಬೇಕಿದೆ. ಪಕ್ಷವು 10 ಕ್ಕಿಂತ ಕಡಿಮೆ ಅಥವಾ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಾವು ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸದೇ ಇರುವ ಬಗ್ಗೆ ವಿವರಿಸಿದ ಕಿಶೋರ್, “ನಾನು ಚುನಾವಣೆಯಲ್ಲಿ ನಿರ್ದಿಷ್ಟ ಸ್ಥಾನದಿಂದ ಸ್ಪರ್ಧಿಸುತ್ತೇನೆ ಎಂದು ಎಂದಿಗೂ ಘೋಷಿಸಿಲ್ಲ. ನಾನು ಒಂದು ವೇಳೆ ಸ್ಪರ್ಧಿಸಿದರೆ, ಕಾರ್ಗಹಾರ್‌ನಿಂದ ಸ್ಪರ್ಧಿಸುವುದಾಗಿ ಹೇಳಿದ್ದೆ. ಆದರೆ, ನಾನು ಸ್ಪರ್ಧಿಸಿದರೆ, ನನ್ನ ಕ್ಷೇತ್ರದ ಮೇಲೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಆದ್ದರಿಂದ, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯಾದ್ಯಂತ ಪ್ರಚಾರ ಮಾಡುವ ಉದ್ದೇಶದಿಂದ ನಾನು ಸ್ಪರ್ಧಿಸಲಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?

“ನವೆಂಬರ್ 14 ರಂದು ಫಲಿತಾಂಶ ಬಂದಾಗ, ಜೆಎಸ್‌ಪಿ ಗೆಲ್ಲುವ ಸ್ಥಾನಗಳ ಮೇಲೆ ನಾನು ಸ್ಪರ್ಧಿಸದೇ ಉಳಿದಿದ್ದರ ಯಶಸ್ಸನ್ನು ಅಳೆಯಬಹುದು. ಬಿಹಾರದ 1/3ನೇ ಭಾಗದಷ್ಟು ಜನರು ಮಹಾಘಟಬಂಧನ್ ಮತ್ತು ಎನ್‌ಡಿಎಗೆ ಮತ ಹಾಕಲು ಬಯಸುವುದಿಲ್ಲ. ಪಕ್ಷವು ಕನಿಷ್ಠ 160-170 ಸ್ಥಾನಗಳಲ್ಲಿ ತ್ರಿಕೋನ ಸ್ಪರ್ಧೆ ಉಂಟುಮಾಡಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...