ಬಿಲ್ಕಿಸ್ ಬಾನೊ ತೀರ್ಪಿನಲ್ಲಿ ಅಪರಾಧಿಗಳ ಪಾಲಕ ಯಾರೆಂಬುದು ಬಹಿರಂಗಗೊಂಡಿದೆ: ರಾಹುಲ್ ಗಾಂಧಿ

Date:

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳನ್ನು ಬಂಧಮುಕ್ತಗೊಳಿಸಿದ ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿಪಕ್ಷಗಳು ಸ್ವಾಗತಿಸಿವೆ.

- Advertisement -

ತೀರ್ಪು ನ್ಯಾಯಕ್ಕೆ ಸಿಕ್ಕ ಜಯ ಎಂದಿರುವುದಲ್ಲದೆ ಅಪರಾಧಿಗಳನ್ನು ಪೋಷಿಸುವ ಬಿಜೆಪಿಯ ಮಹಿಳಾ ವಿರೋಧಿ  ನಿರ್ಧಾರವನ್ನು ವಿಪಕ್ಷ ನಾಯಕರು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸುಪ್ರೀಂ ತೀರ್ಪು ಬಿಲ್ಕಿಸ್ ಬಾನೊ ಅವರ ನಿರಂತರ ಹೋರಾಟದಿಂದ ಬಿಜೆಪಿ ಸರ್ಕಾರದ ಅಹಂ ವಿರುದ್ಧ ದೊರೆತ ನ್ಯಾಯದ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

“ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾಯಕಾರಿಯಾಗಿದೆ. ಇಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ದೇಶದಲ್ಲಿ ಅಪರಾಧಿಗಳ ಪೋಷಕರು ಯಾರೆಂಬುದನ್ನು ಮತ್ತೊಮ್ಮೆ ಹೇಳಿದೆ” ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಂತಿಮವಾಗಿ ನ್ಯಾಯವೇ ಮೇಲುಗೈ ಸಾಧಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಈ ಆದೇಶದೊಂದಿಗೆ ಬಿಜೆಪಿಯ ಮಹಿಳಾ ವಿರೋಧಿ ನೀತಿಗಳ ಮುಸುಕನ್ನು ತೆಗೆದುಹಾಕಲಾಗಿದೆ. ಇದರಿಂದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರ ಆತ್ಮವಿಶ್ವಾಸವು ಮತ್ತಷ್ಟು ಬಲಗೊಳ್ಳಲಿದೆ. ಧೈರ್ಯದೊಂದಿಗೆ ನಿರಂತರ ಹೋರಾಟ ಮಾಡಿದ ಬಿಲ್ಕಿಸ್‌ ಬಾನೋ ಅವರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಯಾವುದೇ ಸರ್ಕಾರವು ಇಂತಹ ಕ್ರಿಮಿನಲ್‌ಗಳನ್ನು ಬಿಡುಗಡೆಗೊಳಿಸುವ ಅಧಿಕಾರಕ್ಕೆ ಕೈಹಾಕಬಾರದು. ಈ ಬಗ್ಗೆ ಇನ್ನೂ ಮೂಕರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಳ ಬಯಸುತ್ತೇನೆ. ಕೇಂದ್ರ ಗೃಹ ಸಚಿವಾಲಯವು ಅಪರಾಧಿಗಳ ಮುಂಚಿತ ಬಿಡುಗಡೆಗೆ ಅನುಮೋದನೆ ನೀಡಿತ್ತು. ಮಹಿಳಾ ಸಬಲೀಕರಣದ ಬಗ್ಗೆ ಪ್ರಧಾನಮಂತ್ರಿಗಳ ಪೊಳ್ಳು ಭರವಸೆಗಳ ಹೇಳಿಕೆ ತೀರ್ಪಿನಿಂದ ಬಹಿರಂಗಗೊಂಡಿದೆ”ಎಂದಿದ್ದಾರೆ.

ವಿಪಕ್ಷಗಳಾದ ಟಿಎಂಸಿ, ಉದ್ಧವ್ ಠಾಕ್ರೆ ಬಣದ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಹಲವು ನಾಯಕರು, ಅಪರಾಧಿಗಳನ್ನು ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರಕ್ಕೆ ಕಪಾಳ ಮೋಕ್ಷ ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...