ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೈಲು ನಿಲ್ದಾಣದಲ್ಲಿ ಸಾಮೂಹಿಕ ಅತ್ಯಾಚಾರ; ಓರ್ವ ಬಂಧನ

Date:

ದಿವಾಂಗ ತಂದೆಗೆ ಚಿಕಿತ್ಸೆ ಕೊಡಿಸಿ, ತನ್ನೂರಿಗೆ ಹೋಗಲು ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.

- Advertisement -

ಬಿಹಾರದ ಗೋಪಾಲ್‌ಗಂಜ್‌ನ ಸಸಮುಸಾ ರೈಲ್ವೇ ನಿಲ್ದಾಣದಲ್ಲಿ ಘಟನೆ ನಡೆದಿದೆ. ಪ್ರಕರಣದಲ್ಲಿ ಓರ್ವ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂತ್ರಸ್ತ ಯುವತಿ ತನ್ನ ತಂದೆಗೆ ನೇತ್ರ ಚಿಕಿತ್ಸೆ ಕೊಡಿಸಲು ಗೋಪಾಲ್‌ಗಂಜ್‌ಗೆ ಬಂದಿದ್ದರು. ಚಿಕಿತ್ಸೆಯ ಬಳಿಕ, ಸಂಜೆ ತಮ್ಮ ಊರಿಗೆ ಹಿಂದಿರುಗಲು ಸಸಮುಸಾ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಆದರೆ, ಆ ವೇಳೆಗಾಗಲೇ ರೈಲು ಹೊರಟು ಹೋಗಿತ್ತು. ಹೀಗಾಗಿ, ಇಡೀ‌ ರಾತ್ರಿ ಸಂತ್ರಸ್ತೆ ಮತ್ತು ಆಕೆಯ ತಂದೆ ರೈಲು ನಿಲ್ದಾಣದಲ್ಲೇ ಇರಬೇಕಾಯಿತು ಎಂದು ವರದಿಯಾಗಿದೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯುವತಿ ನೀರು ತರಲೆಂದು ಹೋದಾಗ ಆಕೆಯನ್ನು ಮೂವರು ಕಾಮುಕರು ಎಳೆದೊಯ್ದು ರೈಲು ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆ ಸಹಾಯಕ್ಕಾಗಿ ಕೂಗಿಕೊಂಡಾಗ, ಸ್ಥಳೀಯರು ಆಕೆಯ ಪರಿಸ್ಥಿತಿಯನ್ನು ಗಮನಿಸಿ, ಕುಚಾಯ್ಕೋಟ್ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು‌ ಗೋಪಾಲ್‌ಗಂಜ್‌ನ ಎಸ್‌ಪಿ ಅವಧೇಶ್ ದೀಕ್ಷಿತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...