ಮುಸ್ಲಿಂ ಹೆಸರು ಬಳಸಿಕೊಂಡು ಕುಂಭಮೇಳ ಸ್ಫೋಟಿಸುವುದಾಗಿ ಹೇಳಿದ್ದ ಯುವಕನ ಬಂಧನ

Date:

Advertisements

ಮುಸ್ಲಿಂ ಹೆಸರು ಬಳಸಿಕೊಂಡು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಿಹಾರದ ಪುರ್‌ನಿಯಾದ ಆಯುಶ್‌ ಕುಮಾರ್ ಜೈಸ್ವಾಲ್‌ ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಮಾಧ್ಯಮದಲ್ಲಿ ‘ನಾಸೀರ್‌ ಪಠಾಣ್‌’ ಎಂಬ ಸುಳ್ಳು ಹೆಸರನ್ನು ಬಳಸಿಕೊಂಡು ಕುಂಭಮೇಳವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ್ದ. ಡಿಸೆಂಬರ್‌ 31ರಂದು ಆಯುಶ್‌ ಪೋಸ್ಟ್‌ ಪ್ರಕಟಿಸಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

Advertisements

ಆನ್‌ಲೈನ್‌ನಲ್ಲಿ ಪೋಸ್ಟ್‌ ಪ್ರಕಟವಾದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಉತ್ತರ ಪ್ರದೇಶ ಹಾಗೂ ಕೊಲ್ಕತ್ತಾದ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಯುಶ್‌ ಕುಮಾರ್‌ ಜೈಸ್ವಾಲ್‌ನನ್ನು ಬಂಧಿಸಲಾಗಿದೆ. ಆರೋಪಿಯು ಅಪಾಯಕಾರಿ ಮನಸ್ಥಿತಿಯುಳ್ಳವನಾಗಿದ್ದು, ಅಪರಾಧ ಹಿನ್ನೆಲೆಯುಳ್ಳವರ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಪೋಸ್ಟ್‌ ಪ್ರಕಟಿಸಿದ ನಂತರ ಆರೋಪಿ ಆಯುಶ್‌ ನೇಪಾಳಕ್ಕೂ ಭೇಟಿ ನೀಡಿದ್ದು, ಅಲ್ಲಿ ಯಾರ್ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಕೂಡ ತನಿಖೆ ನಡೆಸುತ್ತಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 2025ರ ಜನವರಿ 13 ರಿಂದ ಫೆಬ್ರವರಿ 26ರ ತನಕ ಮಹಾ ಕುಂಭಮೇಳ ನಡೆಯಲಿದೆ. ಇದಕ್ಕೆ ಭರದ ಸಿದ್ಧತೆ ನಡೆದಿದೆ. ಈ ನಡುವೆ ಎದುರಾಗುತ್ತಿರುವ ಸುಳ್ಳು ಸುದ್ದಿ, ಸೈಬರ್ ಬೆದರಿಕೆಗಳನ್ನು
ತಡೆಯಲು ರಾಜ್ಯ ಪೊಲೀಸ್ ಇಲಾಖೆ ಡಿಜಿಟಲ್ ವಾರಿಯರ್ಸ್ ಅನ್ನು ನಿಯೋಜಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X