ಪ್ರೇಮ ವಿವಾಹ: ಯುವತಿ ಕೂದಲು ಹಿಡಿದು ಎಳೆದೊಯ್ದು ಕ್ರೂರವಾಗಿ ಥಳಿಸಿದ ಪೋಷಕರು, ವಿಡಿಯೋ ವೈರಲ್

Date:

ಪ್ರೇಮ ವಿವಾಹವಾಗಿದ್ದಕ್ಕೆ ಪೋಷಕರು ಯುವತಿಯ ಕೂದಲು ಹಿಡಿದು ಎಳೆದೊಯ್ದು, ಕುತ್ತಿಗೆಗೆ ಕಾಲಿನಿಂದ ಒದ್ದು ಕ್ರೂರವಾಗಿ ಥಳಿಸಿದ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

- Advertisement -

22 ವರ್ಷದ ಪೂಜಾ ಕುಮಾರಿ ಎಂಬ ಯುವತಿ ಸುಮಾರು ಒಂದು ತಿಂಗಳ ಹಿಂದೆ 17 ವರ್ಷದ ಬಿಟ್ಟು ಕುಮಾರ್ ಎಂಬ ಹುಡುಗನನ್ನು ಮದುವೆಯಾಗಿದ್ದಳು. ಇಬ್ಬರೂ ಸಂಬಂಧಿಕರು ಮತ್ತು ಪರಸ್ಪರ ಹತ್ತಿರ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ. ಆದರೆ ಹುಡುಗ ಇನ್ನೂ 17 ವರ್ಷದವನಾಗಿದ್ದರಿಂದ ದೇವಾಲಯದಲ್ಲಷ್ಟೇ ಮದುವೆಯಾಗಿರಬಹುದು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ಪ್ರೇಮ ವಿವಾಹ: ಕುಟುಂಬಗಳಿಗೆ ಬಹಿಷ್ಕಾರ ಹಾಕುವುದಾಗಿ ಗ್ರಾಮ ಪಂಚಾಯತಿ ಬೆದರಿಕೆ

ಮದುವೆಯಾಗಿರುವ ವಿಷಯ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಎರಡೂ ಕುಟುಂಬಗಳು ಮತ್ತು ಗ್ರಾಮಸ್ಥರ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ಸಂಬಂಧ ಪಂಚಾಯತಿ ಸಭೆ ನಡೆದಿತ್ತು. ಈ ವೇಳೆ ಪಂಚಾಯತ್ ಈ ಜೋಡಿಯನ್ನು ಬೇರ್ಪಡಿಸುವ ನಿರ್ಧಾರಕ್ಕೆ ಬಂದಿದೆ. ಹುಡುಗನ ಕುಟುಂಬಕ್ಕೆ 1 ಲಕ್ಷ ರೂಪಾಯಿ ದಂಡ ವಿಧಿಸಿ, ಆ ಮೊತ್ತವನ್ನು ಹುಡುಗಿಯ ಕುಟುಂಬಕ್ಕೆ ಪಾವತಿಸುವಂತೆ ಗ್ರಾಮದ ಪಂಚಾಯಿತಿ ಆದೇಶಿಸಿತ್ತು.

ಈ ಪಂಚಾಯಿತಿ ಬಳಿಕ ಯುವತಿಯ ಪೋಷಕರು ಆಕೆಯನ್ನು ಅತ್ತೆ ಮನೆಯಿಂದ ಪೋಷಕರ ಮನೆಗೆ ಬರುವಂತೆ ಮನವೊಲಿಸಿದ್ದಾರೆ. ಆಕೆ ಪೋಷಕರ ಮನೆಗೆ ಬರುತ್ತಿದ್ದಂತೆ ಆಕೆಗೆ ಅಮಾನುಷವಾಗಿ ಥಳಿಸಿದ್ದಾರೆ.

ಜೂನ್ 8ರಂದು ಈ ಹಲ್ಲೆ ನಡೆದಿದೆ ಎಂದು ಹೇಳಲಾಗಿದ್ದು ಶನಿವಾರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಯುವತಿಯ ತಾಯಿ ಆಕೆಯ ಕೂದಲನ್ನು ಹಿಡಿದು ಆಕೆಗೆ ಕ್ರೂರವಾಗಿ ಥಳಿಸುತ್ತಿರುವುದು, ಕುತ್ತಿಗೆಯನ್ನು ಕಾಲಿನಿಂದ ಅದುಮುತ್ತಿರುವುದು ಕಂಡುಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಯುವತಿಯನ್ನು ರಕ್ಷಿಸಿ ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...