ಬಿಹಾರದಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಒಬ್ಬರ ಕೊಲೆ

Date:

Advertisements

ಬಿಹಾರದ ಪಾಟ್ನಾದ ಹಿಂದೂನಿ ಬದರ್ ಪಟ್ಟಣದಲ್ಲಿ ದಲಿತ ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿದ ನಂತರ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ದಲಿತ ಸಮುದಾಯದ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಕೊಲೆಯಾಗಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬಾಲಕಿ ಜೀವನ್ಮರಣದ ಹೋರಾಟದಿಂದಿಗೆ ಪಾಟ್ನಾದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬಸ್ಥರ ಹೇಳಿಕೆಯ ಪ್ರಕಾರ, ಇಬ್ಬರು ಬಾಲಕಿಯರು ಸೋಮವಾರ (ಜನವರಿ 8) ಹಸುವಿನ ಸಗಣಿ ಬೆರಣಿಯನ್ನು ತರಲು ಹೋದವರು ವಾಪಸ್‌ ಬರಲಿಲ್ಲ. ಈ ಬಗ್ಗೆ ಪುಲ್ವಾರಿ ಶರೀಫ್ ಠಾಣೆಗೆ ದೂರು ದಾಖಲಿಸಲಾಗಿತ್ತು. ನಂತರದಲ್ಲಿ ಒಬ್ಬ ಬಾಲಕಿ ಮೃತಪಟ್ಟಿರುವುದು ಹಾಗೂ ಇನ್ನೊಬ್ಬಳು ಬಾಲಕಿ ಗಂಭೀರವಾಗಿ ಗಾಯಗೊಂಡಿರುವುದನ್ನು ಗ್ರಾಮದ ಹೊರಗೆ ಗಮನಿಸಿದರು. ತಕ್ಷಣವೇ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಯಿತು. ಪೊಲೀಸರು ಆಗಮಿಸಿ ಮೃತದೇಹವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ಮೃತಪಟ್ಟ ಬಾಲಕಿ 8 ರಿಂದ 10 ವರ್ಷ ವಯಸ್ಸಿನವಳಾಗಿದ್ದು, ಬದುಕುಳಿದಿರುವ ಬಾಲಕಿ 12 ವರ್ಷ ಪ್ರಾಯದವಳು. ಇಬ್ಬರು ಗ್ರಾಮದ ಹೊರಗೆ ಬೆತ್ತಲೆಯಾಗಿ ಬಿದ್ದಿದ್ದರು. ಘಟನೆಯ ಬಗ್ಗೆ ಪೋಕ್ಸೋ ಕಾಯಿದೆ ಸೇರಿದಂತೆ ಐಪಿಸಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಸಾವಿನ ಬಗ್ಗೆ ನಿಖರವಾದ ಕಾರಣಗಳನ್ನು ಪತ್ತೆ ಹಚ್ಚುತ್ತಿದ್ದು, ಘಟನಾ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ

ಗ್ರಾಮಸ್ಥರ ಪ್ರತಿಭಟನೆ

ಘಟನೆಯ ನಂತರ ಗ್ರಾಮದೆಲ್ಲಡೆ ಸುದ್ದಿ ಹರಡಿ ಅಮಾನುಷ ಕೃತ್ಯ ನಡಸಿದವರನ್ನು ಗಲ್ಲಿಗೇರಿಸಬೇಕೆಂದು ಸಾರ್ವಜನಿಕರು ಪುಲ್ವಾರಿ ಶರೀಫ್ ಠಾಣೆಯೆದುರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚಿ ಬಂಧಿಸಲಾಗಿಲ್ಲದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು ಮುಖ್ಯ ರಸ್ತೆಯನ್ನು ಬಂದ್‌ ಮಾಡಿದರು. ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಪುಲ್ವಾರಿ ಶರೀಫ್ ಠಾಣೆಯ ಪೊಲೀಸರನ್ನು ಘೇರಾವ್ ಮಾಡಲು ಯತ್ನಿಸಿದರು.

ನಮ್ಮ ಹೆಣ್ಣು ಮಕ್ಕಳು ಕಾಣೆಯಾಗಿರುವ ಬಗ್ಗೆ ದೂರು ನೀಡಲು ಹೋದಾಗ ಪೊಲೀಸರು ಸಹಕರಿಸದೆ ಗ್ರಾಮದಲ್ಲೇ ಹುಡುಕುವಂತೆ ನಮ್ಮ ಮಾತನ್ನು ನಿರ್ಲಕ್ಷಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರೆ ಈ ಅಮಾನುಷ ಕೃತ್ಯವನ್ನು ತಡೆಯಬಹುದಿತ್ತು ಎಂದು ಸಂತ್ರಸ್ತ ಬಾಲಕಿಯರ ತಾಯಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X