ಬಿಹಾರದ ಹುಡುಗಿಯರು 25 ಸಾವಿರಕ್ಕೆ ವಿವಾಹಕ್ಕೆ ಲಭ್ಯ: ಉತ್ತರಾಖಂಡ ಬಿಜೆಪಿ ಸಚಿವೆ ರೇಖಾ ಆರ್ಯ ಪತಿಯ ವಿವಾದಾತ್ಮಕ ಹೇಳಿಕೆ

Date:

ಬಿಹಾರದ ಹುಡುಗಿಯರು ಕೇವಲ 20 ರಿಂದ 25 ಸಾವಿರ ರೂಪಾಯಿಗೆ ವಿವಾಹಕ್ಕೆ ಲಭ್ಯ ಎಂದು ಹೇಳಿಕೆ ನೀಡುವ ಮೂಲಕ ಉತ್ತರಾಖಂಡ ಸಚಿವೆ ರೇಖಾ ಆರ್ಯ ಅವರ ಪತಿ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯನ್ನು ಪಕ್ಷಬೇಧ ಮರೆತು ಎಲ್ಲ ಬಿಹಾರ ರಾಜಕಾರಣಿಗಳು ಖಂಡಿಸಿದ್ದು, ಬಿಹಾರ ರಾಜ್ಯ ಮಹಿಳಾ ಆಯೋಗ ಈ ಹೇಳಿಕೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಅವರಿಗೆ ನೋಟಿಸ್ ನೀಡಿದೆ.

- Advertisement -

ಇಂಡಿಯಾ ಮೈತ್ರಿಕೂಟದ ಮುಖಂಡರು ಸಚಿವೆಯ ಪತಿ ನೀಡಿರುವ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು, ಎನ್ ಡಿಎ ಮಿತ್ರ ಪಕ್ಷಗಳು ಕೂಡಾ ಕಟು ಶಬ್ದಗಳಲ್ಲಿ ಈ ಹೇಳಿಕೆಯನ್ನು ತಿರಸ್ಕರಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ರೇಖಾ ಆರ್ಯ ಅವರ ಪತಿ ಗಿರಿಧರ್ ಲಾಲ್ ಸಾಹು ಯುವಕರ ಗುಂಪಿನೊಂದಿಗೆ ಮಾತನಾಡುವ ವೇಳೆ ಅವರ ವೈವಾಹಿಕ ಸ್ಥಿತಿ ಬಗ್ಗೆ ವಿಚಾರಿಸುತ್ತಾ, ಬಿಹಾರದ ಹುಡುಗಿಯರ ಜತೆಗೆ ಕಡಿಮೆ ವೆಚ್ಚದಲ್ಲಿ ವಿವಾಹ ಸಂಬಂಧ ಏರ್ಪಡಿಸಬಹುದು ಎಂದು ಹೇಳುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೇಳಿಕೆಯನ್ನು ವಿವಿಧ ರಾಜಕೀಯ ಮುಖಂಡರು ಮತ್ತ ಜಾಲತಾಣ ಬಳಕೆದಾರರು ಖಂಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

ಹೇಳಿಕೆಯನ್ನು ಖಂಡಿಸಿರುವ ಆರ್ ಜೆಡಿ ವಕ್ತಾರ ಚಿತ್ತರಂಜನ್ ಗಗನ್, ಸಚಿವೆಯನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪತಿಯನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿಗೆ ಸ್ವಲ್ಪವಾದರೂ ನೈತಿಕತೆ ಹಾಗೂ ಘನತೆ ಇದ್ದರೆ, ಪಕ್ಷ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಕ್ಷಣವೇ ನಾಯಕರ ವಿರುದ್ಧ ಕ್ರಮ ಕೈಗೊಳ್ಲಬೇಕು ಎಂದು ಅವರು ಒತ್ತಾಯಿಸಿದರು.

ಬಿಹಾರದ ಮಹಿಳೆಯರನ್ನು ಹರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಕಾರ್ಯಾಧ್ಯಕ್ಷ ನಿತಿನ್ ನಬೀನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ. ಬಿಹಾರ ಮಹಿಳೆಯರು ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಹೇಳಿದ್ದಾರೆ.

ಆಡಳಿತಾರೂಢ ಎನ್ ಡಿಎ ಮುಖಂಡರು ಕೂಡಾ ಹೇಳಿಕೆಯನ್ನು ಟೀಕಿಸಿದ್ದಾರೆ. ಹೇಳಿಕೆ ನೀಡಿರುವ ಸಚಿವೆಯ ಪತಿ ಬಹಿರಂಗವಾಗಿ ಕ್ಷಮೆಯಾಚಿಸದಿದ್ದಲ್ಲಿ ಅವರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಜೆಡಿಯು ಸಂಸದ ರಾಮಪ್ರೀತ್ ಮಂಡಲ್ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...