ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

Date:

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳಿಗೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಾಮ್ರಾಟ್ ಚೌಧರಿ ಅವರಿಗೆ ಎದುರಾಗಿರುವ ಎರಡನೇ ಪ್ರಮುಖ ಚುನಾವಣಾ ಸವಾಲಾಗಿದ್ದು, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿದೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆ ಬಾಕಿಂಪುರ ಕ್ಷೇತ್ರವನ್ನು ಪ್ರಶಾಂತ್ ಕಿಶೋರ್ ಕಬಳಿಸಿಕೊಂಡಿದ್ದರು. ಬಿಜೆಪಿ ಹೀನಾಯವಾಗಿ ಸೋತು ಹಿನ್ನಡೆ ಅನುಭವಿಸಿತ್ತು. ಇದೀಗ, ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಚೌಧರಿಗೆ ದೊಡ್ಡ ಸವಾಲಾಗಿದೆ.

- Advertisement -

ಪ್ರಸ್ತುತ ಸನ್ನಿವೇಶದಲ್ಲಿ, ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಜೆಡಿಯು ಮತ್ತು ಇತರೆ ಮಿತ್ರಪಕ್ಷಗಳ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಇದು ಎನ್‌ಡಿಎ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ತೊಡಕಾಗಿ ಪರಿಣಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಪ್ರಮುಖವಾಗಿ, ಸರನ್ ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಧಿಕೃತ ಅಭ್ಯರ್ಥಿಯಾಗಿ ಪುಷ್ಕರ್ ಆನಂದ್ ಸ್ಪರ್ಧಿಸಿದ್ದಾರೆ. ಆದರೆ, ಅವರ ವಿರುದ್ಧ ಎನ್‌ಡಿಎ ಮಿತ್ರಪಕ್ಷವೇ ಆಗಿರುವ ರಾಷ್ಟ್ರೀಯ ಲೋಕ್ ಮೋರ್ಚಾದ (RLM) ನಾಯಕ ರಾಮ್ ಪುಕಾರ್ ಸಿನ್ಹಾ ಅವರು ಬಂಡಾಯವೆದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಬೆನ್ನಲ್ಲೇ, ಆರ್‌ಎಲ್‌ಎಂ ಪಕ್ಷವು ಸಿನ್ಹಾ ಅವರನ್ನು ಆರು ವರ್ಷಗಳ ಅವಧಿಗೆ ಅಮಾನತುಗೊಳಿಸಿದೆ. ಇದೀಗ, ಸಿನ್ಹಾ ಅವರು ತಾವಾಗಿಯೇ ಪ್ರಚಾರದಿಂದ ಹಿಂದೆ ಸರಿದು ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ. ಆದರೂ, ಮತಪತ್ರದಲ್ಲಿ ಅವರ ಹೆಸರು ಹಾಗೆಯೇ ಇರುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುವ ಸಾಧ್ಯತೆಯಿದೆ.

ಇನ್ನೊಂದೆಡೆ, ಅತ್ಯಂತ ಪ್ರಭಾವಿ ಕ್ಷೇತ್ರವಾದ ಪಾಟ್ನಾ ಪದವೀಧರ ಕ್ಷೇತ್ರದಲ್ಲಿ ಜೆಡಿಯುನ ಆಂತರಿಕ ಜಗಳ ಬೀದಿಗೆ ಬಂದಿದೆ. ಈ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುತ್ತಿರುವ ಜೆಡಿಯುನ ಅಧಿಕೃತ ಅಭ್ಯರ್ಥಿ ನೀರಜ್ ಕುಮಾರ್ ವಿರುದ್ಧ ಅದೇ ಪಕ್ಷದ ಮೊಕಾಮಾ ಶಾಸಕ ಅನಂತ್ ಸಿಂಗ್ ಬಹಿರಂಗವಾಗಿ ತೊಡೆತಟ್ಟಿದ್ದಾರೆ. ಮಾತ್ರವಲ್ಲದೆ, ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅನುಜ್ ಕುಮಾರ್ ಸಿಂಗ್ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ, ಜೆಡಿಯು ಅಭ್ಯರ್ಥಿ ನೀರಜ್ ಕುಮಾರ್ ಅವರಿಗೆ ದಿಢೀರ್ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿದ್ದಾರೆ.

ಈ ಲೇಖನ ಓದಿದ್ದೀರಾ?: ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇದೇ ರೀತಿ, ಉಳಿದ ಕ್ಷೇತ್ರಗಳಲ್ಲಿಯೂ ಎನ್‌ಡಿಎ ಒಳಗೆ ಅಸಮಾಧಾನ, ಬಂಡಾಯ, ತಮ್ಮದೇ ಅಭ್ಯರ್ಥಿಗಳ ವಿರುದ್ಧ ಪ್ರಚಾರಗಳು ನಡೆಯುತ್ತಿವೆ. ಈ ಬಂಡಾಯವನ್ನು ಶಮನ ಮಾಡಲು ಎನ್‌ಡಿಎ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಪಕ್ಷದ ಶಾಸಕರು ಮತ್ತು ನಾಯಕರ ಮನವೊಲಿಸಲು ಸತತ ಯತ್ನ ನಡೆಸಿದ್ದಾರೆ. ಆದರೂ ಸಹ ಅಸಮಾಧಾನ ಶಮನಗೊಂಡಿಲ್ಲ.

ಪ್ರಸ್ತುತ ಪಾಟ್ನಾ ಪದವೀಧರ, ಪಾಟ್ನಾ ಶಿಕ್ಷಕರ, ತಿರ್ಹುತ್ ಪದವೀಧರ, ತಿರ್ಹುತ್ ಶಿಕ್ಷಕರ, ಸರನ್ ಪದವೀಧರ, ಸರನ್ ಶಿಕ್ಷಕರ ಹಾಗೂ ದರ್ಬಂಗಾ ಪದವೀಧರ ಮತ್ತು ದರ್ಬಂಗಾ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.

ಅಕ್ಟೋಬರ್ 23ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ. ಈ ಫಲಿತಾಂಶವು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನಾಯಕತ್ವ ಮತ್ತು ಮೈತ್ರಿಕೂಟವನ್ನು ಮುನ್ನಡೆಸುವ ಕ್ಷಮತೆಗೆ ಅಳತೆಗೋಲಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಸಾಮಾನ್ಯ ಶಿಸ್ತುಕ್ರಮವನ್ನು ‘ಆತ್ಮಹತ್ಯೆಗೆ ಪ್ರಚೋದನೆ’ ಎನ್ನಲಾಗದು: ಮದ್ರಾಸ್ ಹೈಕೋರ್ಟ್

ರಜೆ ಅರ್ಜಿಯನ್ನು ತಿರಸ್ಕರಿಸುವುದು, ಕರ್ತವ್ಯಕ್ಕೆ ಗೈರುಹಾಜರಿ ಎಂದು ದಾಖಲಿಸುವುದು ಹಾಗೂ ಶಿಸ್ತುಕ್ರಮ...

ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಪರಿಶೀಲಿಸಿ; ಆಂಧ್ರ ಪ್ರದೇಶ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ!

ಆಂಧ್ರಪ್ರದೇಶದಲ್ಲಿ ಮುಂಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ...