ಇಂದಿರಾ, ರಾಜೀವ್, ಅಟಲ್ ವಿರುದ್ಧ 280ಗೂ ಅಧಿಕ ಚುನಾವಣೆ ಸ್ಪರ್ಧಿಸಿದ್ದ ಬಿಹಾರದ ‘ಧರ್ತಿ ಪಕಡ್’ ಬಾಜೋರಿಯಾ ಇನ್ನಿಲ್ಲ

Date:

‘ಧರ್ತಿ ಪಕಡ್’ ಎಂದೇ ಖ್ಯಾತಿ ಗಳಿಸಿದ್ದ ಬಿಹಾರದ ಹಿರಿಯ ಉದ್ಯಮಿ ಹಾಗೂ ಸಮಾಜ ಸೇವಕ ನಾಗರ್‌ಮಲ್ ಬಾಜೋರಿಯಾ (97) ಅವರು ಶುಕ್ರವಾರ ಪಟನಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

- Advertisement -

ಸ್ಥಳೀಯ ವಾರ್ಡ್ ಚುನಾವಣೆಯಿಂದ ಹಿಡಿದು ದೇಶದ ಅತ್ಯುನ್ನತ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಚುನಾವಣೆಗಳವರೆಗೆ ಒಟ್ಟು 280ಕ್ಕೂ ಹೆಚ್ಚು ಬಾರಿ ಸ್ಪರ್ಧಿಸಿ, ಸೋತರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವ ಮೂಲಕ ಅವರು ದೇಶಾದ್ಯಂತ ವಿಶಿಷ್ಟ ಗುರುತನ್ನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನೂ ಓದಿ: ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ

ರಾಯ್‌ಬರೇಲಿಯಲ್ಲಿ ಇಂದಿರಾ ಗಾಂಧಿ, ಅಮೇಟಿಯಲ್ಲಿ ರಾಜೀವ್ ಗಾಂಧಿ ಹಾಗೂ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಸಂಜಯ್ ಗಾಂಧಿ, ಎಲ್.ಕೆ. ಅಡ್ವಾಣಿ ಮತ್ತು ಪ್ರಣಬ್ ಮುಖರ್ಜಿ ಅವರಂತಹ ಪ್ರಭಾವಿ ರಾಜಕಾರಣಿಗಳ ವಿರುದ್ಧವೇ ನಾಗರ್‌ಮಲ್ ಸ್ಪರ್ಧಿಸಿದ್ದರು. “ನಾನು ಚುನಾವಣೆಯಲ್ಲಿ ಸೋಲುವುದಿಲ್ಲ, ಬದಲಿಗೆ ಜನರೇ ಸೋಲುತ್ತಾರೆ” ಎನ್ನುವುದು ಪ್ರಸಿದ್ಧ ಸಾಲಾಗಿತ್ತು.

ಅವಿಭಜಿತ ಭಾರತದ ಲಾಹೋರ್‌ನಲ್ಲಿ ಜನಿಸಿದ್ದ ಬಾಜೋರಿಯಾ ಕುಟುಂಬ, ಸ್ವಾತಂತ್ರ್ಯಾನಂತರ ಭಾಗಲ್ಪುರದಲ್ಲಿ ನೆಲೆಸಿ ವ್ಯಾಪಾರ ಪ್ರಾರಂಭಿಸಿತು. ತಮ್ಮ ಚುನಾವಣಾ ಪ್ರಚಾರದಲ್ಲಿ ಗಾಂಧೀಜಿ ಕಾಲದ ಹಳೆಯ ಕೈಗಡಿಯಾರ ಧರಿಸಿ, ಕೈಯಲ್ಲಿ ಘಂಟೆ ಬಾರಿಸುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. 2005ರ ಚುನಾವಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಕತ್ತೆಗಳ ಕೊರಳಿಗೆ ಭಿತ್ತಿಪತ್ರಗಳನ್ನು ಕಟ್ಟಿ ಅವರು ನಡೆಸಿದ್ದ ರ‍್ಯಾಲಿ ದೇಶದ ಗಮನ ಸೆಳೆದಿತ್ತು.

ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯರಾಗಿದ್ದ ಅವರು, ಬಡ ಹೆಣ್ಣುಮಕ್ಕಳ ಮದುವೆ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೊಳವೆಬಾವಿಗಳನ್ನು ತೋಡಿಸುವ ಮೂಲಕ ಭಾಗಲ್ಪುರದಲ್ಲಿ ಜನಪ್ರಿಯರಾಗಿದ್ದರು. ಅವರ ನಿಧನಕ್ಕೆ ಬಿಹಾರದ ರಾಜಕೀಯ ಮತ್ತು ಸಾಮಾಜಿಕ ವಲಯ ತೀವ್ರ ಕಂಬನಿ ಮಿಡಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...