ಬಿಹಾರ | ಮನೆಗೆ ನುಗ್ಗಿ ಗುಂಡಿಕ್ಕಿ ಪತ್ರಕರ್ತನ ಭೀಕರ ಹತ್ಯೆ

Date:

ಪತ್ರಕರ್ತನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಪ್ರೇಮ್ ನಗರದಲ್ಲಿ ನಡೆದಿದೆ.

ದೈನಿಕ್ ಜಾಗರಣ್’ ಎಂಬ ಹಿಂದಿ ದೈನಿಕದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ವಿಮಲ್ ಕುಮಾರ್ ಯಾದವ್ ಹತ್ಯೆಯಾದವರು.

ಇಂದು(ಆಗಸ್ಟ್ 18) ಬೆಳಗ್ಗೆ 5 ಗಂಟೆಗೆ ಬಿಹಾರದ ಅರಾರಿಯಾ ಜಿಲ್ಲೆಯ ಪ್ರೇಮ್ ನಗರದಲ್ಲಿರುವ ವಿಮಲ್ ಕುಮಾರ್ ಯಾದವ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿರುವ ವಿಮಲ್ ಕುಮಾರ್ ಅವರು ಅರಾರಿಯಾದಲ್ಲಿ ವಾಸವಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ವಿಮಲ್ ಅವರನ್ನು ಮೊದಲು ಮನೆಯಿಂದ ಹೊರಗೆ ಕರೆದಿದ್ದಾರೆ. ಅವರು ಹೊರಗೆ ಬರದಿದ್ದಾಗ ಮನೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರಿಗೆ 15 ವರ್ಷದ ಪುತ್ರ ಮತ್ತು 13 ವರ್ಷದ ಪುತ್ರಿಯಿದ್ದಾಳೆ.

ಈ ಸುದ್ದಿ ಓದಿದ್ದೀರಾ? ವಿದೇಶಿ ವೈದ್ಯ ಎಂದು ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 22 ಮಹಿಳೆಯರಿಗೆ 4.5 ಕೋಟಿ ರೂ. ವಂಚನೆ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಮ್ಮ ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಾರಿಯಾ ಸದರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

2019ರಲ್ಲಿ ವಿಮಲ್ ಕುಮಾರ್ ಅವರ ಸಹೋದರನನ್ನೂ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿಮಲ್ ಒಬ್ಬರೇ ಸಾಕ್ಷಿಯಾಗಿದ್ದರು. ಸದ್ಯ ವಿಮಲ್ ಕುಮಾರ್ ಹತ್ಯೆಗೆ ಇದೇ ಕಾರಣ ಎನ್ನಲಾಗುತ್ತಿದೆ. ತನಿಖೆಯ ನಂತರವಷ್ಟೇ ಕೊಲೆಯ ಹಿಂದಿನ ನಿಜವಾದ ಕಾರಣ ಬಯಲಾಗಲಿದೆ ಎನ್ನುತ್ತಿದ್ದಾರೆ ಪೊಲೀಸರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...