ಬಿಹಾರ ಸಂಸದ ಪಪ್ಪು ಯಾದವ್‌ಗೆ ಬಿಷ್ಣೋಯ್ ತಂಡದಿಂದ ಮತ್ತೆ ಜೀವ ಬೆದರಿಕೆ

Date:

ಬಿಹಾರದ ಸಂಸದ ಪಪ್ಪು ಯಾದವ್‌ ಅವರಿಗೆ ಮತ್ತೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದಿದೆ. ಪಪ್ಪು ಯಾದವ್ ಅವರ ವೈಯಕ್ತಿಕ ಕಾರ್ಯದರ್ಶಿ ಮೊಹಮ್ಮದ್ ಸಾಧಿಕ್ ಅಲಾಂ ಅವರ ವಾಟ್ಸಾಪ್‌ಗೆ ಈ ಜೀವ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

- Advertisement -

ಮೊಹಮ್ಮದ್ ಸಾಧಿಕ್ ದೆಹಲಿಯ ಕಾನೌಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದ ವ್ಯಕ್ತಿಯೋರ್ವ ಪಪ್ಪು ಯಾದವ್ ಅವರಿಗೆ ಇದೇ ರೀತಿಯ ಬೆದರಿಕೆಯನ್ನು ಹಾಕಿದ್ದ. ಅದಾದ ಬಳಿಕ ಬಿಹಾರದ ಪೂರ್ಣಿಯಾ ಪೊಲೀಸರು ಆರೋಪಿ ಮಹೇಶ್ ಪಾಂಡೆಯನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಪ್ಪು ಯಾದವ್ ಹತ್ಯೆಗಾಗಿ ಆರು ವ್ಯಕ್ತಿಗಳ ಸಂಪರ್ಕ ಮಾಡಲಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಇನ್ನು ಎರಡನೇ ಬಾರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ ವ್ಯಕ್ತಿಯು ವಾಟ್ಸಾಪ್ ಚಾಟ್‌ನಲ್ಲಿ ಟರ್ಕಿಶ್ ನಿರ್ಮಿತ ಪಿಸ್ತೂಲ್‌ನ ಚಿತ್ರವನ್ನು ಸಹ ಹಂಚಿಕೊಂಡಿದ್ದಾನೆ. ಯಾದವ್‌ ಹತ್ಯೆಗೆ ಈ ಈ ಪಿಸ್ತೂಲ್ ಅನ್ನು ಬಳಸಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ; ಝಡ್ ಭದ್ರತೆ ಕೋರಿದ ಬಿಹಾರ ಸಂಸದ ಪಪ್ಪು ಯಾದವ್

ಶುಕ್ರವಾರ ಪೂರ್ಣಿಯಾದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಪಪ್ಪು ಯಾದವ್, “ಇದು ಮೊದಲ ಘಟನೆಯಲ್ಲ ಮತ್ತು ಪದೇ ಪದೇ ಬೆದರಿಕೆ ಬಂದಿದ್ದು, ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ. ಹಾಗೆಯೇ ಸಮಗ್ರ ತನಿಖೆಗೆ ಕರೆ ನೀಡಿದರು.

“ನಾವು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಇನ್ಸ್‌ಪೆಕ್ಟರ್ ಜನರಲ್ (ಐಜಿ), ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಗೃಹ ಸಚಿವರೂ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದೇವೆ. ಆದರೂ ಬೆದರಿಕೆ ಬರುತ್ತಲೇ ಇದೆ. ಬೆದರಿಕೆ ಹಾಕಿದ ವ್ಯಕ್ತಿ ತನಗೆ ಯಾರು ಬೆಂಬಲ ನೀಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರೂ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ” ಎಂದು ಹೇಳಿದರು.

ಯಾವುದೇ ರಾಜಕೀಯ ಉದ್ದೇಶಗಳು ಇದರ ಹಿಂದೆ ಇದೆಯೇ ಎಂದು ತಿಳಿಯಲು ಸಮಗ್ರ ತನಿಖೆಗೆ ಕರೆ ನೀಡಿದರು. ಬೆದರಿಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ, ಆದರೆ ಇನ್ನೂ ಕೂಡಾ ಬಂಧನವಾಗಿಲ್ಲ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...