ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

Date:

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ ‘ಜನ ಸುರಾಜ್ ಪಾರ್ಟಿ’ ತನ್ನ ಮೊದಲ ಹಂತದ 5 ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

- Advertisement -

ಒಟ್ಟು 8 MLC ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 5 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಕ್ಷದ ವರಿಷ್ಠ ಪ್ರಶಾಂತ್ ಕಿಶೋರ್ ಹಾಗೂ ರಾಜ್ಯಾಧ್ಯಕ್ಷ ಮನೋಜ್ ಭಾರತಿ ಘೋಷಿಸಿದ್ದಾರೆ. ಉಳಿದ 3 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪಕ್ಷ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಇದನ್ನೂ ಓದಿ: ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

ಘೋಷಿತ ಅಭ್ಯರ್ಥಿಗಳ ಪಟ್ಟಿ:

ದರ್ಭಂಗಾ ಶಿಕ್ಷಕರ ಕ್ಷೇತ್ರ: ಸುರೇಶ್ ಪಿ. ರಾಯ್ (ಎಸ್.ಪಿ. ರಾಯ್)

ದರ್ಭಂಗಾ ಪದವೀಧರ ಕ್ಷೇತ್ರ: ರವೀಂದ್ರ ಕುಮಾರ್ ಯಾದವ್

ಸಾರಣ್ ಶಿಕ್ಷಕರ ಕ್ಷೇತ್ರ: ಅಫಾಕ್ ಅಹ್ಮದ್

ಪಟ್ನಾ ಶಿಕ್ಷಕರ ಕ್ಷೇತ್ರ: ಡಾ. ದಿವ್ಯ ಜ್ಯೋತಿ

ಕೋಸಿ ಪದವೀಧರ ಕ್ಷೇತ್ರ: ರಜನೀಶ್ ರಂಜನ್

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿ, ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ ನಂತರವೇ ಈ ಹೆಸರುಗಳನ್ನು ಆಖೈರುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದು ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದಾಗಿ ಪಕ್ಷವು ಭರವಸೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಚನ ಕಲ್ಯಾಣ | ಇವ ನಮ್ಮವನೆಂದೆನಿಸಯ್ಯಾ….

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ....

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...

ಬೀದರ್‌ | ಆಧುನಿಕ ಹೈನುಗಾರಿಕೆ: 2 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು...